ಅಂಗನವಾಡಿ ಕೇಂದ್ರಗಳಲ್ಲೇ ಎಲ್ಕೆಜಿ, ಯುಕೆಜಿ ಆರಂಭಿಸಲು ಆಗ್ರಹಿಸಿ
ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ಆರಂಭ
ಕರುನಾಡ ಬೆಳಗು ಸುದ್ದಿ
ಬಳ್ಳಾರಿ, 14- ಕಳೆದ ಹಲವಾರು ವರ್ಷಗಳಿಂದ ಮಕ್ಕಳ ಆರೋಗ್ಯ ಪಾಲನೆ ಮತ್ತು ಅಕ್ಷರಾಭ್ಯಾಸದ ಜೊತೆಗೆ ಸರ್ಕಾರದ ಕುಟುಂಬ ಯೋಜನೆಗಳ ಮೂಲಕ ಉತ್ತಮ ಸಮಾಜ ನಿರ್ಮಾಣ ಕಾರ್ಯದಲ್ಲಿ ತೊಡಗಿಸಿಕೊಂಡಿರುವ ಅಂಗನವಾಡಿ ಕೇಂದ್ರಗಳಲ್ಲಿಯೇ ರಾಜ್ಯ ಸರ್ಕಾರ ಎಲ್ ಕೆ ಜಿ ಮತ್ತು ಯುಕೆಜಿ ತರಗತಿಗಳನ್ನು ಪ್ರಾರಂಭಿಸಬೇಕೆಂದು ಆಗ್ರಹಿಸಿ ಇಂದು ಜಿಲ್ಲಾಧಿಕಾರಿಗಳ ಕಚೇರಿ ಎದುರು ಬೃಹತ್ ಪ್ರತಿಭಟನಾ ಧರಣಿ ಹಮ್ಮಿಕೊಳ್ಳಲಾಗಿದೆ.
ಎಐಟಿಯುಸಿ, ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಫೆಡರೇಷನ್ ನೇತೃತ್ವದಲ್ಲಿ ಹಮ್ಮಿಕೊಂಡ ಪ್ರತಿಭಟನಾ ಧರಣಿಯಲ್ಲಿ ಮಾತನಾಡಿದ ಜಿಲ್ಲಾಧ್ಯಕ್ಷೆ ಎಸ್. ಅರ್ಕಾಣಿ ಅವರು, ಅಂಗನವಾಡಿ ಕೇಂದ್ರಗಳಲ್ಲಿ ಕಡ್ಡಾಯವಾಗಿ ಎಲ್ ಕೆ ಜಿ, ಮತ್ತು ಯುಕೆಜಿ ಪ್ರಾರಂಭಿಸಬೇಕು. ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರನ್ನ ಆಯ್ಕೆ ಮಾಡಿಕೊಳ್ಳಬೇಕು. ಅಂಗನವಾಡಿ ಬಾಡಿಗೆ ಕಟ್ಟಡಗಳಲ್ಲಿ, ಸ್ವಂತ ಕಟ್ಟಡಗಳಲ್ಲಿ ಎಲ್ ಕೆ ಜಿ, ಯುಕೆಜಿ ತರಗತಿಗಳನ್ನು ಪ್ರಾರಂಭಿಸಲು ಆವಕಾಶ ಕಲ್ಪಿಸಿಕೊಡಬೇಕು. ಮಕ್ಕಳಿಗೆ ಬೇಕಾಗುವ ಸಮವಸ್ತ್ರ, ಶೂ, ಬ್ಯಾಗ್, ಪಠ್ಯಪುಸ್ತಕಗಳನ್ನು ಅಂಗನವಾಡಿಗೆ ಪೂರೈಸಬೇಕು. ಅಂಗನವಾಡಿ ಕಾರ್ಯಕರ್ತೆಯರಿಗೆ ಮಕ್ಕಳಿಗೆ ಶಿಕ್ಷಣ ಬೋಧಿಸಲು ಹೆಚ್ಚಿನ ತರಬೇತಿಯನ್ನು ನೀಡಬೇಕು. ಎಸ್ಡಿಎಂಸಿ ಯೋಜನೆ ರದ್ದುಪಡಿಸಬೇಕು ಮತ್ತು ಶಾಲಾ ಪೂರ್ವ ಶಿಕ್ಷಣ ಬಲವರ್ಧನೆಗೊಳಿಸಬೇಕು. ಈ ಕಾರಣಕ್ಕಾಗಿ ಸರ್ಕಾರಕ್ಕೆ ಒತ್ತಾಯಿಸಿ ಈ ಧರಣಿ ಹಮ್ಮಿಕೊಳ್ಳಲಾಗಿದೆ ಎಂದರು.
ಕಲ್ಯಾಣ ಕರ್ನಾಟಕ ಭಾಗದಲ್ಲಿ ಎಐಟಿಯುಸಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ಇಂದಿನಿಂದ ಅನಿರ್ಧಿಷ್ಟಾವಧಿಗೆ ಅಂಗನವಾಡಿಗಳನ್ನು ಬಂದ್ ಮಾಡಿ, ಮೊಬೈಲ್ಗಳಲ್ಲಿ ಪೆÇೀಷಣ್ ಟ್ರ್ಯಾಕ್ ಮಾಹಿತಿಗಳನ್ನು ನೀಡದೇ, ಮಾತೃವಂದನಾ, ಭಾಗ್ಯಲಕ್ಷ್ಮಿ, ರೋಗ ನಿರೋಧಕ ಚುಚ್ಚುಮದ್ದು ಕಾರ್ಯಕ್ರಮ ಸೇರಿದಂತೆ ಎಲ್ಲಾ ಕಾರ್ಯಕ್ರಮಗಳನ್ನು ನಿಲ್ಲಿಸಿ ಅನಿರ್ಧಿಷ್ಟಾವಧಿ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗುತ್ತಿದೆ. ಕಲ್ಯಾಣ ಕರ್ನಾಟಕ ಭಾಗದಲ್ಲಿ ಬರುವ ಏಳು ಜಿಲ್ಲೆಗಳಲ್ಲಿ ತಾಲ್ಲೂಕು ಮತ್ತು ಜಿಲ್ಲಾ ಕೇಂದ್ರ
