1eda7986-8c00-40b6-a8d9-db7d42e07461

ಅಂಚೆ ಮತದಾನ ಜಾಗೃತಿಗಾಗಿ ಕ್ರಿಕೆಟ್ ಪಂದ್ಯ

ಕರುನಾಡ ಬೆಳಗು ಸುದ್ದಿ

ವಿಜಯನಗರ, 6- ಅಂಚೆ ಮತದಾನದ ಬಗ್ಗೆ ವಿಶೇಷ ಜಾಗೃತಿ ಮೂಡಿಸಲು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯಿಂದ ಏಪ್ರೀಲ್ 6ರಂದು ಕ್ರಿಕೆಟ್ ಪಂದ್ಯವನ್ನು ಆಯೋಜಿಸಲಾಗಿತ್ತು.

ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಜಿಲ್ಲಾಧಿಕಾರಿಗಳಾದ ಎಂ.ಎಸ್.ದಿವಾಕರ, ಸಹಾಯಕ ಆಯುಕ್ತರಾದ ಮೊಹಮ್ಮದ್ ಅಲಿ ಅಕ್ರಮ ಷಾಹ, ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರಾದ ಮಂಜುನಾಥ ಹೆಚ್.ಎಸ್., ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ರಾಮಚಂದ್ರಪ್ಪ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗಿಯಾಗಿದ್ದರು.

ಮಾಧ್ಯಮ ಪ್ರತಿನಿಧಿಗಳೊಂದಿಗೆ ನಡೆದ ಕ್ರಿಕೆಟ್ ಪಂದ್ಯದಲ್ಲಿ ಜಿಲ್ಲಾಧಿಕಾರಿಗಳು ಹಾಗೂ ಸಹಾಯಕ ಆಯುಕ್ತರು ಬ್ಯಾಟ್ ಹಿಡಿದು ಮತ್ತು ಬೌಲ್ ಮಾಡುವ ಮೂಲಕ ಪಂದ್ಯದಲ್ಲಿ ಪಾಲ್ಗೊಂಡು ಇನ್ನೀತರ ಅಧಿಕಾರಿಗಳಿಗೆ ಸ್ಫೂರ್ತಿ ತುಂಬಿದರು.

ಜಿಲ್ಲಾಧಿಕಾರಿಗಳು ಹಾಗೂ ಸಹಾಯಕ ಆಯುಕ್ತರು ಇರುವ ಕ್ರಿಕೆಟ್ ತಂಡವು ಅತಿ ಹೆಚ್ಚು ರನ್ ಗಳಿಸುವ ಮೂಲಕ ವಿಜಯಶಾಲಿಯಾಯಿತು.

ಜಿಲ್ಲಾ ಕ್ರೀಡಾಂಗಣಕ್ಕೆ ಆಗಮಿಸಿ ಕ್ರಿಕೆಟ್ ಪಂದ್ಯದ ವೀಕ್ಷಣೆ ನಡೆಸಿದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸದಾಶಿವ ಪ್ರಭು ಬಿ ಅವರು ವಿಜೇತ ತಂಡಕ್ಕೆ ಪ್ರಶಸ್ತಿ ಫಲಕ ನೀಡಿ ಅಭಿನಂದಿಸಿದರು.

ಕ್ರಿಕೆಟ್ ಪಂದ್ಯದಲ್ಲಿ ಭಾಗವಹಿಸಿದ ಮಾಧ್ಯಮ ಪ್ರತಿನಿಧಿಗಳ ತಂಡಕ್ಕೆ ಸಹ ಅಭಿನಂದಿಸಿದರು.

Leave a Reply

Your email address will not be published. Required fields are marked *

error: Content is protected !!