ರಾಜ್ಯ ಮಾನವ ಹಕ್ಕುಗಳ ಆಯೋಗದ ಜಿಲ್ಲಾ ಪ್ರವಾಸ ಜುಲೈ ೦೫ ರಂದು ಪೂರ್ವಭಾವಿ ಸಭೆ (2)

ಅಧಿಕಾರಿಗಳು ಸಭೆಗೆ ಸಂಪೂರ್ಣ ಮಾಹಿತಿ ಹಾಗೂ

ಸಿದ್ದತೆಯೊಂದಿಗೆ ಹಾಜರಾಗಿ : ಸಾವಿತ್ರಿ ಬಿ.ಕಡಿ

ಕರುನಾಡ ಬೆಳಗು ಸುದ್ದಿ

ಕೊಪ್ಪಳ, 5- ಜುಲೈ 10 ರಂದು ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರು ಹಾಗೂ ಸದಸ್ಯರು ಜಿಲ್ಲೆಗೆ ಭೇಟಿ ನೀಡಿ, ಸಭೆ ಹಾಗೂ ಸಿಟ್ಟಿಂಗ್ಸ್ ನಡೆಸುತ್ತಿದ್ದು ಈ ಸಭೆಗೆ ಎಲ್ಲ ಇಲಾಖೆಗಳ ಅಧಿಕಾರಿಗಳು ಕಡ್ಡಾಯವಾಗಿ ಸಂಪೂರ್ಣ ಮಾಹಿತಿ ಹಾಗೂ ಸಿದ್ದತೆಯೊಂದಿಗೆ ಖುದ್ದಾಗಿ ಹಾಜರಗಬೇಕು ಎಂದು ಅಪರ ಜಿಲ್ಲಾಧಿಕಾರಿಗಳಾದ ಸಾವಿತ್ರಿ ಬಿ.ಕಡಿ ಅವರು ಅಧಿಕಾರಿಗಳಿಗೆ ಸೂಚಿಸಿದರು.

ಕರ್ನಾಟಕ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರು ಹಾಗೂ ಸದಸ್ಯರು ಜುಲೈ 10 ರಂದು ಕೊಪ್ಪಳ ಜಿಲ್ಲೆಯಲ್ಲಿ ಪ್ರವಾಸ ಮಾಡಲಿದ್ದು ಈ ಕುರಿತ ಪೂರ್ವಸಿದ್ದತೆಗಾಗಿ ಸಂಬಂಧಪಟ್ಟ ಇಲಾಖಾ ಅಧಿಕಾರಿಗಳೊಂದಿಗೆ ಶುಕ್ರವಾರದಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಕರ್ನಾಟಕ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರು ಹಾಗೂ ಸದಸ್ಯರು ಜುಲೈ 10 ರಂದು ಕೊಪ್ಪಳ ಜಿಲ್ಲೆಯಲ್ಲಿ ಪ್ರವಾಸ ಮಾಡಲಿದ್ದು, ಅಂದು ಜಿಲ್ಲಾ ಪಂಚಾಯತಿಯ ಜೆ.ಎಚ್.ಪಟೇಲ್ ಸಭಾಂಗಣದಲ್ಲಿ ಆಯೋಗದಲ್ಲಿ ಬಾಕಿ ಇರುವ ಹೆಚ್.ಆರ್.ಸಿ ಪ್ರಕರಣಗಳ ವಿಚಾರಣೆ ಹಾಗೂ ಪ್ರಕರಣಗಳ ಕುರಿತು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಸಭೆಯನ್ನು ನಡೆಸಲಿದ್ದಾರೆ. ಅದರೊಂದಿಗೆ ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಲಿದ್ದಾರೆ. ಆದ್ದರಿಂದ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ಸಭೆಗೆ ಬರುವಾಗ ಸಾರ್ವಜನಿಕರಿಗೆ ಒದಗಿಸಲಾಗಿರುವ ಸರ್ಕಾರದ ವಿವಿಧ ಸೌಲಭ್ಯಗಳ ಬಗ್ಗೆ ಮಾಹಿತಿಗಳು, ಬಡವರಿಗೆ ವಸತಿ ಸೌಲಭ್ಯವನ್ನು ಕಲ್ಪಿಸಿರುವ ಬಗ್ಗೆ, ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಸೌಲಭ್ಯಗಳು, ದೇವದಾಸಿ ಪದ್ಧತಿಯಲ್ಲಿ ನೊಂದವರಿಗೆ ಪುನರ್ವಸತಿ ಕ್ರಮಗಳ ಬಗ್ಗೆ, ಲೈಂಗಿಕ ಶೋಷಣೆಗೆ ಒಳಗಾದವರು/ ಲೈಂಗಿಕ ಕಾರ್ಯಕರ್ತರು ಇವರುಗಳಿಗೆ ಸಂಬಂಧಿಸಿದ ಪುನರ್ವಸತಿ ವಿಷಯಗಳು ಹಾಗೂ ಅಲ್ಪಸಂಖ್ಯಾತರು ಇವರುಗಳಿಗೆ ಒದಗಿಸಲಾಗಿರುವ ಸೌಲಭ್ಯಗಳ ಬಗ್ಗೆ ಮತ್ತು ಪಾದಚಾರಿ ಮಾರ್ಗಗಳನ್ನು ಅತಿಕ್ರಮಣ ಮಾಡಿಕೊಂಡಿರುವ ಬಗ್ಗೆ ಹಾಗೂ ಸೌಲಭ್ಯಗಳನ್ನು ಸಾರ್ವಜನಿಕರಿಗೆ ತಲುಪಿಸುವ ನಿಟ್ಟಿನಲ್ಲಿ ಸರ್ಕಾರಿಂದ ಹೊರಡಿಸಲಾಗಿರುವ ಸಂಬಂಧಿಸಿದ ಕಾಯ್ದೆಗಳು/ನೀತಿ ನಿಯಮಗಳು ಹಾಗೂ ಇತರೆ ಮಾರ್ಗಸೂಚಿಗಳ ಪ್ರತಿಗಳನ್ನು ಹಾಗೂ ಸದರಿ ಸೌಲಭ್ಯಗಳನ್ನು ವಿಸ್ತರಿಸಿರುವ ಬಗ್ಗೆ ಅಂಕಿ ಅಂಶಗಳ ಮಾಹಿತಿಗಳನ್ನು ಒದಗಿಸುವುದು ಹಾಗೂ ಸರ್ಕಾರದ ವಿವಿಧ ಯೋಜನೆಗಳ ವಿವರಗಳು ಹಾಗೂ ಅವುಗಳಿಗೆ ಮಂಜೂರಾಗಿರುವ ಅನುದಾನ ಹಾಗೂ ಫಲಾನುಭವಿಗಳ ಅಂಕಿ ಅಂಶಗಳೊಂದಿಗೆ ವಿವರಗಳೊಂದಿಗೆ ಮತ್ತು ತಮ್ಮಲ್ಲಿ ಬಾಕಿ ಇರುವ ಹೆಚ್.ಆರ್.ಸಿ ಪ್ರಕರಣಗಳ ಕುರಿತು ಕೈಗೊಂಡ ಕ್ರಮದ ಬಗ್ಗೆ ಸಂಪೂರ್ಣ ಮಾಹಿತಿಯೊಂದಿಗೆ, ಪ್ರತಿನಿಧಿಯನ್ನು ಕಳುಹಿಸದೇ ಖುದ್ದಾಗಿ ಸಭೆಗೆ ಹಾಜರಾಗಬೇಕು ಎಂದು ಅಪರ ಜಿಲ್ಲಾಧಿಕಾರಿಗಳು ಅಧಿಕಾರಿಗಳಿಗೆ ತಿಳಿಸಿದರು.

ಅಧ್ಯಕ್ಷರನ್ನೊಳಗೊಂಡ ತಂಡವು ಅಂದು ಜಿಲ್ಲಾ ಕಾರಾಗೃಹ, ವಸತಿ ನಿಲಯಗಳು, ಆಸ್ಪತ್ರೆಗಳಿಗೆ ಭೇಟಿ ನೀಡಿ ಸ್ಥಳೀಯ ಪರಿವೀಕ್ಷಣೆ ಕೈಗೊಳ್ಳಲಿದ್ದಾರೆ. ಆದ್ದರಿಂದ ಯಾವುದೇ ರೀತಿಯ ಅವ್ಯವಸ್ಥೆ ಉಂಟಾಗದAತೆ ಸಂಬAಧಿಸಿದ ಇಲಾಖೆಗಳ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕು. ಮಾನವ ಹಕ್ಕುಗಳ ಉಲ್ಲಂಘನೆ ಪ್ರಕರಣಗಳಲ್ಲಿ ಸಾರ್ವಜನಿಕರು ನೇರವಾಗಿ ಆಯೋಗಕ್ಕೆ ದೂರು ಸಲ್ಲಿಸಿದ್ದಲ್ಲಿ ಅಂತಹ ಪ್ರಕರಣಗಳ ವಿಚಾರಣೆಯನ್ನು ಸಹ ಅಧ್ಯಕ್ಷರು ನಡೆಸಬಹುದು. ಆದ್ದರಿಂದ ಯಾವುದೇ ಇಲಾಖೆಗಳ ಅಧಿಕಾರಿಗಳು ತಮ್ಮಲ್ಲಿ ಬಾಕಿ ಇರುವ ಹಾಗೂ ವಿಲೇಯಾದ ಎಲ್ಲ ಎಚ್.ಆರ್.ಸಿ ಪ್ರಕರಣಗಳ ಪ್ರಸ್ತುತ ಸ್ಥಿತಿ-ಗತಿಯ ವರದಿಯೊಂದಿಗೆ ಕಡ್ಡಾಯವಾಗಿ ಹಾಜರಗಾಬೇಕು ಎಂದು ಅವರು ಅಧಿಕಾರಿಗಳಿಗೆ ಸೂಚಿಸಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತಿಯ ಉಪ ಕಾರ್ಯದರ್ಶಿಗಳಾದ ಮಲ್ಲಿಕಾರ್ಜುನ ತೊದಲಬಾಗಿ, ಹೆಚ್ಚುವರಿ ಎಸ್‌ಪಿ ಹೇಮಂತಕುಮಾರ, ಸಹಾಯಕ ಆಯುಕ್ತರಾದ ಕ್ಯಾ.ಮಹೇಶ ಮಾಲಗಿತ್ತಿ, ತಹಶೀಲ್ದಾರ ವಿಠ್ಠಲ್ ಚೌಗಲಾ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರಾದ ರಾಜು ತಳವಾರ, ನಗರಸಭೆ ಪೌರಾಯುಕ್ತರಾದ ಗಣಪತಿ, ಜಿಲ್ಲಾಧಿಕಾರಿ ಕಚೇರಿ ಸಿಬ್ಬಂದಿ ನಾಗರಾಜ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!