ಅಲೆಮಾರಿ ಅಭಿವೃದ್ಧಿ ನಿಗಮದ ವಿವಿಧ ಯೋಜನೆಯಡಿ ಅರ್ಜಿ ಆಹ್ವಾನ
ಕರುನಾಡ ಬೆಳಗು ಸುದ್ದಿ
ಕೊಪ್ಪಳ, 04- ಸಮಾಜ ಕಲ್ಯಾಣ ಇಲಾಖೆಯಡಿ ಬರುವ ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮದ ವ್ಯಾಪ್ತಿಗೆ ಬರುವ ಅಲೆಮಾರಿ ಸಮುದಾಯದವರಿಗೆ ಆರ್ಥಿಕ ಅಭಿವೃದ್ಧಿ ಹೊಂದಲು 2023-24ನೇ ಸಾಲಿನ ವಿವಿಧ ಯೋಜನೆಗಳಡಿ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ನಿಗಮದಿಂದ ಅಲೆಮಾರಿ ಸಮುದಾಯದ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದವರಿಗೆ ಸ್ವಯಂ-ಉದ್ಯೋಗ(ನೇರ ಸಾಲ) ಯೋಜನೆ(ಘಟಕ ವೆಚ್ಚ ರೂ.1.00 ಲಕ್ಷ), ಉದ್ಯಮಶೀಲತಾ ಯೋಜನೆ(ಘಟಕ ವೆಚ್ಚ ರೂ.2.00 ಲಕ್ಷ), ಉದ್ಯಮಶೀಲತಾ ಯೋಜನೆ(ಸರಕು ಸಾಗಾಣಿಕೆ/ನಾಲ್ಕು ಚಕ್ರಗಳ ವಾಹನ ಹಾಗೂ ಇತ್ಯಾದಿ, ಘಟಕ ವೆಚ್ಚ ರೂ.4.00 ಲಕ್ಷ), ಭೂ ಒಡೆತನ ಯೋಜನೆಯಡಿ ಆರ್ಥಿಕ ಸೌಲಭ್ಯ ಒದಗಿಸಲಾಗುವುದು.
ಪರಿಶಿಷ್ಟ ಪಂಗಡದವರಿಗೆ ಮೈಕ್ರೋ ಕ್ರೆಡಿಟ್ ಯೋಜನೆ, ಗಂಗಾ ಕಲ್ಯಾಣ ಯೋಜನೆಯಡಿ ಸೌಲಭ್ಯ ಒದಗಿಸಲಾಗುವುದು. ಅರ್ಹ ಫಲಾಪೇಕ್ಷಿಗಳು ನವೆಂಬರ್ 30 ರೊಳಗೆ ಸೇವಾಸಿಂಧು ಪೋರ್ಟಲ್ ಮೂಲಕ ಕರ್ನಾಟಕ ಒನ್, ಬೆಂಗಳೂರು ಒನ್, ಗ್ರಾಮ ಒನ್ ಕೇಂದ್ರಗಳಲ್ಲಿ ಅರ್ಜಿಗಳನ್ನು ಸಲ್ಲಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.