c395a4a4-9c81-4cf2-9862-821bbfae19e7

ಆನೆಗೊಂದಿ ಉತ್ಸವದ ಲಾಂಛನ ಬಿಡುಗಡೆಯೊಂದಿಗೆ ಉತ್ಸವಕ್ಕೆ ವಿದ್ಯುಕ್ತ ಚಾಲನೆ

ಕರುನಾಡ ಬೆಳಗು ಸುದ್ದಿ
ಕೊಪ್ಪಳ, – ವಿಜಯನಗರ ಸಾಮ್ರಾಜ್ಯದ ತೊಟ್ಟಿಲು ಆನೆಗೊಂದಿ ಉತ್ಸವ-2024ರ ಹಿನ್ನೆಲೆಯಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ಎಸ್ ತಂಗಡಗಿ ಅವರು ಮಾರ್ಚ್ 5ರಂದು                ಲೋಗೋ ಬಿಡುಗಡೆ ಮೂಲಕ ಆನೆಗೊಂದಿ ಉತ್ಸವಕ್ಕೆ ವಿದುಕ್ತವಾಗಿ ಚಾಲನೆ ನೀಡಿದರು.
ಇದೇ ಮಾರ್ಚ್ 11 ಮತ್ತು 12ರಂದು ವಿಜಯನಗರ ಸಾಮ್ರಾಜ್ಯದ ಗತವೈಭವ ಸಾರುವ ಆನೆಗೊಂದಿ ಉತ್ಸವ-2024ರ ಆಚರಿಸಲು ನಿರ್ಧರಿಸಲಾಗಿದ್ದು, ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಗಣದಲ್ಲಿ ಮಂಗಳವಾರ ಉತ್ಸವದ ಲೋಗೋ ಬಿಡುಗಡೆ ಕಾರ್ಯಕ್ರಮ ನಡೆಯಿತು.
ಈ ಸಂದರ್ಭದಲ್ಲಿ ಗಂಗಾವತಿ ಶಾಸಕರಾದ ಜಿ.ಜನಾರ್ಧನ ರೆಡ್ಡಿ, ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ರತ್ನಂ ಪಾಂಡೆಯ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಯಶೋಧ ವಂಟಗೊಡಿ, ಅಪರ ಜಿಲ್ಲಾಧಿಕಾಗಳಾದ ಸಾವಿತ್ರಿ ಬಿ ಕಡಿ, ಕೊಪ್ಪಳ ಉಪವಿಭಾಗಾಧಿಕಾರಿಗಳಾದ ಕ್ಯಾಪ್ಟನ್ ಮಹೇಶ ಮಾಲಗಿತ್ತಿ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

 

 

Leave a Reply

Your email address will not be published. Required fields are marked *

error: Content is protected !!