ಆನೆಗೊಂದಿ ಉತ್ಸವ : ಮಾರ್ಚ್ 11 ರಂದು ಉದ್ಘಾಟನಾ ಸಮಾರಂಭ
ಕರುನಾಡ ಬೆಳಗು ಸುದ್ದಿ
ಕೊಪ್ಪಳ,10- ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಪ್ರವಾಸೋದ್ಯಮ ಇಲಾಖೆ, ಬೆಂಗಳೂರು ಹಾಗೂ ಕೊಪ್ಪಳ ಜಿಲ್ಲಾಡಳಿತದ ಸಹಯೋಗದಲ್ಲಿ ಮಾರ್ಚ್ 11 ರಂದು ಆನೆಗೊಂದಿಯಲ್ಲಿ ಆನೆಗೊಂದಿ ಉತ್ಸವ – 2024 ಕಾರ್ಯಕ್ರಮ ನಡೆಯಲಿದ್ದು, ಅಂದು ಸಂಜೆ 06.30 ಗಂಟೆಗೆ ಆನೆಗೊಂದಿಯ ತಳವಾರಘಟ್ಟ ರಸ್ತೆಯ ಶ್ರೀರಂಗದೇವರಾಯಲು ವೇದಿಕೆಯಲ್ಲಿ ಉತ್ಸವದ ಉದ್ಘಾಟನಾ ಸಮಾರಂಭ ನಡೆಯಲಿದೆ.
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ಎಸ್. ತಂಗಡಗಿ ಅವರು ಉತ್ಸವದ ಉದ್ಘಾಟನೆ ನೆರವೇರಿಸುವರು.
ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರ, ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಇಲಾಖೆ ಸಚಿವರಾದ ಹೆಚ್.ಕೆ.ಪಾಟೀಲ್, ಕರ್ನಾಟಕ ವಿಧಾನಸಭೆಯ ವಿರೋಧ ಪಕ್ಷದ ಮುಖ್ಯ ಸಚೇತಕರು ಹಾಗೂ ಕುಷ್ಟಗಿ ಶಾಸಕರಾದ ದೊಡ್ಡನಗೌಡ ಹನುಮಗೌಡ ಪಾಟೀಲ ಮತ್ತು ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರು ಹಾಗೂ ಯಲಬುರ್ಗಾ ಶಾಸಕರಾದ ಬಸವರಾಜ ರಾಯರಡ್ಡಿ ಅವರು ಕಾರ್ಯಕ್ರಮದ ಘನ ಉಪಸ್ಥಿತಿ ವಹಿಸುವರು. ಗಂಗಾವತಿ ಶಾಸಕರಾದ ಜಿ.ಜನಾರ್ಧನ ರೆಡ್ಡಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು.
ಮುಖ್ಯ ಅತಿಥಿಗಳಾಗಿ ಸಂಸದರಾದ ಕರಡಿ ಸಂಗಣ್ಣ, ಕೊಪ್ಪಳ ಶಾಸಕರಾದ ಕೆ.ರಾಘವೇಂದ್ರ ಹಿಟ್ನಾಳ ವಿಧಾನ ಪರಿಷತ್ ಸದಸ್ಯರುಗಳಾದ ಶಶೀಲ್ ಜಿ.ನಮೋಶಿ, ಡಾ.ಚಂದ್ರಶೇಖರ್ ಬಿ.ಪಾಟೀಲ, ಶರಣಗೌಡ ಅನ್ನದಾನಗೌಡ ಪಾಟೀಲ ಬಯ್ಯಾಪೂರ ಹಾಗೂ ಹೇಮಲತಾ ನಾಯಕ, ಆನೆಗೊಂದಿ ಗ್ರಾಮ ಪಂಚಾಯತ ಅಧ್ಯಕ್ಷರಾದ ಕೆ.ಮಹಾದೇವಿ ಅವರು ಪಾಲ್ಗೊಳ್ಳುವರು.
ವಿಶೇಷ ಆಹ್ವಾನಿತರಾಗಿ ಆನೆಗೊಂದಿಯ ರಾಜ ವಂಶಸ್ಥರಾದ ಲಲಿತಾ ರಾಣಿ ಶ್ರೀರಂಗದೇವರಾಯಲು, ರಾಣಿ ಚಂದ್ರಕಾAತ ದೇವಿ ರಾಜ ಶ್ರೀ ಅಚ್ಯುತ ದೇವರಾಯ, ರಾಜಾ ಶ್ರೀ ರಾಮ ದೇವರಾಯ ತಂ.ತಿರುಮಲದೇವರಾಯ, ವೀರ ರಾಘವ ರಾಜು ತಂ. ಎನ್.ಕೆ.ರಾಮರಾಜು, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸರ್ಕಾರದ ಕಾರ್ಯದರ್ಶಿಗಳಾದ ಡಾ.ಎಂ.ಎನ್.ಅಜಯ್ ನಾಗಭೂಷಣ, ಪ್ರವಾಸೋದ್ಯಮ ಇಲಾಖೆ ಸರ್ಕಾರದ ಕಾರ್ಯದರ್ಶಿಗಳಾದ ಸಲ್ಮಾ ಕೆ.ಫಾಹಿಮ್, ಕೃಷ್ಣಭಾಗ್ಯ ಜಲ ನಿಗಮ ನಿಯಮಿತದ ವ್ಯವಸ್ಥಾಪಕ ನಿರ್ದೇಶಕರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಕೆ.ಪಿ.ಮೋಹನರಾಜ, ಪ್ರವಾಸೋದ್ಯಮ ಇಲಾಖೆ ನಿರ್ದೇಶಕರಾದ ಡಾ.ವಿ. ರಾಮ ಪ್ರಸಾತ್ ಮನೋಹರ್, ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತರಾದ ಕೃಷ್ಣ ಭಾಜಪೇಯಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕರಾದ ಡಾ.ಧರಣಿದೇವಿ ಮಾಲಗಿತ್ತಿ ಅವರು ಆಗಮಿಸುವರು.
ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ರತ್ನಂ ಪಾಂಡೆಯ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಯಶೋಧಾ ಸುನೀಲ್ ವಂಟಗೋಡಿ, ಕೊಪ್ಪಳ ಜಿಲ್ಲೆಯ ಎಲ್ಲಾ ಚುನಾಯಿತ ಪ್ರತಿನಿಧಿಗಳು, ಕೈಗಾರಿಕೋದ್ಯಮಿಗಳು, ಹೋಟೆಲ್ ಉದ್ಯಮಿಗಳು, ವ್ಯವಸ್ಥಾಪಕರು ಹಾಗೂ ಸಂಘ-ಸAಸ್ಥೆಗಳ ಪದಾಧಿಕಾರಿಗಳು, ವಿವಿಧ ಇಲಾಖೆಗಳು ಮತ್ತು ಜಿಲ್ಲೆಯ ಸಮಸ್ತ ನಾಗರಿಕರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.
