ಆರೋಗ್ಯ ಶಿಬಿರದ ಸೌಲಭ್ಯ ಸದುಪಯೋಗ ಪಡೆದುಕೊಳ್ಳಿ
ಕರುನಾಡ ಬೆಳಗು ಸುದ್ದಿ
ಗಂಗಾವತಿ, 3- ತಾಲೂಕಿನ ಕೇಸರಹಟ್ಟಿ ಗ್ರಾಮದಲ್ಲಿ ನಾಲಾ ಹೂಳೆತ್ತುವ ಕಾಮಗಾರಿ ಸ್ಥಳದಲ್ಲಿ ಗ್ರಾ.ಪಂ. ಹಾಗೂ ಆರೋಗ್ಯ ಇಲಾಖೆಯಿಂದ ನರೇಗಾ ಕೂಲಿಕಾರರಿಗೆ ಬುಧವಾರ ಉಚಿತ ಆರೋಗ್ಯ ಶಿಬಿರ ನಡೆಸಲಾಯಿತು.
ಗ್ರಾಪಂ ಕಾರ್ಯದರ್ಶಿ ಲಕ್ಷ್ಮೀದೇವಿ ಅವರು ಮಾತನಾಡಿ, ಎಲ್ಲ ಕೂಲಿಕಾರರು ಆರೋಗ್ಯ ಶಿಬಿರದ ಸೌಲಭ್ಯ ಸದುಪಯೋಗ ಪಡೆದುಕೊಳ್ಳಬೇಕು. ಆರೋಗ್ಯವೇ ಮಹಾಭಾಗ್ಯವಾಗಿದ್ದು, ಆರೋಗ್ಯದ ಬಗ್ಗೆ ನಿಷ್ಕಾಳಜಿ ತೋರಕೂಡದು. ನರೇಗಾ ಕೂಲಿಕಾರರಿಗೆ ಆಯೋಜಿಸುವ ಶಿಬಿರದ ಲಾಭ ಪಡೆದುಕೊಳ್ಳಬೇಕು. ಕಾಲಕಾಲಕ್ಕೆ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕು. ಎಂದರು.
ಕೇಸರಹಟ್ಟಿ ಗ್ರಾಪಂ ಸದಸ್ಯ ನಿರುಪಾದಿಗೌಡ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಬಡಕೂಲಿಕಾರರಿಗೆ ಉಚಿತ ಆರೋಗ್ಯ ಶಿಬಿರ ತುಂಬಾ ಅನುಕೂಲವಾಗಿದೆ. ಯಾರು ಕೂಡ ಹಿಂಜರಿಯದೇ ತಪಾಸಣೆ ಮಾಡಿಕೊಳ್ಳಬೇಕು. ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು ಎಂದರು.
ಕೂಲಿಕಾರರಿಗೆ ಬಿ.ಪಿ., ಶುಗರ್, ಆರೋಗ್ಯ ತಪಾಸಣೆ ನಡೆಸಲಾಯಿತು.
ಗ್ರಾಪಂ ಸದಸ್ಯರಾದ ಬಸವರಾಜ ಜೇಕಿನ್, ದೇವರಾಜ ಬಡಿಗೇರ, ಎಸ್ ಡಿಎ ಪ್ರಶಾಂತ, ಗಂಗಾವತಿ ಉಪವಿಭಾಗ ಆಸ್ಪತ್ರೆಯ ಆಪ್ತ ಸಮಾಲೋಚಕರಾದ ಶಿವಾನಂದ ನಾಯಕರ್, ಪ್ರಯೋಗಶಾಲಾ ತಾಂತ್ರಿಕ ಅಧಿಕಾರಿಗಳಾದ ನಿಂಗಪ್ಪ ಎಂ., ತಾ.ಪಂ. ಐಇಸಿ ಸಂಯೋಜಕರಾದ ಬಾಳಪ್ಪ ತಾಳಕೇರಿ, ತಾಂತ್ರಿಕ ಸಹಾಯಕರಾದ ಯೋಗೇಶ, ಹೊಸಬೆಳಕು ಸಂಸ್ಥೆಯ ವಲಯ ಮೇಲ್ವಿಚಾರಕಿ ಜಯಶ್ರೀ ನಾಯಕ ಉಪಸ್ಥಿತರಿದ್ದರು.
