ಆರ್ ವೈಎಂಇಸಿ ಕಾಲೇಜ್ ಅಧ್ಯಕ್ಷರಾಗಿ, ಜಾನಿಕುಂಟೆ ಬಸವರಾಜ್
ಕರುನಾಡ ಬೆಳಗು ಸುದ್ದಿ
ಬಳ್ಳಾರಿ, 15- ನಗರದ ಪ್ರತಿಷ್ಠಿತ ವಿದ್ಯಾ ಸಂಸ್ಥೆಗಳಲ್ಲಿ ಒಂದಾದ ಆರ್ ವೈ ಎಂ ಸಿ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ಜಾನಿಕುಂಟೆ ಬಸವರಾಜ್ ಇಂದು ತಮ್ಮ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿದರು.
ಈ ಸಂದರ್ಭದಲ್ಲಿ ಅವರು ಮಾತನಾಡುತ್ತಾ, ಇಂಜಿನಿಯರಿಂಗ್ ಕಾಲೇಜ್ ವಿದ್ಯಾರ್ಥಿಗಳ ಅದುನಾತನ ಸೌಕರ್ಯಗಳ ವ್ಯವಸ್ಥೆ ಮಾಡುವುದರ ಜೊತೆಗೆ ಕಾಲೇಜ್ ಅಭಿವೃದ್ಧಿಗೆ ಶ್ರಮಿಸುವುದಾಗಿ ತಿಳಿಸಿದರು.
ಈ ಸಂದರ್ಭದಲ್ಲಿ ಕಾಲೇಜಿನ ಪ್ರಿನ್ಸಿಪಲ್ ಡಾಕ್ಟರ ಹನುಮಂತರೆಡ್ಡಿ, ಮತ್ತು ಉಪನ್ಯಾಸಕರು ಕಾಲೇಜಿನ ಸಿಬ್ಬಂದಿ ಪಾಲ್ಗೊಂಡಿದ್ದರು.
