
ಲೋಕಸಭೆ ಚುನಾವಣೆ-2024
ಇಂದು ಕೊಪ್ಪಳದಲ್ಲಿ ಕಾಂಗ್ರೆಸ ಚುನಾವಣೆ ಪೂರ್ವಭಾವಿ ಸಭೆ
ಕರುನಾಡ ಬೆಳಗು ಸುದ್ದಿ
ಕೊಪ್ಪಳ, -೦೭ ನಾಳೆ ಬುಧವಾರ ೦೮ ರದು ಬೆಳಿಗ್ಗೆ 11:00ಕ್ಕೆ ಕೊಪ್ಪಳ ನಗರದ ಶಿವಶಾಂತವೀರ ಮಂಗಲಭವನದಲ್ಲಿ ಕೊಪ್ಪಳ ಲೋಕಸಭೆ ಚುನಾವಣೆ ಪೂರ್ವಭಾವಿ ಸಭೆ ಜರುಗಲಿದೆ.
ಕಾಂಗ್ರೆಸ್ ಪಕ್ಷದ ಕೊಪ್ಪಳ ಲೋಕಸಭಾ ಚುನಾವಣೆ ವೀಕ್ಷಕರಾಗಿ ನೇಮಕಗೊಂಡಿರುವ ಅಬಕಾರಿ ಸಚಿವರು ಆರ್.ಬಿ.ತಿಮ್ಮಾಪೂರ ಸಾಹೇಬರು ಆಗಮಿಸಲಿದ್ದು, ಕೊಪ್ಪಳ ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಹಾಗೂ ಜಿಲ್ಲಾ ಉಸ್ತುವಾರು ಸಚಿವ ಶಿವರಾಜ ತಂಗಡಗಿ , ಮಾಜಿ ಸಚಿವರು ಯಲಬುರ್ಗಾ ವಿಧಾನಸಭಾ ಕ್ಷೇತ್ರದ ಹಾಲಿ ಶಾಸಕರು ಬಸವರಾಜ ರಾಯರಡ್ಡಿ, ಕೊಪ್ಪಳ ವಿಧಾನಸಭಾ ಕ್ಷೇತ್ರದ ಶಾಸಕರು ಕೆ.ರಾಘವೇಂದ್ರ ಹಿಟ್ನಾಳ,ಮಸ್ಕಿ ವಿಧಾನಸಭಾ ಕ್ಷೇತ್ರದ ಶಾಸಕ ಆರ್.ಬಸನಗೌಡ ತುರ್ವಿಹಾಳ ,ಸಿಂಧನೂರು ವಿಧಾನಸಭಾ ಕ್ಷೇತ್ರದ ಶಾಸಕ ಹಂಪನಗೌಡ ಬಾದರ್ಲಿ,ಸಿರುಗುಪ್ಪ ವಿಧಾನಸಭಾ ಕ್ಷೇತ್ರದ ಶಾಸಕ ಬಿ.ಎಂ.ನಾಗರಾಜ.
ಮಾಜಿ ಶಾಸಕರುಗಳಾದ ಅಮರೇಗೌಡ ಬಯ್ಯಾಪೂರ, ಇಕ್ಬಾಲ್ ಅನ್ಸಾರಿ, ಹಸನಸಾಬ್ ದೋಟಿಹಾಳ, ಮಾಜಿ ಸಂಸದ ಶಿವರಾಮಗೌಡ ಸೇರಿದಂತೆ ಅನೇಕ ಹಿರಿಯ ಮುಖಂಡರು, ಜಿಲ್ಲಾ ಕಾಂಗ್ರೆಸ್ ಸಮಿತಿ ಪದಾಧಿಕಾರಿಗಳು,ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಎಂಟೂ ವಿಧಾನಸಭಾ ಕ್ಷೇತ್ರದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳು,ಮಹಿಳಾ ಬ್ಲಾಕ್ ಅಧ್ಯಕ್ಷರುಗಳು,ಜಿಲ್ಲಾ ಕಾಂಗ್ರೆಸ್ ಮುಂಚೂಣಿ ಘಟಕಗಳ ಅಧ್ಯಕ್ಷರು ಪದಾಧಿಕಾರಿಗಳು,ಮಹಿಳಾ ಘಟಕಗಳ ಪದಾಧಿಕಾರಿಗಳು,ನಗರಸಭೆ,ಪುರಸಭೆ,ಪಟ್ಟಣ ಪಂಚಾಯತಿಗಳ ಹಾಲಿ ಮಾಜಿ ಸದಸ್ಯರು, ಜಿ ಪಂ,ತಾ ಪಂ ಮಾಜಿ ಸದಸ್ಯರುಗಳು ಭಾಗವಹಿಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.