2c136fae-be38-4577-97e1-318669006cc9

ಇಂದು 10ನೇ ಅಂತಾರಾಷ್ಟ್ರೀಯ ಯೋಗ ದಿನ ಆಚರಣೆ

ಕರುನಾಡ ಬೆಳಗು ಸುದ್ದಿ

ವಿಜಯನಗರ, 20- ಕೇಂದ್ರ ಆಯುಷ್ ಮಂತ್ರಾಲಯ, ರಾಷ್ಟಿçÃಯ ಆಯುಷ್ ಅಭಿಯಾನ ಆಯುಷ್ ಇಲಾಖೆ ಬೆಂಗಳೂರು, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ವಿಜಯನಗರ ಜಿಲ್ಲೆಯ ಸಮಸ್ಥ ಯೋಗ ಸಂಸ್ಥೆಗಳ ಸಹಯೋಗದೊಂದಿಗೆ 10ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯು ರೈಲ್ವೆ ಸ್ಟೇಷನ್ ರಸ್ತೆಯಲ್ಲಿನ ಫ್ರಿಡಂ ಪಾರ್ಕ್ನಲ್ಲಿ ಜೂನ್ 21 ರಂದು ಬೆಳಗ್ಗೆ 6 ಗಂಟೆಗೆ ನಡೆಯಲಿದೆ.

ವಸತಿ, ವಕ್ಫ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು ಹಾಗೂ ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಝಡ್. ಜಮೀರ್ ಅಹ್ಮದ ಖಾನ್ ಅವರು ಉದ್ಘಾಟಿಸುವರು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಆಯುಷ್ ಸೇವೆಗಳ ಸಚಿವರಾದ ದಿನೇಶ ಗುಂಡೂರಾವ್ ಅವರು ಘನ ಉಪಸ್ಥಿತಿ ವಹಿಸುವರು. ವಿಜಯನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಹೆಚ್.ಆರ್. ಗವಿಯಪ್ಪ ಅವರು ಅಧ್ಯಕ್ಷತೆ ವಹಿಸುವರು.

ವಿಶೇಷ ಆಹ್ವಾನಿತರಾಗಿ ಸಂಸದರಾದ ಈ. ತುಕಾರಾಂ ಹಾಗೂ ಪ್ರಭಾ ಮಲ್ಲಿಕಾರ್ಜುನ ಅವರು ಉಪಸ್ಥಿತರಿರುವರು.

ಮುಖ್ಯ ಅತಿಥಿಗಳಾಗಿ ಶಾಸಕರಾದ ನೇಮಿರಾಜ ನಾಯ್ಕ, ಡಾ.ಶ್ರೀನಿವಾಸ, ಕೃಷ್ಣಾ ನಾಯ್ಕ, ಎಂ.ಪಿ.ಲತಾ ಮಲ್ಲಿಕಾರ್ಜುನ, ಬಿ. ದೇವೇಂದ್ರಪ್ಪ, ಡಾ.ಚಂದ್ರಶೇಖರ್ ಬಿ. ಪಾಟೀಲ್, ಶಶೀಲ್ ಜಿ.ನಮೋಷಿ, ವೈ.ಎಂ. ಸತೀಶ್, ನಗರಸಭೆ ಅಧ್ಯಕ್ಷೆ ಎ.ಲತಾ, ವಸತಿ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳು ಹಾಗೂ ವಿಜಯನಗರ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ನವೀನ್‌ರಾಜ್ ಸಿಂಗ್, ಆಯುಷ್ ಇಲಾಖೆಯ ಆಯುಕ್ತರಾದ ಬಿ.ಶ್ರೀನಿವಾಸಲು, ಉಪ ನಿರ್ದೇಶಕರಾದ ಡಾ.ಹರೀಶ್ ಬಾಬು, ಜಿಲ್ಲಾಧಿಕಾರಿಗಳಾದ ಎಂ.ಎಸ್. ದಿವಾಕರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಸದಾಶಿವ ಪ್ರಭು ಬಿ., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಶ್ರೀಹರಿಬಾಬು, ಅಪರ ಜಿಲ್ಲಾಧಿಕಾರಿಗಳಾದ ಅನುರಾಧ ಜಿ ಉಪಸ್ಥಿತರಿರುವರು ಎಂದು ಜಿಲ್ಲಾ ಆಯುಷ್ ಅಧಿಕಾರಿ ಡಾ.ಸುಜಾತ ಎಸ್. ಪಾಟೀಲ್ ಅವರು ತಿಳಿಸಿದ್ದಾರೆ.

ವಿವಿಧ ಇಲಾಖೆಯ ಅಧಿಕಾರಿಗಳು, ಶ್ರೀಪತಂಜಲಿ ಯೋಗ ಸಂಸ್ಥೆ, ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರಿಯ ವಿದ್ಯಾಲಯ, ಸಮಾಜ ಕಲ್ಯಾಣ ಇಲಾಖೆ, ಸ್ಕೌಟ್ಸ್ ಮತ್ತು ಗೈಡ್ಸ್, ರಾಷ್ಟ್ರೀಯ ಸೇವಾ ಯೋಜನೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ವಿಜಯನಗರ ಘಟಕ, ಟಿ.ಎಂ.ಎ.ಇ. ಆಯುರ್ವೇದಿಕ್ ಕಾಲೇಜ್ ಹೊಸಪೇಟೆ, ಛೇಂಬರ್ ಆಫ್ ಕಾಮರ್ಸ್, ಜೆ.ಸಿ.ಐ. ಹೊಸಪೇಟೆ, ರೋಟರಿ ಕ್ಲಬ್ ಹೊಸಪೇಟೆ, ಎ.ಎಫ್.ಐ., ನೀಮ್, ಆರ್ಟ್ ಆಫ್ ಲಿವಿಂಗ್ ಹಾಗೂ ಸಮಸ್ತ ಯೋಗ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ವಿಜಯನಗರ ಜಿಲ್ಲೆ ಆಯುಷ್ ವೈದ್ಯಾಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಭಾಗವಹಿಸಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!