
ಮಾಜಿ ಸಚಿವ ಇಕ್ಬಾಲ್ ಅನ್ಸಾರಿ ಇವರಿಗೆ ವಿಧಾನ ಪರಿಷತ್ ಶಾಸಕರಾಗಿ ಮಾಡಿ ಯುವ ಕಾಂಗ್ರೆಸ್ ತಾಲೂಕ ಉಪಾಧ್ಯಕ್ಷ ಅಮೀರ್ ಬಾಷಾ ಮನವಿ
ಕರುನಾಡ ಬೆಳಗು ಸುದ್ದಿ
ಸಿರುಗುಪ್ಪ,27- ಮಾಜಿ ಸಚಿವರಾದ ಇಕ್ಬಾಲ್ ಅನ್ಸಾರಿ ಅವರನ್ನು ವಿಧಾನಪರಿಷತ್ ಶಾಸಕರಾಗಿ ಸ್ಥಾನ ನೀಡಬೇಕು ಎಂದು ಸಿರುಗುಪ್ಪ ತಾಲೂಕು ಯುವ ಕಾಂಗ್ರೆಸ್ ಉಪಾಧ್ಯಕ್ಷ ಅಮೀರ್ ಭಾಷಾ ಅವರು ಕಾಂಗ್ರೆಸ್ ಹೈಕಮಾಂಡ್ ಗೆ ಮನವಿ ಮಾಡಿದ್ದಾರೆ.
ಪತ್ರಕರ್ತರೊಂದಿಗೆ ಅವರು ಮಾತನಾಡಿ ಮಾಜಿ ಸಚಿವ ಇಕ್ಬಾಲ್ ಅನ್ಸಾರಿ ಗಂಗಾವತಿ ವಿಧಾನಸಭಾ ಕ್ಷೇತ್ರದಲ್ಲಿ ಎರಡು ಬಾರಿ ಶಾಸಕರಾಗಿ ಸಚಿವರಾಗಿ ಅಭಿವೃದ್ಧಿ ಮತ್ತು ಜನಪರ ಕಾರ್ಯದಲ್ಲಿ ಗುರುತಿಸಿಕೊಂಡಿದ್ದಾರೆ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕೆಲವೇ ಮತಗಳಿಂದ ಅಂತರದಿಂದ ಪರಾಭವ ಗೊಂಡಿದ್ದರು ಇಕ್ಬಾಲ್ ಅನ್ಸಾರಿ ಅವರು ಕಲ್ಯಾಣ ಕರ್ನಾಟಕದ ಭಾಗದ ಎಲ್ಲಾ ಕ್ಷೇತ್ರಗಳಲ್ಲಿ ತಮ್ಮದೇ ಆದ ಹಿಡಿತ ಮತ್ತು ಪ್ರಭಾವ ಹೊಂದಿದ್ದಾರೆ ಕಾಂಗ್ರೆಸ್ ಪಕ್ಷದ ನಿಷ್ಠಾವಂತ ನಿಸ್ವಾರ್ಥದಿಂದ ಕೆಲಸ ಮಾಡಿರುವ ಅವರು ರಾಜ್ಯದಲ್ಲಿ ಅತಿ ಹೆಚ್ಚು ಕಾಂಗ್ರೆಸ್ ಪಕ್ಷದ ನೋಂದಣಿ ಮಾಡಿ ಸಕ್ರಿಯ ರಾಜಕಾರಣಿ ಯಾಗಿದ್ದಾರೆ ಕಾಂಗ್ರೆಸ್ ತತ್ವ ಸಿದ್ಧಾಂತಕ್ಕೆ ಬದ್ಧರಾಗಿರುವ ಪ್ರಭಾವಿ ಅಲ್ಪಸಂಖ್ಯಾತ ನಾಯಕರಾಗಿ ಹೊರಹಮ್ಮಿದ್ದಾರೆ.
ಅನ್ಸಾರಿ ಅವರು ಸೋತಿದ್ದರೂ ಅವರು ಈಗ ಜನಪರ ಮತ್ತು ಸಾಮಾಜಿಕ ಕಾರ್ಯದಲ್ಲಿ ತೊಡಗಿಸಿಕೊಂಡು ಕಾರ್ಯಕರ್ತರಿಗೆ ಉತ್ಸಾಹ ತುಂಬುತ್ತಿದ್ದಾರೆ ಹೀಗಾಗಿ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರಿಂದ ತೆರವಾಗಿರುವ ವಿಧಾನಪರಿಷತ್ ಸದಸ್ಯ ಸ್ಥಾನವನ್ನು ಇಕ್ಬಾಲ್ ಅನ್ಸಾರಿ ಅವರಿಗೆ ನೀಡಿ ರಾಜ್ಯ ಸರ್ಕಾರದಲ್ಲಿ ಮಹತ್ವದ ಜವಾಬ್ದಾರಿ ನೀಡಬೇಕು ಎಂದು ಅವರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿ ಮನವಿ ಮಾಡಿದ್ದಾರೆ.