ಈಜಲು ಹೋದ ಯುವಕ ನೀರುಪಾಲು
ಕರುನಾಡ ಬೆಳಗು ಸುದ್ದಿ
ಗಂಗಾವತಿ, 19- ತಾಲೂಕಿನ ಸಾಣಾಪುರ ಗ್ರಾಮದ ಕೆರೆಯಲ್ಲಿ ಈಜಲು ಹೋದ ಯುವಕನೋರ್ವ ನೀರುಪಾಲಾದ ಘಟನೆ ಗ್ರಾಮಿಣ ಪೋಲಿಸ ಠಾಣೆ ವ್ಯಾಪ್ತಿಯಲ್ಲಿ ಜರುಗಿದೆ.
ಕೊಪ್ಪಳ ತಾಲೂಕಿನ ಕುಣಿಕೇರಿ ಗ್ರಾಮದ ನಿವಾಸಿಯಾದ ಮಂಜುನಾಥ (19) ತನ್ನ ನಾಲ್ವರು ಸ್ನೇಹಿತರೊಂದಿಗೆ ಈಜಲು ಹೋಗಿದ್ದ. ಈ ವೇಳೆ ನೀರಲ್ಲಿ ಮುಳುಗಿ ಮೃತಪಟ್ಟಿದ್ದಾನೆ.
ಸ್ಥಳಕ್ಕೆ ಬಂದ ಅಗ್ನಿಶಾಮಕ ದಳದಿಂದ ಕಾರ್ಯಾಚರಣೆ ನಡೆಸಿ ಮೃತದೇಹವನ್ನು ಹೊರತೆಗೆದಿದ್ದಾರೆ. ಎಂದು ಗಂಗಾವತಿ ಗ್ರಾಮೀಣ ಪೊಲೀಸ್ ಠಾಣಾ ಪಿಐ ಸೋಮಶೇಖರ ಜುಠಲ ತಿಳಿಸಿದ್ದಾರೆ.
ಆಕ್ರಂದನ : ವಿಷಯ ತಿಳಿಯುತ್ತಿದಂತೆ ಮೃತನ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
