
ಈಶಾನ್ಯ ಪದವೀಧರ ಕ್ಷೇತ್ರದ ಚುನಾವಣೆಯ : ಸಂತೆ ಜಾತ್ರೆ ರದ್ದುಪಡಿಸಿ ಆದೇಶ
ಕರುನಾಡ ಬೆಳಗು ಸುದ್ದಿ
ವಿಜಯನಗರ, 1- ಕರ್ನಾಟಕ ಈಶಾನ್ಯ ಪದವೀಧರರ ಕ್ಷೇತ್ರದ ದ್ವೈವಾರ್ಷಿಕ ಚುನಾವಣೆ-2024ರ ಮತದಾನವು ಜೂನ್ 03ರಂದು ನಡೆಯಲಿದ್ದು, ವಿಜಯನಗರ ಜಿಲ್ಲೆಯ ವ್ಯಾಪ್ತಿಯಲ್ಲಿ ಈ ಮತದಾನ ಪ್ರಕ್ರಿಯೆಯು ಮುಕ್ತ ಹಾಗೂ ಶಾಂತಿಯುತವಾಗಿ ನಡೆಯಲು ಅನುಕೂಲವಾಗುವಂತೆ ಹಾಗೂ ಯಾವುದೇ ಅಹಿತಕರ ಘಟನೆಗಳು ಸಂಭವಿಸದAತೆ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ಹಿತದೃಷ್ಟಿಯಿಂದ ಜೂನ್ 03ರಂದು ವಿಜಯನಗರ ಜಿಲ್ಲೆಯಾದ್ಯಂತ ಚುನಾವಣೆ ಪ್ರದೇಶದ ವ್ಯಾಪ್ತಿಯಲ್ಲಿ ಸಂತೆ-ಜಾತ್ರೆಗಳನ್ನು ರದ್ದುಪಡಿಸಿ ಜಿಲ್ಲಾ ದಂಡಾಧಿಕಾರಿಗಳು ಆಗಿರುವ ಜಿಲ್ಲಾಧಿಕಾರಿಗಳಾದ ಎಂ.ಎಸ್.ದಿವಾಕರ ಅವರು ಆದೇಶ ಹೊರಡಿಸಿದ್ದಾರೆ.