
ಉಪಪ್ರಾದೇಶಿಕ ವಿಜ್ಞಾನ ಕೇಂದ್ರದಲ್ಲಿ ಕೆಂಪೇಗೌಡ ಜಯಂತಿ ಕಾರ್ಯಕ್ರಮ
ಕರುನಾಡ ಬೆಳಗು ಸುದ್ದಿ
ಕೊಪ್ಪಳ, 27- ಕೊಪ್ಪಳ ಉಪಪ್ರಾದೇಶಿಕ ವಿಜ್ಞಾನ ಕೇಂದ್ರದಲ್ಲಿ ಜೂನ್ 27 ರಂದು ನಾಡಪ್ರಭು ಕೆಂಪೇಗೌಡರ ಜಯಂತಿಯನ್ನು ಆಚರಿಸಲಾಯಿತು.
ನಾಡಪ್ರಭು ಕೆಂಪೇಗೌಡರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ನಂತರ ಮಾತನಾಡಿದ ವಿಜ್ಞಾನ ಕೇಂದ್ರದ ಕ್ಯೂರೇಟರ್ ಮೈಲಾರಪ್ಪ ಅವರು, ಬೆಂಗಳೂರು ನಿರ್ಮಾತೃ ಕೆಂಪೇಗೌಡರ ಹೆಸರು ಅವರು ಮಾಡಿದ ಜನಪರ ಯೋಜನೆಗಳಿಂದಾಗಿ ನಾಡಿನ ಇತಿಹಾಸದಲ್ಲಿ ಅಜರಾಮರವಾಗಿ ಉಳಿದಿದೆ. ಇಂತಹ ಬೃಹತ್ ನಗರವನ್ನು ಮುಂದಾಲೋಚನೆಯಿಂದ ತುಂಬಾ ಯೋಜನಾಬದ್ಧವಾಗಿ ಕಟ್ಟಿದ ನಾಡಪ್ರಭು ಕೆಂಪೇಗೌಡರ ಸಾಹಸಗಾಥೆ ನಮಗೆಲ್ಲರಿಗೂ ಮಾದರಿಯಾಗಿದೆ ಎಂದು ಕೆಂಪೇಗೌಡರ ಕೊಡುಗೆಗಳ ಬಗ್ಗೆ, ಅವರ ಜೀವನ ಚರಿತ್ರೆಯ ಬಗ್ಗೆ ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಉಪಪ್ರಾದೇಶಿಕ ವಿಜ್ಞಾನ ಕೇಂದ್ರದ ಶಿಕ್ಷಣ ಸಹಾಯಕ ಫಕೀರಸಾಬ್, ತಾಂತ್ರಿಕ ಸಹಾಯಕ ಮಹಾಲಿಂಗಪ್ಪ, ತಂತ್ರಜ್ಞ ಶಂಕ್ರಪ್ಪ, ನಿಯೋಜಿತ ಸಿಬ್ಬಂದಿ ಫಯಾಜುದ್ದೀನ್, ಗೋಪಾಲರಾವ್ ಹಾಗೂ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಜಿಲ್ಲಾ ಪ್ರಯೋಗಾಲಯದ ಕಿರಿಯ ವಿಶ್ಲೇಷಣೆಗಾರರಾದ ರುಕ್ಮಿಣಿ, ಭೂವಿಜ್ಞಾನಿ ನಬೀರ್ ಅಸುಲ್, ನೀರಿನ ಮಾದರಿಗಳ ಸಂಗ್ರಹಕೋಶ ಉಸ್ತುವಾರಿ ಅರ್ಜುನ್, ನೀರಿನ ಮಾದರಿ ಸಂಗ್ರಹಗಾರ ಭಾಷಾಸಾಬ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.