
ಕನಕಗಿರಿ ಉತ್ಸವ : ಅಂತಿಮ ಹಂತದ ಸಿದ್ಧತೆ ಪರಿಶೀಲಿಸಿದ ಜಿಲ್ಲಾ ಉಸ್ತುವಾರಿ ಸಚಿವರು
ಕರುನಾಡ ಬೆಳಗು ಸುದ್ದಿ
ಕೊಪ್ಪಳ,1- ಮಾರ್ಚ್ 2 ಮತ್ತು 3ರಂದು ನಡೆಯಲಿರುವ ಐತಿಹಾಸಿಕ ಪುಣ್ಯ ಕ್ಷೇತ್ರವಾದ ಕನಕಗಿರಿ ಉತ್ಸವದ ಅಂತಿಮ ಹಂತದ ಸಿದ್ಧತೆಗಳನ್ನು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ಶಿವರಾಜ್ ಎಸ್ ತಂಗಡಗಿ ಅವರು ಮಾರ್ಚ್ 1ರಂದು ಪರಿಶೀಲಿಸಿದರು.
ಜಿಲ್ಲಾ ಉಸ್ತುವಾರಿ ಸಚಿವರು, ವೇದಿಕೆ, ಮಾಧ್ಯಮ ಕೇಂದ್ರ, ಗಣ್ಯರು, ಸಾರ್ವಜನಿಕರಿಗೆ ಕೂಡುವ ಆಸನಗಳ ವ್ಯವಸ್ಥೆ, ಕುಡಿಯುವ ನೀರು, ವಾಹನಗಳ ಪಾರ್ಕಿಂಗ್ ವ್ಯವಸ್ಥೆ ಸೇರಿದಂತೆ ಇನ್ನಿತರ ಸಿದ್ಧತೆಗಳ ವೀಕ್ಷಣೆ ಮಾಡಿದರು.
ಈ ಸಂದರ್ಭದಲ್ಲಿ ಈ ಸಂದರ್ಭದಲ್ಲಿ ಕೊಪ್ಪಳ ಉಪವಿಭಾಗಾಧಿಕಾರಿಗಳಾದ ಕ್ಯಾಪ್ಟನ್ ಮಹೇಶ ಮಾಲಗಿತ್ತಿ, ಕನಕಗಿರಿ ತಹಶೀಲ್ದಾರರಾದ ವಿಶ್ವನಾಥ ಮುರಡಿ, ತಾಲ್ಲೂಕು ಪಂಚಾಯತ್ ಇಓ ಚಂದ್ರಶೇಖರ ಕಂದಕೂರ ಸೇರಿದಂತೆ ಜನಪ್ರತಿನಿಧಿಗಳು, ವಿವಿಧ ಇಲಾಖೆಗಳ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.