2c136fae-be38-4577-97e1-318669006cc9

ಕನಕಗಿರಿ ಪ.ಪಂ : ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

ಕರುನಾಡ ಬೆಳಗು ಸುದ್ದಿ

ಕೊಪ್ಪಳ, 19- 2024-25ನೇ ಸಾಲಿನ ದೀನದಯಾಳ್ ಅಂತ್ಯೋದಯ ಯೋಜನೆ-ನಲ್ಮ್ ಅಭಿಯಾನ ರಾಜ್ಯ ಯೋಜನೆಯಡಿ ಕನಕಗಿರಿ ಪಟ್ಟಣ ಪಂಚಾಯತಿ ವ್ಯಾಪ್ತಿಯಲ್ಲಿ ಸಾಲ ಸೌಲಭ್ಯಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಸ್ವಯಂ ಉದ್ಯೋಗಕ್ಕಾಗಿ ಸಾಲ ಸೌಲಭ್ಯಕ್ಕಾಗಿ 6 ಜನ ಫಲಾನುಭವಿಗಳಿಗೆ, 14 ಸ್ವ,ಸಹಾಯ ಗುಂಪು ರಚನೆ ಗುರಿ, 7 ಗುಂಪುಗಳಿಗೆ ಸ್ವಯಂ ಉದ್ಯೋಗಕ್ಕಾಗಿ ಸಾಲ ಸೌಲಭ್ಯ (ಕ್ರೆಡಿಟ್ ಲಿಂಕೇಜ್), 1 ಪ್ರದೇಶ ಮಟ್ಟದ ಒಕ್ಕೂಟ ರಚನೆಗಾಗಿ ಫಲಾನುಭವಿಗಳು ಅರ್ಜಿ ಸಲ್ಲಿಸಬಹುದು.

ಅರ್ಜಿ ವಿತರಿಸಲು ಜೂನ್ 20 ಕೊನೆಯ ದಿನವಾಗಿದ್ದು, 18 ರಿಂದ 43 ವರ್ಷ ವಯೋಮಾನದ ಅರ್ಹ ಫಲಾನುಭವಿಗಳು ನಿಗದಿತ ನಮೂನೆಯಲ್ಲಿ ಅರ್ಜಿಯನ್ನು ಭರ್ತಿ ಮಾಡಿ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ (ಪ್ರಸಕ್ತ ಸಾಲಿನದ್ದು), ವಿದ್ಯಾರ್ಹತೆ ಪ್ರಮಾಣ ಪತ್ರ, ಮತದಾರರ ಗುರುತಿನ ಚೀಟಿ, ಆಧಾರ್ ಕಾರ್ಡ್, ಬಿ.ಪಿ.ಎಲ್ ರೇಶನ್ ಕಾರ್ಡ್ಗಳೊಂದಿಗೆ ಜೂನ್ 28 ರೊಳಗೆ ಪಟ್ಟಣ ಪಂಚಾಯತಿ ಕಾರ್ಯಾಲಯಕ್ಕೆ ಸಲ್ಲಿಸಬೇಕು ಎಂದು ಪ.ಪಂ. ಮುಖ್ಯಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!