3f1e4319-9bba-458e-b22f-03cc8efe4396

ಕಾಂಗ್ರೆಸ್ ನಿಂದ ತಾರತಮ್ಯ ಆಡಳಿತ 

ಹಾಲಪ್ಪ ಆಚಾರ್ ಆರೋಪ

ಕರುನಾಡ ಬೆಳಗು ಸುದ್ದಿ

ಯಲಬುರ್ಗಾ, 07-  ರಾಜ್ಯ ಕಾಂಗ್ರೆಸ್ ಸರಕಾರ ಜನವಿರೋಧಿ ನೀತಿ ಅನುಸರಿಸುತ್ತಿದೆ, ಜಿಲ್ಲೆ, ತಾಲೂಕಿನ ಅಭಿವೃದ್ಧಿಗೆ ಕಾಂಗ್ರೆಸ್ ಕೊಡುಗೆ ಶೂನ್ಯ ಎಂದು ಮಾಜಿ ಸಚಿವ ಹಾಲಪ್ಪ ಆಚಾರ್ ಹೇಳಿದರು.

ಅವರು ಪಟ್ಟಣದ ಶಾದಿಮಹಲ್ ನಲ್ಲಿ ಶನಿವಾರ ಬಿಜೆಪಿ ಪಕ್ಷದ ವತಿಯಿಂದ ಯಲಬುರ್ಗಾ ಮಂಡಲದ ಕಾರ್ಯಕಾರಿಣಿ ಸಭೆ ಮತ್ತು ಗಾಂವ್ ಚಲೋ ಅಭಿಯಾನ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು.
ರಾಜ್ಯದೆಲ್ಲಡೆ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಲೋಕಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲವು ಸಾಧಿಸಬೇಕಿದ್ದು ತಕ್ಷಣದಿಂದಲೇ ಕಾರ್ಯಪ್ರವೃತ್ತರಾಗಬೇಕು,ಹೈಕಮಾಂಡ್ ಯಾರಿಗೆ ಟಿಕೆಟ್ ನೀಡಲಿ ಅವರ ಗೆಲುವಿಗೆ ಶ್ರಮಿಸೋಣ ವಿಶೇಷವಾಗಿ ಯಲಬುರ್ಗಾ ವಿಧಾನಸಭಾ ಕ್ಷೇತ್ರದಲ್ಲಿ ಹಚ್ಚಿನ ಮತಗಳನ್ನು ಪಡೆಯಲು ಪ್ರತಿಯೊಬ್ಬರು ಶ್ರಮಿಸೋಣ ಎಂದರು.
ಬಿಜೆಪಿ ಜಿಲ್ಲಾ ಅಧ್ಯಕ್ಷ ನವೀನಕುಮಾರ ಗುಳಗಣ್ಣನವರ ಮಾತನಾಡಿ ಬಿಜೆಪಿ ಹೈಕಮಾಂಡ ನನ್ನ ಮೇಲೆ ವಿಶ್ವಾಸವಿರಿಸಿ ಜಿಲ್ಲಾಧ್ಯಕ್ಷ ಸ್ಥಾನ ನೀಡಿದ್ದು ಅದನ್ನು ಸಮರ್ಥವಾಗಿ ನಿಭಾಯಿಸಬೇಕಿದೆ ಅದಕ್ಕೆ ಎಲ್ಲರ ಸಹಕಾರ ಅತ್ಯಾವಶ್ಯಕವಾಗಿದೆ, ರಾಜ್ಯ ಕಾಂಗ್ರೆಸ್ ಸರಕಾರ ಬರೀ ಗ್ಯಾರೆಂಟಿ ನೆಪದಲ್ಲಿ ಮುಳಗಿದ್ದು ಅಭಿವೃದ್ಧಿ ಕಾರ್ಯಗಳು ಶೂನ್ಯವಾಗಿವೆ, ಭಾರತ ದೇಶವನ್ನು ಪ್ರಧಾನಿ ನರೇಂದ್ರಮೋದಿ ಅವರು ವಿಶ್ವಗುರುವಾಗಿಸಿದ್ದಾರೆ. ಕೇಂದ್ರದ ಯೋಜನೆಗಳನ್ನು ಗ್ರಾಮ ಮಟ್ಟಕ್ಕೆ ತಿಳಿಸಬೇಕಿದೆ, ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಗೆಲುವು ಶತಸಿದ್ದ ಎಂದರು.
ಈ ಸಂದರ್ಭದಲ್ಲಿ ಮಂಡಲದ ಅಧ್ಯಕ್ಷ ವಿಶ್ವನಾಥ ಮರಿಬಸಪ್ಪನವರ, ಅಭಿಯಾನದ ಜಿಲ್ಲಾ ಸಹ ಸಂಚಾಲಕ ಕೆ ಮಹೇಶ, ಮುಖಂಡರಾದ ಬಸವಲಿಂಗಪ್ಪ ಭೂತೆ, ಅರವಿಂದಗೌಡ ಪಾಟೀಲ್, ಸುಧಾಕರ ದೇಸಾಯಿ,ವೀರಣ್ಣ ಹುಬ್ಬಳ್ಳಿ, ರತನ್ ದೇಸಾಯಿ, ಕಳಕಪ್ಪ ಕಂಬಳಿ,ಶಿವಕುಮಾರ್ ನಾಗಲಾಪುರ ಮಠ,ಶ್ರೀ ಅಯ್ಯನಗೌಡ ಕೆಂಚಮ್ಮನವರು, ಹಾಗೂ ಬೂತ್ ಅಧ್ಯಕ್ಷರು ಮತ್ತು ಕಾರ್ಯಕರ್ತರು ಇತರರು ಇದ್ದರು

Leave a Reply

Your email address will not be published. Required fields are marked *

error: Content is protected !!