ಕಾಯಕ ಶರಣರ ಜಯಂತಿ: ಜಿಲ್ಲಾಡಳಿತದಿಂದ ಪುಷ್ಪನಮನ ಸಲ್ಲಿಕೆ
ಕರುನಾಡ ಬೆಳಗು ಸುದ್ದಿ
ಕೊಪ್ಪಳ,11- ಕಾಯಕ ಶರಣರ ಜಯಂತಿ ಅಂಗವಾಗಿ ಕೊಪ್ಪಳ ಜಿಲ್ಲಾಡಳಿತದಿಂದ ಕಾಯಕ ಶರಣರಿಗೆ ಪುಷ್ಪನಮನ ಸಲ್ಲಿಸಲಾಯಿತು.
ಕೊಪ್ಪಳ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಹಮ್ಮಿಕೊಳ್ಳಲಾದ ಈ ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿಗಳಾದ ಸಾವಿತ್ರಿ ಬಿ ಕಡಿ ಹಾಗೂ ಇತರ ಗಣ್ಯರು ಸೇರಿ, ಕಾಯಕ ಶರಣರಾದ ಮಾದಾರ ಚನ್ನಯ್ಯ, ಮಾದಾರ ಧೂಳಯ್ಯ, ಡೋಹರ ಕಕ್ಕಯ್ಯ, ಸಮಗಾರ ಹರಳಯ್ಯ ಹಾಗೂ ಉರಿಲಿಂಗಪೆದ್ದಿ ಯವರ ಭಾವಚಿತ್ರಕ್ಕೆ ಪುಷ್ಪಾರ್ಣೆಗೈದು ಗೌರವ ಸಮರ್ಪಿಸಿದರು.
ಈ ಸಂದರ್ಭದಲ್ಲಿ ಸಮಾಜದ ಮುಖಂಡರಾದ ರಾಮಣ್ಣ ಕಂದಾರಿ, ಕರ್ನಾಟಕ ದಲಿತ ಸಂಘಟನೆಗಳ ಒಕ್ಕೂಟದ ಹೈ-ಕ ವಿಭಾಗದ ಅಧ್ಯಕ್ಷರಾದ ಚನ್ನಬಸಪ್ಪ ಎಚ್ ಹೊಳೆಯಪ್ಪನವರ, ಹಾಲಪ್ಪ ಪೂಜಾರ ಹಾಗೂ ಇತರರು, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರಾದ ಶ್ರೀಶೈಲ ಬಿರಾದಾರ, ಜಿಲ್ಲಾ ವಾರ್ತಾಧಿಕಾರಿ ಗವಿಸಿದ್ದಪ್ಪ ಹೊಸಮನಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಕೊಟ್ರೇಶ್ ಮರಬನಳ್ಳಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದು, ಕಾಯಕ ಶರಣರಿಗೆ ಪುಷ್ಪನಮನ ಸಲ್ಲಿಸಿದರು.
