
ಕೊಪ್ಪಳ ನಗರದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯರ ತರಬೇತಿ ಕೇಂದ್ರದಲ್ಲಿ ಸ್ವೀಪ್ ಕಾರ್ಯಕ್ರಮ
ಕರುನಾಡ ಬೆಳಗು ಸುದ್ದಿ
ಕೊಪ್ಪಳ, 2- ಮೇ-7ರಂದು ಜರುಗುವ ಲೋಕಸಭಾ ಚುನಾವಣೆಯಲ್ಲಿ ಕಡ್ಡಾಯವಾಗಿ ಮತ ಚಲಾಯಿಸಬೇಕೆಂದು ಕೊಪ್ಪಳ ತಾಲ್ಲೂಕು ಆರೋಗ್ಯ ಕ್ಷೇತ್ರ ಶಿಕ್ಷಣಾಧಿಕಾರಿ ಗಂಗಮ್ಮ ಕಳಕಾಪುರಕರೆ ನೀಡಿದರು.
ಸೋಮವಾರದಂದು ಕೊಪ್ಪಳ ನಗರದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯರ ತರಬೇತಿ ಕೇಂದ್ರದಲ್ಲಿ ಕಿರಿಯ ಆರೋಗ್ಯ ಸಹಾಯಕಿಯರಿಂದ ಮತದಾನ ಜಾಗೃತಿಯ ಸ್ವೀಪ್ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಚುನಾವಣೆ ದಿನದಂದು ನಾವು ಸಮಯ ವ್ಯರ್ಥ ಮಾಡದೇ ಚುನಾವಣೆ ಆಯೋಗ ನಿಗದಿಪಡಿಸಿದ ದಾಖಲಾತಿಗಳನ್ನು ತೆಗೆದುಕೊಂಡು ಹೋಗಿ ನಮಗೆ ಸೂಕ್ತ ಎನಿಸುವ ವ್ಯಕ್ತಿಗೆ ಮತ ಚಲಾಯಿಸಬೇಕು ಎಂದು ಅರಿವು ಮೂಡಿಸಿದರು.
ಸ್ವೀಪ್ ಕಾರ್ಯಕ್ರಮದಲ್ಲಿ ತರಬೇತಿ ಕೇಂದ್ರದ ಪ್ರಾಂಶುಪಾಲರು, ಹಿರಿಯ ಪಿಎಚ್ಒ, ಮಲೇರಿಯಾ ಲಿಂಕ್ ವರ್ಕರ್ ಹಾಗು ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯರು ಹಾಜರಿದ್ದರು.