
ಉದ್ಯೋಗ ಖಾತ್ರಿ ನಡೆಗೆ ಸುಸ್ಥಿರತೆಯಡಿಗೆ
ಕರುನಾಡ ಬೆಳಗು ಸುದ್ದಿ
ಕುಕನೂರ26- ತಾಲೂಕಿನ ಯರೇಹಂಚಿನಾಳ ಗ್ರಾಮ ಪಂಚಾಯತಿಯಲ್ಲಿ *ಮಹಾತ್ಮಗಾಂಧಿ ನರೇಗಾ ಯೋಜನೆ* ಯಡಿಯಲ್ಲಿ 2024-25 ನೇ ಸಾಲಿನ ಕ್ರಿಯಾ ಯೋಜನೆಯ ತಯಾರಿಕೆಯ ಪ್ರಯುಕ್ತ ಗ್ರಾಮದಲ್ಲಿ ಸಂಚರಿಸಿ ಉದ್ಯೋಗ ಖಾತರಿ ನಡಿಗೆ ಸುಸ್ಥಿರತೆಯಡಿಗೆ* ಅಭಿಯಾನವನ್ನು ಹಮ್ಮಿಕೊಳ್ಳಲಾಯಿತು.
ಕಾರ್ಯಕ್ರಮದಲ್ಲಿ ಗ್ರಾಮಸ್ಥರಿಗೆ ಯೋಜನೆಯ ಬಗ್ಗೆ ಮಾಹಿತಿ ನೀಡಿ ಸಾರ್ವಜನಿಕರಿಂದ *ವೈಯಕ್ತಿಕ ಮತ್ತು ಸಮುದಾಯ ಕಾಮಗಾರಿ* ಗಳ ಪಟ್ಟಿಗಳನ್ನು ಸಂಗ್ರಹಿಸಲಾಯಿತು.
ಕಾರ್ಯಕ್ರಮದಲ್ಲಿ ಪಂಚಾಯತಿ ಅಧ್ಯಕ್ಷರಾದ ದ್ರಾಕ್ಷಾಯಣಿ ಎಸ್ ತಹಶೀಲ್ದಾರರು, ಉಪಾಧ್ಯಕ್ಷರಾದ ಶರಣಯ್ಯ ಹಿರೇಮಠ, ಗ್ರಾಮ ಪಂಚಾಯತಿ ಸದಸ್ಯರು, ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಾದ ಅಡಿವೆಪ್ಪ ಯಡಿಯಾಪೂರ, ನರೇಗಾ ಐ.ಇ.ಸಿ ಸಂಯೋಜಕರಾದ ಲಕ್ಷ್ಮಣ ಕೆರಳ್ಳಿ, ಗ್ರಾಮ ಪಂಚಾಯತಿ ಸಿಬ್ಬಂದಿಗಳು, ನರೇಗಾ ಕಾಯಕ ಬಂಧುಗಳು, ಗ್ರಾಮಸ್ಥರು ನರೇಗಾ ಕೂಲಿಕಾರರು ಹಾಜರಿದ್ದರು.