ಕರೂರು : ಸ್ಪರ್ಶ ಕುಷ್ಟರೋಗ ಆಂದೋಲನ ಜಾಗೃತಿ ಕಾರ್ಯಕ್ರಮ
ಕರುನಾಡ ಬೆಳಗು ಸುದ್ದಿ
ಸಿರುಗುಪ್ಪ,12- ತಾಲೂಕು ಪ್ರಾಥಮಿಕ ಆರೋಗ್ಯ ಕೇಂದ್ರ ಕರೂರು ವ್ಯಾಪ್ತಿಯ ಸರ್ಕಾರಿ ಪ್ರೌಢ ಶಾಲೆ, ಅಂಬೇಡ್ಕರ್ ವಸತಿ ಶಾಲೆ ಮತ್ತು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಸತ್ಯಂ ಪೇಟೆ ಯಲ್ಲಿ ಸ್ಪರ್ಶ ಕುಷ್ಟರೋಗ ಜಾಗೃತಿ ಆಂದೋಲನ ಕಾರ್ಯಕ್ರಮ ನಡೆಸಿ ಸಂಶಯಾಸ್ಪದ ಪ್ರಕರಣಗಳನ್ನು ಪರಿಶೀಲನೆಗೆ ಒಳಪಡಿಸಲಾಯಿತು.
ಈ ಕಾರ್ಯಕ್ರಮದಲ್ಲಿ ಬಿ ಹೆಚ್ಇಒ ಮೊಹಮ್ಮದ್ ಕಾಸಿಂ, ವೈದ್ಯಾಧಿಕಾರಿ ಡಾ. ಬಾಲಾಜಿ, ಹೆಚ್ಐಓ ಮಾರಪ್ಪ, ಎಚ್ಪಿಟಿ ವೀರೇಶ್ ಮತ್ತು ಮುಖ್ಯ ಗುರುಗಳು, ಶಿಕ್ಷಕರು, ವಿದ್ಯಾರ್ಥಿಗಳು ಹಾಜರಿದ್ದರು.
