ಕೇಂದ್ರ ಸರ್ಕಾರ ಎಸಗುತ್ತಿರುವ ಅನ್ಯಾಯ ಮತ್ತು ತಾರತಮ್ಯದ ವಿರುದ್ಧ ಮನವಿ
ಕರುನಾಡ ಬೆಳಗು ಸುದ್ದಿ
ಕೊಪ್ಪಳ,14- ಲೋಕಸಭಾ ಸದಸ್ಯರ ಕಾರ್ಯಾಲಯದಲ್ಲಿ ಸಂಸದ ಸಂಗಣ್ಣ ಕರಡಿ ಅವರ ಅನುಪಸ್ಥಿತಿಯಲ್ಲಿ ಅವರ ಆಪ್ತ ಸಹಾಯಕ ವಿಜಯಕುಮಾರ್ ಪುರಾಣಿಕ ಅವರಿಗೆ ಮನವಿ ಪತ್ರ ಸಲ್ಲಿಸಲಾಯಿತು.
ಮನವಿಯಲ್ಲಿ ರಾಜ್ಯ ಸರ್ಕಾರಕ್ಕೆ ಅನುದಾನ ತೆರಿಗೆ ಹಣ ಹಂಚಿಕೆಯಲ್ಲಿ ಕೇಂದ್ರ ಸರಕಾರ ಮಾಡುತ್ತಿರುವ ಅನ್ಯಾಯವನ್ನು ಖಂಡಿಸಿ. ಸಂಸತ್ ಸದಸ್ಯರುಗಳ ಜವಾಬ್ದಾರಿಯನ್ನು ಪ್ರಶ್ನಿಸಿ ಸಿಪಿಐ ರಾಜ್ಯಾದ್ಯಂತ ಪ್ರತಿಭಟನೆ ಹಮ್ಮಿಕೊಂಡಿದೆ.
ಜಿ.ಎಸ್.ಟಿ. ತೆರಿಗೆ ಹಣ, ಬರ ಪರಿಹಾರ ಸೇರಿದಂತೆ ವಿವಿಧ ಅನುದಾನವನ್ನು ರಾಜ್ಯಗಳಿಗೆ ಹಚಿಕೆ ಮಾಡುವ ಸಂದರ್ಭದಲ್ಲಿ ಕೇಂದ್ರ ಸರ್ಕಾರ ಎಸಗುತ್ತಿರುವ ಅನ್ಯಾಯ ಮತ್ತು ತಾರತಮ್ಯ ನೀತಿಯನ್ನು ಖಂಡಿಸಿ ಸಂಸತ್ ಸದಸ್ಯರುಗಳ ಹೊಣೆಗಾರಿಕೆಯನ್ನು ಪ್ರಶ್ನಿಸಿ ರಾಜ್ಯದ ಸಂಸತ್ ಸದಸ್ಯರ ಕಛೇರಿ ಮುಂದೆ ಪ್ರತಿಭಟನೆ ನಡೆಸಿದೆ ಭಾರತ ಕಮ್ಯೂನಿಸ್ಟ್ ಪಕ್ಷ (ಸಿ.ಪಿ.ಐ.) ಜಿಲ್ಲಾ ಮಂಡಳಿ ಒತ್ತಾಯಿಸುತ್ತದೆ.
ಒಕ್ಕೂಟ ವ್ಯವಸ್ಥೆಯನ್ನು ಒಪ್ಪಿಕೊಂಡಿರುವ ಭಾರತ, ಸಂವಿಧಾನದ ಪ್ರಕಾರ ಕೇಂದ್ರ ಸರ್ಕಾರ, ರಾಜ್ಯ ಸರ್ಕಾರಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಸೇರಿದಂತೆ ದೇಶದ ಜನತೆಯ ಪರವಾಗಿ ಆಡಳಿತವನ್ನು ನಡೆಸಬೇಕಾಗಿದೆ. ದೇಶ ಮುನ್ನಡೆಸಲು ಹಾಗೂ ರಾಜ್ಯಗಳನ್ನು ಸರ್ವವ್ಯಾಪಿಯಾಗಿ ಸಬಲಗೊಳಿಸಲು ಭಾರತದ ಒಕ್ಕೂಟ ವ್ಯವಸ್ಥೆಯೊಳಗಿರುವ ರಾಜ್ಯಗಳ ಮೂಲಕ ಸಂಗ್ರಹವಾಗುವ ವಸ್ತುಗಳು, ಆಸ್ತಿಗಳು, ವಾಹನಗಳು ಇತ್ಯಾದಿಗಳ ಮೇಲಿನ ತೆರಿಗೆ, ಸೆಸ್. ರೂಪದಲ್ಲಿ ಸಗ್ರಹಿಸುವ ತೆರಿಗೆ ಹಣವನ್ನು ಕೇಂದ್ರ ಮತ್ತು ರಾಜ್ಯಗಳಿಗೆ ಹಂಚಿಕೆಯಾಗಬೇಕೆಂದು ಹಣಕಾಸು ಆಯೋಗವನ್ನು ರಚಿಸಲಾಗಿದೆ.
ತೆರಿಗೆ ಹಣವನ್ನು ನ್ಯಾಯ ಸಮ್ಮತವಾಗಿ ರಾಜ್ಯಗಳಿಗೆ ಹಂಚಿಕೆ ಮಾಡಿ ಅಗತ್ಯವಾದ ಅನುದಾನಗಳನ್ನು ಕಾಲ ಕಾಲಕ್ಕೆ ಬಿಡುಗಡೆಗೊಳಿಸಬೇಕಾಗಿರುವದು ಭಾರತದ ಒಕ್ಕೂಟ ಸರ್ಕಾರದ ಹೊಣೆಗಾರಿಕೆಯಾಗಿದೆ.ಆದರೆ ಕಳೆದ ನಾಲ್ಕು ವರ್ಷಗಳಿದ ರಾಜ್ಯಗಳಿಗೆ ಲಭಿಸಬೇಕಾದ ತೆರಿಗೆ ಹಂಚಿಕೆಯಲ್ಲಿ ಕೇಂದ್ರ ಸರ್ಕಾರ ಕರ್ನಾಟಕ್ಕೆ ಅನ್ಯಾಯ ಎಸಗಿದ್ದು ಸುಮಾರು 45,000 ಕೋಟಿ ನಷ್ಟವಾಗಿದೆ ಎಂದು ರಾಜ್ಯದ ಮುಖ್ಯಮಂತ್ರಿಗಳೇ ಅಂಕಿ ಅಂಶವನ್ನು ಬಹಿರಂಗಪಡಿಸಿದ್ದಾರೆ.
ರಾಜ್ಯದ ಬರ ಪರಿಹಾರದ ಅನುದಾನವನ್ನು ಸಹ ಬಿಡುಗಡೆಗೊಳಿಸದೇ ಇರುವುದು ರಾಜ್ಯಕ್ಕೆ ಮಾಡಿರುವ ಮಹಾ ಅನ್ಯಾಯವೇ ಆಗಿದೆ. ರಾಜ್ಯದ ಪಾಲಿನ ತೆರಿಗೆ ಹಣ ಸೇರಿದಂತೆ ನೆಲ ಜಲ ಭಾಷೆಯಂತಹ ರಾಜ್ಯದ ಆಸ್ಮಿತೆಯ ಪ್ರಶ್ನೆಗಳು ಎದುರಾದಾಗ ರಾಜ್ಯದ ಪರ ಧ್ವನಿಯತ್ತದೆ ಮೌನ ತಾಳಿರುವ ಸಂಸದರ ನಿರ್ಲಕ್ಷತನವನ್ನು ಪ್ರತಿಭಟಿಸಿ ಕ್ಷೇತ್ರದ ಅಭಿವೃದ್ಧಿಗೆ ಸಂಸದರು ಕೇಂದ್ರ ಸರ್ಕಾರದಿಂದ ಬಿಡಿಗಡೆಯಾಗುವ ನಿಧಿ ಅಥವಾ ಅನುದಾನ ಎಷ್ಟು ಕ್ಷೇತ್ರದಲ್ಲಿ ಸಂಸದರ ನಿಧಿಯಿಂದ ಆಗಿರುವ ಅಭಿವೃದ್ಧಿ ಕಾರ್ಯಗಳ ಕುರಿತು ಶ್ವೇತ ಪತ್ರಗಳನ್ನು ಹೊರಡಿಸಬೇಕೆಂದು ಮತ್ತು ಕರ್ನಾಟಕ ರಾಜ್ಯಕ್ಕೆ ಬರಬೇಕಾದ ಹಣವನ್ನು ಶೀಘ್ರದಲ್ಲಿ ಮಂಜೂರು ಮಾಡಿಸಲು ತಾವುಗಳು ಪ್ರಯತ್ನಿಸಬೇಕೆಂದು ತಮ್ಮಲ್ಲಿ ಮನವಿ ಮಾಡಿಕೊಳ್ಳುತ್ತೇವೆ ಎಂದರು.
ಈ ಸಂದರ್ಭಲ್ಲಿ ಭಾರತ ಕಮ್ಯೂನಿಸ್ಟ್ ಪಕ್ಷದ ಜಿಲ್ಲಾ ಕಾರ್ಯದರ್ಶಿ ಹುಲುಗಪ್ಪ ಅಕ್ಕಿರೊಟ್ಟಿ, ಗಂಗಾವತಿ ತಾಲೂಕಾ ಕಾರ್ಯದರ್ಶಿ ಏ.ಎಲ್. ತಿಮ್ಮಣ್ಣ, ಜನಪರ ಸಂಘಟನೆಗಳ ಒಕ್ಕೂಟದ ಜಿಲ್ಲಾ ಸಂಚಾಲಕ ಎಸ್.ಎ. ಗಫಾರ್, ಕರ್ನಾಟಕ ರಾಜ್ಯ ಕಟ್ಟಡ ಕಟ್ಟುವ ಮತ್ತು ಕಲ್ಲು ಒಡೆಯುವ ಕ್ವಾರಿ ಕಾರ್ಮಿಕರ ಸಂಘದ ಜಿಲ್ಲಾ ಸಂಘಟನಾ ಸಂಚಾಲಕ ತುಕಾರಾಮ್ ಬಿ.ಪಾತ್ರೋಟಿ, ಲಕ್ಷ್ಮಣ ನಾಯಕ, ಬಸವರಾಜ, ಮಂಜುನಾಥ್, ಹನುಮಂತ ವಡ್ಡರ್, ಜಗದೀಶ್ ಕಟ್ಟಿಮನಿ ಮುಂತಾದವರು ಉಪಸ್ಥಿತರಿದ್ದರು.
