
ಉಡಾನ ಯೋಜನೆ ಅನುಷ್ಠಾನ ಸಮಿತಿ
ಸರ್ಕಾರಿ ವಿಮಾನ ನಿಲ್ದಾಣ
ಆಡಳಿತಾತ್ಮಕ ಅನುಮೋದನಗಾಗಿ ಇತ್ತಾಯಿಸಿ ಮನವಿ
ಕರುನಾಡ ಬೆಳಗು ಸುದ್ದಿ
ಕೊಪ್ಪಳ, 02- ಜಿಲ್ಲೆಯಲ್ಲಿ ವಿಮಾನ ನಿಲ್ದಾಣ ಸ್ಥಾಪನೆಗಾಗಿ ಭೂಮಿ ಖರೀದಿಸುವ ಪ್ರಸ್ತಾವನೆಗೆ ಆಡಳಿತಾತ್ಮಕ ಅನುಮೋದನೆಯನ್ನು ನೀಡುವ ಮನವಿಯನ್ನು ಮುಖ್ಯಮಂತ್ರಿಗಳಿಗೆ ಉಡಾನ ಯೋಜನೆ ಅನುಷ್ಠಾನ ಸಮಿತಿ ಮುಖ್ಯಮಂತ್ರಿಗಳಿಗೆ ಮನವಿಸಲ್ಲಿಸಿದರು.
ಮನವಿಯಲ್ಲಿ ಜಿಲ್ಲೆಯಲ್ಲಿ ವಿಮಾನ ನಿಲ್ದಾಣಕ್ಕೆ ಭೂಮಿ ಖರೀದಿಸಬೇಕು. ಜಿಲ್ಲಾ ಕೇಂದ್ರವಾದ ಕೊಪ್ಪಳ ನಗರದಲ್ಲಿ ನೂತನ ವಿಮಾನ ನಿಲ್ದಾಣ ನಿರ್ಮಾಣ ಮಾಡಲು ಈಗಾಗಲೆ ಕೊಪ್ಪಳ ತಾಲೂಕಿನ ಕುಷ್ಟಗಿ ರಸ್ತೆಗೆ ಹೊಂದಿಕೊಂಡಂತೆ ತಾಳಕನಕಾಪೂರ, ಬುಡಶೆಟ್ನಾಳ, ಕಲಕೇರಿ ಹಾಗೂ ಹಟ್ಟಿ ಗ್ರಾಮಗಳ ಒಟ್ಟು ವಿಸ್ತೀರ್ಣ 669-10 ಎಕರೆ ಜಮೀನನ್ನು ಸರ್ವೇ ಮಾಡಿ ನಕ್ಷೆ ತಯಾರಿಸಿ ಏರ್‌ಪೋರ್ಟ್ ಅಥಾರಿಟಿ ಆಫ್ ಇಂಡಿಯಾ ಇವರ ತಾಂತ್ರಿಕ ತಂಡ ಅಧ್ಯಯನ ಮಾಡಿ ತನ್ನ ಒಪ್ಪಿಗೆಯನ್ನು ಸೂಚಿಸಿರುತ್ತದೆ.
ಕೊಪ್ಪಳದ ಜಿಲ್ಲಾಡಳಿತ ಮಾನ್ಯ ಸರಕಾರದ ಮೂಲ ಸೌಲಭ್ಯ ಅಭಿವೃದ್ಧಿ ಇಲಾಖೆಯವರಿಗೆ£ ಪ್ರಸ್ಥಾವನೆಯನ್ನು ಸಲ್ಲಿಸಿ ಆಡಳಿತಾತ್ಮಕ ಅನುಮೋದನೆಯನ್ನು ಕೋರಿರುತ್ತಾರೆ. ಸದರಿ ಪ್ರಸ್ಥಾವನೆಯನ್ನು ಸಂಬಂಧಿಸಿದ ಇಲಾಖೆಯವರು ತಕ್ಷಣವೇ ಪರಿಶೀಲನೆ ಮಾಡಿ ಆಡಳಿತಾತ್ಮಕ ಅನುಮೋದನೆ ನೀಡುವದು ಅವಶ್ಯವಿದೆ. ಈ ಮಧ್ಯದಲ್ಲಿ ಹಿಂದಿನ ಸರ್ಕಾರ ಉದ್ದೇಶಿತ ವಿಮಾನ ನಿಲ್ದಾಣ ಯೋಜನೆಗಾಗಿ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲು ರೂ.40 ಕೋಟಿಗಳ ಅನುದಾನವನ್ನು ಕೆ.ಕೆ.ಆರ್.ಡಿ.ಬಿ ಯೋಜನೆಯಲ್ಲಿ ಮೀಸಲಾಗಿರಿಸಿದ್ದರು.
ಪ್ರಯುಕ್ತ ತಾವು ಈ ಕುರಿತು ಸಂಬಂಧಪಟ್ಟ ಇಲಾಖೆಗೆ ಸೂಕ್ತ ನಿರ್ದೇಶನ ನೀಡಿ ಆಡಳಿತಾತ್ಮಕ ಅನುಮೋದನೆ ನೀಡಲು ನಿರ್ದೇಶಿಸಬೇಕು ಮತ್ತು ಭೂ-ಸ್ವಾಧೀನಕ್ಕಾಗಿ ಅವಶ್ಯವಿರುವ ಅನುದಾನವನ್ನು ಸಹ ಮಂಜೂರು ಮಾಡಬೇಕೆಂದು ವಿನಂತಿಸಿ ಸಂಸದರು ತಮ್ಮ ಮನವಿಯನ್ನು ಮುಖ್ಯಮಂತ್ರಿಗಳಿಗೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಸಮಿತಿಯ ಸಂಚಾಲಕ ರಾದ ರಾಘವೇಂದ್ರ ಪಾನಘಂಟಿ. ಆಸೀಫ್ ಅಲಿ. ಡಿ ಗುರುರಾಜ ಇತರು ಇದ್ದರು.