
- ನಿರ್ಮಾಣ ಹಂತದ ಕಟ್ಟಡಲ್ಲಿ ಮಾಟ – ಮಂತ್ರ ಕ್ರಮಕ್ಕೆ ಆಗ್ರಹ
ಕರುನಾಡ ಬೆಳಗು ಸುದ್ದಿ
ಕೊಪ್ಪಳ, 26- ಜಿಲ್ಲಾ ಕೇಂದ್ರದ ನಗರ ಪೊಲೀಸ್ ಠಾಣೆಯ ಎದುರಿನ ನಿರ್ಮಾಣ ಹಂತದ ಕಟ್ಟಡದ ಒಳಗೆ ಎರಡು ತತ್ತೆಗಳು. ಎರಡು ಮೊಟ್ಟೆಗಳನ್ನು ಎಸೆದ ಕಿಡಿಗಿಡಿಗಳ ವಿರುದ್ಧ ಕಠಿಣ ಕ್ರಮಕ್ಕೆ ಜನಪರ ಸಂಘಟನೆಗಳ ಒಕ್ಕೂಟದ ಜಿಲ್ಲಾ ಸಂಚಾಲಕ ಎಸ್.ಎ. ಗಫಾರ್. ಕರ್ನಾಟಕ ರಾಜ್ಯ ಕಟ್ಟಡ ಕಟ್ಟುವ ಮತ್ತು ಕಲ್ಲು ಒಡೆಯುವ ಕ್ವಾರಿ ಕಾರ್ಮಿಕರ ಸಂಘದ ಜಿಲ್ಲಾ ಸಂಘಟನಾ ಸಂಚಾಲಕ ತುಕಾರಾಮ ಬಿ. ಪಾತ್ರೋಟಿ ಆಗ್ರಹಿಸಿದ್ದಾರೆ.
ಮಾಟ ಮಂತ್ರ ಮತ್ತು ವಾಮಾಚಾರ ನಿಯಂತ್ರಿಸುವ ಮೂಢನಂಬಿಕೆ ನಿಷೇಧ ಕಾಯ್ದೆಯನ್ನು 2020 ರ ಜನವರಿ 4 ರಂದು ರಾಜ್ಯ ಸರ್ಕಾರವು ಅಧಿಸೂಚನೆ ಹೊರಡಿಸುವ ಮೂಲಕ ಜಾರಿಗೆ ತಂದಿದ್ದರೂ ಸಹ ಪೊಲೀಸ್ ಇಲಾಖೆ ಜನರವರೆಗೂ ತಲುಪುವ ರೀತಿಯಲ್ಲಿ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಹಾಕಿಕೊಳ್ಳದೆ ಇರುವುದರಿಂದ ಮೂಡನಂಬಿಕೆಗಳನ್ನು ನಂಬುವಂತಹ ಕಿಡಿಗೇಡಿಗಳು ಇಂಥ ಕೃತ್ಯಗಳಲ್ಲಿ ತೊಡಗಿದ್ದಾರೆ.
ಮುಗ್ಧ ಹಾಗೂ ಅಮಾಯಕ ಜನರಲ್ಲಿ ಭಯ ಹುಟ್ಟಿಸುವ ಕೃತ್ಯ ವ್ಯಸಗುವವರನ್ನು ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ತನಿಖೆ ನಡೆಸಿ ಜೈಲುಗಟ್ಟಿ ಕಠಿಣ ಕ್ರಮ ಕೈಗೊಳ್ಳುವಂತೆ ಜನಪರ ಸಂಘಟನೆಗಳ ಒಕ್ಕೂಟದ ಜಿಲ್ಲಾ ಸಂಚಾಲಕ ಎಸ್.ಎ. ಗಫಾರ್. ಕರ್ನಾಟಕ ರಾಜ್ಯ ಕಟ್ಟಡ ಕಟ್ಟುವ ಮತ್ತು ಕಲ್ಲು ಒಡೆಯುವ ಕ್ವಾರಿ ಕಾರ್ಮಿಕರ ಸಂಘದ ಜಿಲ್ಲಾ ಸಂಘಟನಾ ಸಂಚಾಲಕ ತುಕರಾಮ್ ಬಿ. ಪಾತ್ರೋಟಿ ಪತ್ರಿಕಾ ಪ್ರಕಟಣೆ ಮೂಲಕ ಆಗ್ರಹಿಸಿದ್ದಾರೆ.