
ಕಪ್ಪುಪಟ್ಟಿ ಧರಿಸಿ ಉಪನ್ಯಾಸಕರು ಪ್ರತಿಭಟನೆ
ಕರುನಾಡ ಬೆಳಗು ಸುದ್ದಿ
ಕೊಪ್ಪಳ , 23- ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಜಿಲ್ಲಾ ಪದವಿ ಪೂರ್ವ ಕಾಲೇಜುಗಳ ಪ್ರಾಚಾರ್ಯರು ಹಾಗೂ ಉಪನ್ಯಾಸಕರು ಕಪ್ಪು ಪಟ್ಟಿ ಧರಿಸಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ಆರಂಭಿಸಿದ್ದಾರೆ.
ಗುರುವಾರದಂದು ಧರಣಿ ಆರಂಭಿಸಿರುವ ಪ್ರಾಚಾರ್ಯರ ಸಂಘ, ಕರ್ನಾಟಕ ರಾಜ್ಯ ಪ.ಪೂ ಕಾಲೇಜುಗಳ ಉಪನ್ಯಾಸಕರ ಸಂಘ, ಹಾಗೂ ಕರ್ನಾಟಕ ರಾಜ್ಯ ಪ.ಪೂ ಕಾಲೇಜುಗಳ ಬೋಧಕೇತರ ಸಂಘದ ಸಹಯೋಗದೊಂದಿಗೆ ಧರಣಿ ನಡೆಸುತ್ತಿದ್ದಾರೆ.
ಬೇಡಿಕೆಗಳು; ದೇಶದ ಗುಣಾತ್ಮಕ ಮತ್ತು ಸ್ಪರ್ಧಾತ್ಮಕ ಶಿಕ್ಷಣಕ್ಕೆ ದೇಶದಲ್ಲಿಯೇ ಮಾದರಿಯಾದ ಪದವಿ ಪೂರ್ವ ಶಿಕ್ಷಣ ಇಲಾಖೆಯ ಆಸ್ಥಿತೆಯನ್ನು ಯಥಾಸ್ಥಿತಿ ಕಾಪಾಡಬೇಕು.
ಪ.ಪೂ.ಶಿ ಇಲಾಖೆಯನ್ನು ಶಾಲಾ ಶಿಕ್ಷಣ (ಪದವಿ ಪೂರ್ವ) ಇಲಾಖೆ ಎಂದು ಹೆಸರು ಬದಲಿಸಲಾಗಿದೆ ಮತ್ತು ಕರ್ನಾಟಕ ಪಬ್ಲಿಕ್ ಸ್ಕೂಲ್ ಹೆಸರಿನಲ್ಲಿ ಪಿಯು ಹಂತವನ್ನು ಪ್ರೌಢಶಾಲೆಗಳಲ್ಲಿ ವಿಲೀನಗೊಳಿಸುವ ಪ್ರಕ್ರಿಯೆ ನಡೆಸಬಾರದು.
ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಲ್ಲಿ ವಿಲೀನಗೊಳಿಸಿರುವ ಪರೀಕ್ಷಾ ವಿಭಾಗವನ್ನು ಹಿಂತೆಗೆದು ಪುನಃ ಪದವಿ ಪೂರ್ವ ಶಿಕ್ಷಣ ಇಲಾಖೆಯಲ್ಲಿಯೇ ಉಳಿಸುವ ಮೂಲಕ ಶೈಕ್ಷಣಿಕ ವಿಭಾಗ ಮತ್ತು ಪರೀಕ್ಷಾ ವಿಭಾಗಗಳ ನಡುವೆ ಹಳಿತಪ್ಪಿರುವ ಸಮನ್ವಯವನ್ನು ಮರುಸ್ಥಾಪಿಸಬೇಕು. ಕುಸಿಯುತ್ತಿರುವ ಪರೀಕ್ಷಾ ಮೌಲ್ಯ ಎತ್ತಿ ಹಿಡಿಯಬೇಕು ಎಂದು ಆಗ್ರಹಿಸಿದ್ದಾರೆ.
ಬೆಂಗಳೂರಿನಲ್ಲಿ ಪ್ರತಿಭಟನೆ ; ಸರ್ಕಾರ ಬೇಡಿಕಗಳನ್ನು ಇಡೇರಿಸದ್ದಿದ್ದಲ್ಲಿ ಪ್ರಾಂಶುಪಾಲರ ಸಂಘ, ಉಪನ್ಯಾಸಕರ ಸಂಘ ಮತ್ತು ಬೋಧಕೇತರ ಸಂಘಗಳ ಒಕ್ಕೂಟವು ಮುಂಬರುವ ಡಿಸೆಂಬರ್ 1 ರಂದು ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಬೃಹತ್ ಪ್ರತಿಭಟನೆ ಮಾಡುವುದಾಗಿ ಎಚ್ಚರಿದ್ದಾರೆ.
ಈ ವೇಳೆ ಜಿ.ಪ.ಪೂ ಕಾಲೇಜುಗಳ ಪ್ರಾಚಾರ್ಯರ ಸಂಘದ ಅಧ್ಯಕ್ಷ ಅನೀಲ್ ಕುಮಾರ್, ಕ.ರಾ.ಪ.ಪೂ ಕಾಲೇಜುಗಳ ಉಪನ್ಯಾಸಕರ ಸಂಘದ ಜಿಲ್ಲಾಧ್ಯಕ್ಷ ಸೋಮಶೇಖರ ಗೌಡ, ರುದ್ರೇಶ ಸೇರಿದಂತೆ ಹಲವರು ಇದ್ದರು.