
ನ್ಯಾಯಮೂರ್ತಿಗಳು, ನ್ಯಾಯಾಧೀಶರು, ಸಚಿವರು, ಶಾಸಕರು, ವಕೀಲರು, ಗಣ್ಯರು ಭಾಗಿ
—
ಕೊಪ್ಪಳ ಜಿಲ್ಲಾ ನ್ಯಾಯಾಲಯ ಸಂಕೀರ್ಣಕ್ಕೆ ಭೂಮಿಪೂಜೆ
ಕರುನಾಡ ಬೆಳಗು ಸುದ್ದಿ
ಕೊಪ್ಪಳ, 04- ನ್ಯಾಯಾಲಯದಲ್ಲಿನ ವ್ಯಾಜ್ಯಗಳು ತೀವ್ರಗತಿಯಲ್ಲಿ ಬಗೆಹರಿದು ನ್ಯಾಯಾಂಗ ವ್ಯವಸ್ಥೆಯ ಬಗ್ಗೆ ಸಾರ್ವಜನಿಕರಲ್ಲಿ ವಿಶ್ವಾಸವನ್ನು ಬಲಗೊಳಿಸಲು ಹೈಕೋರ್ಟ್ ಬದ್ಧವಾಗಿದೆ. ಈ ದಿಶೆಯಲ್ಲಿ ನಾವು ಕಾರ್ಯಪ್ರವೃತ್ತರಾಗಿದ್ದೇವೆ ಎಂದು ಕರ್ನಾಟಕ ಉಚ್ಚ ನ್ಯಾಯಾಲಯದ ಮುಖ್ಯನ್ಯಾಯಮೂರ್ತಿಗಳಾದ ನ್ಯಾ.ಪ್ರಸನ್ನ ಬಿ ವರಾಳೆ ಅವರು ಹೇಳಿದರು.
ಅವರು ನಗರದ ಕುಷ್ಟಗಿ ರಸ್ತೆಯ ಜಿಲ್ಲಾ ನ್ಯಾಯಾಲಯಕ್ಕೆ ಭೂಮಿಪೂಜೆ ನೇರವೆರಿಸಿ ಮಾತನಾಡುತ್ತಿದ್ದರು.
ನ್ಯಾಯನಿರ್ಣಯದಲ್ಲಿ ಆಗುವ ವಿಳಂಬ ತಪ್ಪಬೇಕು ಎನ್ನುವ ಸಚಿವರ, ಸಂಸದರ ಸಲಹೆಗಳನ್ನು ತಾವು ಪರಿಗಣನೆಗೆ ತೆಗೆದುಕೊಳ್ಳುವುದಾಗಿ ತಿಳಿಸಿದ ನ್ಯಾಯಮೂರ್ತಿಗಳು, ಯಾವುದೇ ನ್ಯಾಯಾಲಯಗಳಲ್ಲಿ ಅನಗತ್ಯ ವ್ಯಾಜ್ಯಗಳು ಬಾಕಿ ಉಳಿಯಬಾರದು.
ಅವು ತ್ವರಿತಗತಿಯಲ್ಲಿ ವಿಲೇಯಾಗಲು ಅವಶ್ಯವಿರುವ ಮಾನವ ಸಂಪನ್ಮೂಲ ಮತ್ತು ಮೂಲಭೂತ ಸೌಕರ್ಯ ಕಲ್ಪಿಸಲಾಗುತ್ತದೆ. ಕೊಪ್ಪಳ ಜಿಲ್ಲೆಯ ನೂತನ ನ್ಯಾಯಾಲಯ ಸಂಕೀರ್ಣ ನಿರ್ಮಾಣ ನಮ್ಮ ಕಾರ್ಯಸಾಧನೆಯಾಗಿದೆ ಎಂದರು.
ಅಧ್ಯಕ್ಷತೆ ವಹಿಸಿದ್ದ ಗೌರವಾನ್ವಿತ ನ್ಯಾ.ಶ್ರೀಶಾನಂದ ಅವರು ಮಾತನಾಡಿ, ಸ್ವಾತಂತ್ರ ಹೋರಾಟದಲ್ಲಿ ವಕೀಲರ ಪಾತ್ರ ಪ್ರಮುಖವಾಗಿತ್ತು. ಅಂತಹ ಹೋರಾಟ ಪರಂಪರೆಯು ವಕೀಲರ ಸಮೂಹದ್ದಾಗಿದೆ. ಕೊಪ್ಪಳ ಜಿಲ್ಲಾ ರಚನಾ ಹೋರಾಟ ಸೇರಿದಂತೆ ಅನೇಕ ಕಾರ್ಯಸಾಧನೆಯಲ್ಲಿ ಕೊಪ್ಪಳ ಜಿಲ್ಲೆಯ ವಕೀಲರ ಪಾತ್ರ ಹಿರಿದಾಗಿದೆ ಎಂದರು.
ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಾಧೀಶರು ಹಾಗೂ ಕೊಪ್ಪಳ ಜಿಲ್ಲಾ ಆಡಳಿತಾತ್ಮಕ ನ್ಯಾಯಾಧೀಶರಾದ ನ್ಯಾ.ವಿ.ಶ್ರೀಶಾನಂದ, ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಾಧೀಶರಾದ ಗೌರವಾನ್ವಿತ ನ್ಯಾ.ಹಂಚಾಟೆ ಸಂಜೀವಕುಮಾರ, ಸಚಿವರಾದ ಹೆಚ್.ಕೆ.ಪಾಟೀಲ, ಸಂಸದರಾದ ಕರಡಿ ಸಂಗಣ್ಣ, ಶಾಸಕರಾದ ಹೇಮಲತಾ ನಾಯಕ, ಉಚ್ಚ ನ್ಯಾಯಾಲಯದ ರಿಜಿಸ್ಟ್ರಾರ್
ಜನರಲ್ ಕೆ.ಎಸ್. ಭರತಕುಮಾರ, ಜಿಲ್ಲಾ ಪ್ರಧಾನ ಹಾಗೂ ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಗೌರವಾನ್ವಿತ ಚಂದ್ರಶೇಖರ ಸಿ., ವಕೀಲರ ಪರಿಷತ್ ಸದಸ್ಯರಾದ ಅಸಿಪ್ ಅಲಿ, ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್, ಜಿಲ್ಲಾ ಪಂಚಾಯತ್ ಸಿಇಓ ರಾಹುಲ್ ಪಾಂಡೆಯ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯಶೋಧಾ ವಂಟಗೋಡಿ,
ಕೊಪ್ಪಳ ಜಿಲ್ಲಾ ಬಾರ್ ಅಸೋಸಿಯೇಶನ್ ಅಧ್ಯಕ್ಷರಾದ ಎ.ವಿ.ಕಣವಿ, ಪ್ರಧಾನ ಕಾರ್ಯದರ್ಶಿ ಬಿ.ವಿ.ಸಜ್ಜನ್ ಸೇರಿದಂತೆ ಜಿಲ್ಲೆಯ ಸಮಸ್ತ ವಕೀಲ ಸಮೂಹ, ಅನೇಕ ಗಣ್ಯರು ಸಾಕ್ಷಿಯಾದರು. ಈ ನೂತನ ನ್ಯಾಯಾಲಯದ ಅಡಿಗಲ್ಲು ಕಾರ್ಯಾನುಷ್ಠಾನದಲ್ಲಿ ಶ್ರಮಿಸಿದ ಹಿಂದಿನ ಕೊಪ್ಪಳ ಜಿಲ್ಲಾ ನ್ಯಾಯಾಧೀಶರಾದ ವಿಜಯಲಕ್ಷ್ಮಿದೇವಿ ಹಾಗೂ ಬನ್ನಿಕಟ್ಟಿ ಹನುಮಂತಪ್ಪ ಇದ್ದರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರು ಆಗಿರುವ ಕೊಪ್ಪಳ ಜಿಲ್ಲಾ ಪ್ರಧಾನ ಹಾಗೂ ಸತ್ರ ನ್ಯಾಯಾಧೀಶರಾದ ಗೌರವಾನ್ವಿತ ಚಂದ್ರಶೇಖರ ಸಿ ಅವರು ಅತಿಥಿಗಳಿಗೆ ಸ್ವಾಗತಿಸಿ ಪ್ರಾಸ್ತಾವಿಕ ಮಾತನಾಡಿ, ತಾವು ಸೆಪ್ಟೆಂಬರ್ 04ರಂದು ಕೊಪ್ಪಳ ಜಿಲ್ಲಾ ಪ್ರಧಾನ ಹಾಗೂ ಸತ್ರ ನ್ಯಾಯಧೀಶರಾಗಿ ಅಧಿಕಾರ ಸ್ವೀಕರಿಸಿದ್ದು, ಗೌರವಾನ್ವಿತ ಕೊಪ್ಪಳ ಜಿಲ್ಲಾ ಆಡಳಿತಾತ್ಮಕ ನ್ಯಾಯಾಧೀಶರಾದ ನ್ಯಾ.ವಿ.ಶ್ರೀಶಾನಂದ ಅವರು
ತಿಳಿಸಿದಂತೆ ಮತ್ತು ಅವರ ಮಾರ್ಗದರ್ಶನದಲ್ಲಿ
ಕೊಪ್ಪಳ ನಗರದಲ್ಲಿ ನೂತನ ನ್ಯಾಯಾಲಯಗಳ ಸಂಕೀರ್ಣಕ್ಕೆ ಭೂಮಿಪೂಜೆ ಹಾಗೂ ಕುಕನೂರಿನಲ್ಲಿ ಇಟರ್ನರಿ ಸಿವಿಲ್ ನ್ಯಾಯಾಧೀಶರು ಮತ್ತು ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿಗಳ ನ್ಯಾಯಾಲಯಕ್ಕೆ ಉದ್ಛಾಟನೆ ನೆರವೇರಿಸುವಂತೆ ಕಾರ್ಯಸಾಧನೆ ಮಾಡಿದ ತೃಪ್ತಿ ತಮಗಿದೆ ಎಂದು ತಿಳಿಸಿದರು. ಕೊಪ್ಪಳ ಜಿಲ್ಲೆಯಲ್ಲಿ ನೂತನ ನ್ಯಾಯಾಲಯ ಸಂಕೀರ್ಣಕ್ಕೆ ಭೂಮಿಪೂಜೆ ನೆರವೇರುವಲ್ಲಿ ನ್ಯಾ.ಸಂಜೀವಕುಮಾರ ಹಂಚಾಟೆ ಮತ್ತು ಹಿಂದಿನ ಕೊಪ್ಪಳ ಜಿಲ್ಲಾ ನ್ಯಾಯಾಧೀಶರ ಶ್ರಮ ಮತ್ತು ಈ ನ್ಯಾಯಾಲಯ ಸಂಕೀರ್ಣ ನಿರ್ಮಾಣಕ್ಕೆ ಸೂಕ್ತ ಜಮೀನು ದೊರಕಿಸಿ ಕೊಡುವಲ್ಲಿ ಸಂಸದರಾದ ಕರಡಿ ಸಂಗಣ್ಣ ಅವರ ಶ್ರಮ ಕೂಡ ಸ್ಮರಣೀಯವಾಗಿದೆ ಎಂದು ತಿಳಿಸಿದರು.
ಕೊಪ್ಪಳ ಜಿಲ್ಲಾ
ಬಾರ್ ಅಸೋಸಿಯೇಶನ್ ಅಧ್ಯಕ್ಷರಾದ ಎ.ವಿ.ಕಣವಿ ವಂದಿಸಿದರು.
ಸಮಾರಂಭದಲ್ಲಿ ಉಚ್ಚ ನ್ಯಾಯಾಲಯದ ರಿಜಿಸ್ಟರ್ ಜನರಲ್ ಕೆ.ಎಸ್.ಭರತಕುಮಾರ, ಗೌರವಾನ್ವಿತ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ
ಕಾರ್ಯದರ್ಶಿಗಳಾದ ದೇವೇಂದ್ರ ಪಂಡಿತ, ಹಿರಿಯ ಸಿವಿಲ್ ನ್ಯಾಯಾಧೀಶರಾದ ಭವಾನಿ ಎಲ್ ಜೆ., ಸರಸ್ವತಿದೇವಿ, ವಿಜಯಕುಮಾರ ಕನ್ನೂರ, ರಮೇಶ ಗಾಣಿಗೇರ, ಕೊಪ್ಪಳದ ಕಿರಿಯ ಸಿವಿಲ್ ನ್ಯಾಯಾಧೀಶರಾದ ಹರೀಶಕುಮಾರ ಎಂ., ಕುಷ್ಟಗಿಯ ಪ್ರಧಾನ ಸಿವಿಲ್ ನ್ಯಾಯಾಧೀಶರಾದ ಎಸ್ ಸತೀಶ, ಗಂಗಾವತಿಯ
ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶರಾದ ಸದಾನಂದ ನಾಯಕ, ಗಂಗಾವತಿಯ ಕಿರಿಯ ಸಿವಿಲ್ ನ್ಯಾಯಾಧೀಶರಾದ ಡಾ.ಶ್ರೀದೇವಿ ದರಬಾರೆ, ಹೆಚ್ಚುವರಿ ಸಿವಿಲ್ ನ್ಯಾಯಾಧೀಶರಾದ ಗೌರಮ್ಮ ಪಾಟೀಲ, ಲೋಕೋಪಯೋಗಿ ಇಲಾಖೆಯ ಅಭಿಯಂತರರಾದ ಹೇಮಂತರಾಜ್, ವಕೀಲರಾದ ಈಶ್ವರ ಇಂಗಳಳ್ಳಿ, ವಿ.ಎಂ ಭೂಸನೂರಮಠ, ಎನ್.ಆರ್.ಸೂಡಿ, ಎಸ್.ಆರ್. ಹಿರೇಮಠ, ದಿವಾಕರ ಬಾಗಲಕೋಟೆ, ಎ.ಎ. ಚೌತಾಇ, ಕಟ್ಟೆ ಬಸಪ್ಪ, ಫೀರಹುಸೇನ್ ಹೊಸಳ್ಳಿ, ಆರ್.ಬಿ.ಪಾನಗಂಟಿ, ಐ.ವಿ. ಪತ್ತಾರ, ಬಿ.ಕೆ.ದಾಸರ, ಶ್ರೀನಿವಾಸ ಕುಲಕರ್ಣಿ, ಸಂಧ್ಯಾ ಮಾದಿನೂರ, ಗೌರಮ್ಮ ದೇಸಾಯಿ, ಸವಿತಾ ಕಣವಿ, ಉದಯಕುಮಾರ ಹೊಟ್ಟಿ ಸೇರಿದಂತೆ ಅನೇಕ ವಕೀಲರು ಮತ್ತು ವಿವಿಧ ತಾಲೂಕುಗಳ
ವಕೀಲರ ಸಂಘದ ಅಧ್ಯಕ್ಷರು ಮತ್ತು ಕಾರ್ಯದರ್ಶಿಗಳು, ಸದಸ್ಯರು ಮತ್ತು ಇತರರು ಇದ್ದರು.ವಕೀಲರಾದ ಹನುಮಂತರಾವ್ ಎಂ ಎ ನಿರೂಪಿಸಿದರು.ಶಕುಂತಲಾ ಬಿನ್ನಾಳ ಹಾಗೂ ಸಂಗಡಿಗರು ಪ್ರಾರ್ಥಿಸಿದರು.