2c136fae-be38-4577-97e1-318669006cc9

ಕೊಪ್ಪಳ ನಗರಸಭೆ : ಬಿಡಾಡಿ ದನಗಳ ಮಾಲೀಕರಿಗೆ ಸೂಚನೆ

ಕರುನಾಡ ಬೆಳಗು ಸುದ್ದಿ

ಕೊಪ್ಪಳ, 3-ಕೊಪ್ಪಳ ನಗರದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ದನಗಳನ್ನು ರಸ್ತೆಗೆ ಬಿಡುತ್ತಿದ್ದು, ಇದರಿಂದಾಗಿ ಸಾರ್ವಜನಿಕರಿಗೆ ಸಾಕಷ್ಟು ತೊಂದರೆ ಉಂಟಾಗುತ್ತಿದೆ. ಬಿಡಾಡಿ ದನಗಳ ಮಾಲೀಕರು ತಮ್ಮ ಜಾನುವಾರುಗಳನ್ನು ಮನೆಯಲ್ಲಿ ಕಟ್ಟಿ ಹಾಕಿಕೊಳ್ಳಬೇಕು ಎಂದು ಕೊಪ್ಪಳ ನಗರಸಭೆ ಪೌರಾಯುಕ್ತರು ತಿಳಿಸಿದ್ದಾರೆ.

ಬಿಡಾಡಿ ದನಗಳು ನಗರದ ತುಂಬೆಲ್ಲಾ ಹೆಚ್ಚಿನ ಪ್ರಮಾಣದಲ್ಲಿ ಇರುತ್ತವೆ. ಬಿಡಾಡಿ ದನಗಳಿಂದ ಸಾರ್ವಜನಿಕರಿಗೆ ತೊಂದರೆ ಉಂಟಾಗುತ್ತದೆ. ನಗರದಲ್ಲಿ ಹಾಯ್ದು ಹೋಗಿರುವ ರಾಷ್ಟಿçÃಯ ಹೆದ್ದಾರಿಯಲ್ಲಿ ರಸ್ತೆ ಮಧ್ಯದಲ್ಲಿ ಬಿಡಾಡಿ ದನಗಳು ಮಲಗುವುದರಿಂದ ವಾಹನ ಸಂಚಾರಕ್ಕೆ ತೊಂದರೆ ಉಂಟಾಗಿದ್ದು, ಇದರಿಂದ ರಸ್ತೆ ಅಪಘಾತಗಳು ಕೂಡಾ ಸಂಭವಿಸುತ್ತವೆ.

ಬಿಡಾಡಿ ದನಗಳು ತರಕಾರಿ ಮಾರುಕಟ್ಟೆಗಳಲ್ಲಿ ತರಕಾರಿಗಳನ್ನು ತಿನ್ನುವ ನೂಕು-ನುಗ್ಗಲಿನಲ್ಲಿ ಮಾರುಕಟ್ಟೆಗೆ ಬಂದಿರುವ ಸಾರ್ವಜನಿಕರಿಗೆ ತೊಂದರೆ ಉಂಟಾಗಿರುತ್ತದೆ. ಹಾಗೂ ತರಕಾರಿ ಮಾರಾಟಗಾರರಿಗೂ ಸಹ ತುಂಬಾ ತೊಂದರೆ ಉಂಟಾಗಿರುತ್ತದೆ. ನಗರದ ವಿವಿಧ ಬಡಾವಣೆಗಳಲ್ಲಿ ಕಿರಿದಾದ ರಸ್ತೆಗಳಲ್ಲಿ ದನಗಳು ಗುದ್ದಾಡುತ್ತಾ ಓಡಿ ಬುರುವುದರಿಂದ ಸಣ್ಣ ಪುಟ್ಟ ಮಕ್ಕಳಿಗೆ ಹಾಗೂ ದ್ವಿಚಕ್ರ ವಾಹನ ಸವಾರರಿಗೆ ಸಹ ಅಪಘಾತ ಉಂಟಾಗುತ್ತಿವೆ. ರಸ್ತೆ ಮಧ್ಯದಲ್ಲಿ ಬಿಡಾಡಿ ದನಗಳು ಗುಂಪು ಗುಂಪಾಗಿ ನಿಲ್ಲುವುದರಿಂದ ಟ್ರಾಫಿಕ್ ಜಾಮ್ ಆಗಿ ಅಪಘಾತ ಉಂಟಾಗುತ್ತಿವೆ. ಮತ್ತು ವಾಹನ ಸಂಚಾರಕ್ಕೆ ತೊಂದರೆ ಉಂಟಾಗುತ್ತಿವೆ.

ಆದಕಾರಣ ಸಂಬAಧಪಟ್ಟ ದನಗಳ ಮಾಲೀಕರುಗಳು ಈ ಸಾರ್ವಜನಿಕ ಪ್ರಕಟಣೆ ಪ್ರಕಟಗೊಂಡ 01 ದಿನದೊಳಗಾಗಿ ತಮ್ಮ ತಮ್ಮ ದನಕರುಗಳನ್ನು ತಮ್ಮ ಮನೆಯಲ್ಲಿ ಕಟ್ಟಿಹಾಕಿಕೊಂಡು ಸಾಕಬೇಕು. ಇಲ್ಲವೇ ದನಗಳಿಗೆ ಪರ್ಯಾಯ ವ್ಯವಸ್ಥೆ ಮಾಡಿಕೊಳ್ಳಬೇಕು. ಬಿಡಾಡಿ ದನಗಳನ್ನು ನಗರಸಭೆ ವಶಕ್ಕೆ ಪಡೆದುಕೊಂಡು ಗೋಶಾಲೆಗೆ ಹಸ್ತಾಂತರಿಸಲಾಗುವುದು. ನಂತರ ಯಾರಾದರೂ ಮಾಲೀಕರು ತಮ್ಮದೇ ದನಗಳೆಂದು ನಗರಸಭೆ ಕಚೇರಿಗೆ ಬಂದಲ್ಲಿ ತಮ್ಮ ಮೇಲೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!