2c136fae-be38-4577-97e1-318669006cc9

ಕೊಪ್ಪಳ ನಗರಸಭೆ : ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

ಕರುನಾಡ ಬೆಳಗು ಸುದ್ದಿ

ಕೊಪ್ಪಳ, 20- ಕೊಪ್ಪಳ ನಗರಸಭೆ ವತಿಯಿಂದ ಆರ್ಥಿಕವಾಗಿ ಹಿಂದುಳಿದ ಬಡಕುಟುಂಬದ ಸದಸ್ಯರಿಗೆ 2024-25ನೇ ಸಾಲಿನ ಡೇ-ನಲ್ಮ್ ಅಭಿಯಾನದಡಿ ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.

ಸ್ವ-ಸಹಾಯ ಗುಂಪು ರಚನೆ, ಸ್ವಯಂ ಉದ್ಯೋಗ ಸಾಲ (ವೈಯಕ್ತಿಕ), ಸ್ವ-ಸಹಾಯ ಗುಂಪುಗಳಿಗೆ ಬ್ಯಾಂಕ್ ಕ್ರೆಡಿಟ್ ಲಿಂಕೇಜ್ ಸಾಲ ಸೌಲಭ್ಯಕ್ಕಾಗಿ ಅರ್ಹ ಫಲಾನುಭವಿಗಳು ಅರ್ಜಿ ಸಲ್ಲಿಸಬಹುದು.

ಆಸಕ್ತರು ನಿಗದಿತ ಅರ್ಜಿ ನಮೂನೆಗಳನ್ನು ಭರ್ತಿ ಮಾಡಿ, ಚಾಲ್ತಿ ಆದಾಯ ಮತ್ತು ಜಾತಿ ಪ್ರಮಾಣ ಪತ್ರ (ಆರ್‌ಡಿ ಸಂಖ್ಯೆ), ಬ್ಯಾಂಕ್ ಪಾಸ್‌ಬುಕ್, ಮತದಾರರ ಗುರುತಿನ ಚೀಟಿ, ರೇಷನ್‌ಕಾರ್ಡ, ಆಧಾರ್‌ಕಾರ್ಡ್, ಪಾಸ್‌ಪೋಟ್ ಅಳತೆಯ 02 ಭಾವಚಿತ್ರಗಳೊಂದಿಗೆ ಜೂನ್ 30 ರೊಳಗಾಗಿ ಕಾರ್ಯಾಲಯಕ್ಕೆ ಅರ್ಜಿ ಸಲ್ಲಿಸಬೇಕು.

ಅಪೂರ್ಣ ಮತ್ತು ಅವಧಿ ಮೀರಿ ಬಂದ ಅರ್ಜಿಯನ್ನು ಪರಿಗಣಿಸಲಾಗುವುದಿಲ್ಲ. ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡುವ ಅಧಿಕಾರವನ್ನು ಟಾಸ್ಕ್ಫೋರ್ಸ್ ಸಮಿತಿ ಕಾಯ್ದಿರಿಸಿಕೊಂಡಿರುತ್ತದೆ.

ಹೆಚ್ಚಿನ ಮಾಹಿತಿಗಾಗಿ ನಗರಸಭೆ ಕಚೇರಿಯ ಡೇ-ನಲ್ಮ್ ವಿಭಾಗವನ್ನು ಸಂಪರ್ಕಿಸಬಹುದು ಎಂದು ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!