ಜಿಲ್ಲಾ ಬಿಜೆಪಿ ಜಿಲ್ಲಾಧ್ಯಕ್ಷ ಗಾದೆ ಯಾರಿಗೆ
ಕರುನಾಡ ಬೆಳಗು ಸುದ್ದಿ
ಕೊಪ್ಪಳ, 14- ರಾಜದಲ್ಲಿ ಬಿಜೆಪಿ ಪಕ್ಷಕ್ಕೆ ರಾಜ್ಯ ಅಧ್ಯಕ್ಷ ಸ್ಥಾನಕ್ಕೆ ಬಿ.ವೈ.ವಿಜಯೇಂದ್ರ ಅವರನ್ನು ವರಿಷ್ಠರು ನೇಮಕ ವಾಗುತ್ತಿದ್ದಂತೆ ಕೊಪದ ಬಿಜೆಪಿಯ ಜಿಲ್ಲಾ ಘಟಕದ ನೂತನ ಸಾರಥಿ ಯಾರಾಗಲಿದ್ದಾರೆ ಎಂಬದು ರಾಜಕೀಯ ವಲಯದಲ್ಲಿ ಚರ್ಚೆ ಜೋರಾಗಿ ನಡೆದಿದೆ.
ರಾಜ್ಯಧ್ಯಕ್ಷರಾಗಿ ವಿಜಯೇಂದ್ರ ಆಯ್ಕೆ ಆಗುತ್ತಿದಂತೆ ಪಕ್ಷಕ್ಕೆ ಆನೆ ಬಲ ಬಂದಂತಾಗಿದ್ದು. ಜಿಲ್ಲಾಧ್ಯಕ್ಷ ಸ್ಥಾನ ಪಡೆಯಲು ಜೋರಾದ ಪೈಪೋಟಿ ನಡೆದಿದೆ.
ಜಿಲ್ಲೆಯಲ್ಲಿ ಈವರೆಗೆ ವಿಜಯೇಂದ್ರ ಅವರ ಬಣದಲ್ಲಿಯೇ ಗುರುತಿಸಿಕೊಂಡಿದ್ದ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ನವೀನ ಗುಳಗಣ್ಣನವರ, ಮಾಜಿ ಶಾಸಕರಾದ ಪರಣ್ಣ ಮುನವಳ್ಳಿ, ಬಸವರಾಜ ದಡೆಸ್ಗೂರು ಹಾಗೂ ಈಚೆಗೆ ನಡೆದ ವಿಧಾನಸಭೆ ಚುನಾವಣೆಯಲ್ಲಿ ಕೊಪ್ಪಳ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿದ್ದ ಸಂಸದ ಸಂಗಣ್ಣ ಕರಡಿಯವರ ಹಿರಿ ಸೊಸೆ ಮಂಜುಳಾ ಕರಡಿ ಅವರ ಹೆಸರು ಮಂಚೂಣಿಯಲ್ಲಿದ್ದು, ಯಾರಿಗೆ ಅವಕಾಶ ಸಿಗಲಿದೆ ಎಂಬುದನ್ನು ಕಾದು ನೋಡಬೇಕಿದೆ ಕಾದು ನೋಡಬೇಕಿದೆ.

ನೆಲ ಕಚ್ಚಿದ ಬಿಜೆಪಿ ; ಸಾರ್ವತ್ರಿಕ ವಿಧಾನ ಸಭಾ ಚುನಾವಣೆಯಲ್ಲಿ ಜಿಲ್ಲೆಯಲ್ಲಿ ಬಿಜೆಪಿ ಒಂದು ಸ್ಥಾನ ಮಾತ್ರ ಗೆದ್ದಿದ್ದು. ಉಳಿದೆಲ್ಲಾ ಕ್ಷೇತ್ರದಲ್ಲಿ ಸೋತು ಸುಣ್ಣಾಗಿದೆ.
ಬಿಜೆಪಿ ಜಿಲ್ಲಾಧ್ಯಕ್ಷರಾಗಿ ಅಧಿಕಾರ ವಹಿಸಿಕೊಳ್ಳುವವರಿಗೆ ನೂರೆಂಟು ಸವಾಲೂಗಳಿದ್ದು. ಯಾರು ಅಧ್ಯಕ್ಷರಾಗುವುರೋ ಕಾದು ನೋಡಬೇಕು.
–
