ಕೊಪ್ಪಳ ವಿವಿ : ದೇವದಾಸಿ ಮಕ್ಕಳಿಗೆ ಹಾಗೂ ಅಂಧ ವಿದ್ಯಾರ್ಥಿಗಳಿಗೆ ಉಚಿತ ಪ್ರವೇಶಕ್ಕೆ ತೀರ್ಮಾನ
ಕರುನಾಡ ಬೆಳಗು ಸುದ್ದಿ
ಕೊಪ್ಪಳ, 14- ಕೊಪ್ಪಳ ವಿಶ್ವವಿದ್ಯಾಲಯದಲ್ಲಿ ಜೂನ್ 12 ರಂದು ಸಿಂಡಿಕೇಟ್ ಸಭೆ ನಡೆಯಿತು. ಈ ಸಭೆಯಲ್ಲಿ 2024-25ನೇ ಶೈಕ್ಷಣಿಕ ಸಾಲಿನಲ್ಲಿ ಸ್ನಾತಕೋತ್ತರ ಪದವಿಯ ಪ್ರವೇಶಾತಿಯಲ್ಲಿ ದೇವದಾಸಿ ಮಕ್ಕಳಿಗೆ ಹಾಗೂ ಅಂಧ ವಿದ್ಯಾರ್ಥಿಗಳಿಗೆ ಉಚಿತವಾಗಿ ಪ್ರವೇಶ ನೀಡಲು ಜೂನ್ 12 ರಂದು ಕೊಪ್ಪಳ ವಿಶ್ವವಿದ್ಯಾಯದಲ್ಲಿ ನಡೆದ ಸಿಂಡಿಕೇಟ್ ಸಭೆಯಲ್ಲಿ ಸರ್ವಾನುಮತದಿಂದ ತೀರ್ಮಾನಿಸಲಾಯಿತು.
ಮುಂದಿನ ದಿನಗಳಲ್ಲಿ ವಿವಿಯ ಸ್ನಾತಕೋತ್ತರ ಪದವಿಯ ಪ್ರವೇಶಾತಿ ಸಂದರ್ಭ ದೇವದಾಸಿ ಮಕ್ಕಳಿಗೆ ಹಾಗೂ ಅಂಧ ವಿದ್ಯಾರ್ಥಿಗಳಿಗೆ ಉಚಿತವಾಗಿ ಪ್ರವೇಶ ನೀಡಲಾಗುವುದು ಎಂದು ವಿವಿ ಕುಲಸಚಿವರಾದ ಪ್ರೊ.ಕೆ.ವಿ.ಪ್ರಸಾದ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
