
ಕ್ಯಾನ್ಸರ್ ಬಗ್ಗೆ ಜಾಗೃತಿ ಇರಲಿ: ಡಿಹೆಚ್‍ಓ ಡಾ.ರಮೇಶ್‍ಬಾಬು
ಕರುನಾಡ ಬೆಳಗು ಸುದ್ದಿ
ಬಳ್ಳಾರಿ,05-ಸಾರ್ವಜನಿಕರು ಕ್ಯಾನ್ಸರ್ ಖಾಯಿಲೆಯ ಬಗ್ಗೆ ಜಾಗೃತಿ ಮತ್ತು ಅರಿವು ಹೊಂದಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ವೈ.ರಮೇಶ್ ಬಾಬು ಅವರು ತಿಳಿಸಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ‘ಆರೈಕೆ ಅಂತರವನ್ನು ಮುಕ್ತಗೊಳಿಸಿ’ 2024ರ ಘೋಷವಾಕ್ಯದೊಂದಿಗೆ “ವಿಶ್ವ ಕ್ಯಾನ್ಸರ್ ದಿನಾಚರಣೆ” ಹಾಗೂ ‘ತಂಬಾಕು ಸೇವನೆಯ ನಿಯಂತ್ರಣಕ್ಕಾಗಿ ಗುಲಾಬಿ ಅಂದೋಲನ’ ಕಾರ್ಯಕ್ರಮದ ಅಂಗವಾಗಿ ಜಿಲ್ಲಾ ಆಸ್ಪತ್ರೆ ಆವರಣದಿಂದ ಶನಿವಾರ ಹಮ್ಮಿಕೊಂಡಿದ್ದ ಜನಜಾಗೃತಿ ಜಾಥಾಗೆ ಹಸಿರು ನಿಶಾನೆ ತೋರಿಸುವುದರ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು.
ಕ್ಯಾನ್ಸರ್‍ನಲ್ಲಿ ಸುಮಾರು ನೂರಕ್ಕಿಂತ ಹೆಚ್ಚು ವಿಧಗಳಿವೆ. ಅವುಗಳಲ್ಲಿ ಚರ್ಮದ ಕ್ಯಾನ್ಸರ್, ಸ್ತನ ಕ್ಯಾನ್ಸರ್, ಶ್ವಾಸಕೋಶದ ಕ್ಯಾನ್ಸರ್, ಪ್ರಾಸ್ಟೇಟ್ ಕ್ಯಾನ್ಸರ್, ಕೊಲೊರೆಕ್ಟಲ್ ಕ್ಯಾನ್ಸರ್, ಮೆಲನೋಮ, ಲಿಂಫೆÇೀಮ ಕ್ಯಾನ್ಸರ್, ಮೂತ್ರಪಿಂಡದ ಕ್ಯಾನ್ಸರ್‍ಗಳಿವೆ. ಆದರೆ ಬಾಯಿ, ಗರ್ಭಾಶಯ ಮತ್ತು ಸ್ತನ ಕ್ಯಾನ್ಸರ್ ಹೆಚ್ಚಾಗಿ ಕಂಡು ಬರುತ್ತವೆ ಎಂದು ಅವರು ತಿಳಿಸಿದರು.
30 ವರ್ಷ ಮೇಲ್ಪಟ್ಟ ಮಹಿಳೆಯರು 3 ವರ್ಷಗಳಿಗ್ಮೊಮ್ಮೆ ಸ್ತನ ಕ್ಯಾನ್ಸರ್ ಮತ್ತು ಗರ್ಭಕಂಠದ ಕ್ಯಾನ್ಸರ್‍ನ ತಪಾಸಣೆಯನ್ನು ಮಾಡಿಸಿಕೊಳ್ಳಬೇಕು. ಕ್ಯಾನ್ಸರ್ ಚಿಕಿತ್ಸೆಗೆ ಪ್ರತೇಕವಾದ ಚಿಕಿತ್ಸಾ ಘಟಕ ವಿಜಯನಗರ ವೈದ್ಯಕೀಯ ಮಹಾ ವಿದ್ಯಾಲಯದಲ್ಲಿದೆ. ಘಟಕದ ಸದುಪಯೋಗ ಪಡೆದುಕೊಳ್ಳಬೇಕು ಎಂದರು.
ಜಿಲ್ಲಾ ಸಾಂಕ್ರಾಮಿಕ ರೋಗಗಳ ನಿಯಂತ್ರಣ ಕಾರ್ಯಕ್ರಮ ಅಧಿಕಾರಿ ಹಾಗೂ ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಮರಿಯಂಬಿ.ವಿ.ಕೆ ಅವರು ಮಾತನಾಡಿ, ಹಿಂದಿನ ದಿನಗಳಲ್ಲಿ ಕ್ಯಾನ್ಸರ್ ಚಿಕಿತ್ಸೆ ಮತ್ತು ಲಸಿಕೆ ಕುರಿತು ಹೆಚ್ಚಿನ ಸಂಶೋಧನೆಗಳಿಲ್ಲದೆ ಕ್ಯಾನ್ಸರ್ ಚಿಕಿತ್ಸೆಗೆ ತಪಾಸಣೆ ಕಬ್ಬಿಣದ ಕಡಲೆಯಂತಿತ್ತು ಎಂದು ಮನನ ಮಾಡಿದರು.
ಇಂದು ಅಧುನಿಕ ಜೀವನ ಶೈಲಿಗಳಿಂದ ತಂಬಾಕು ಬಳಕೆಯಿಂದ ಅನೇಕ ರೀತಿಯ ಆರೋಗ್ಯ ಸಮಸ್ಯೆಗಳಿಗೆ ತುತ್ತಾಗುತ್ತಿದ್ದಾರೆ.