WhatsApp Image 2024-06-17 at 4.24.28 PM

ಗಂಗಾವತಿ ದರೋಜಿ ವಯಾ ಕಂಪ್ಲಿ ಬ್ರಾಡ್ ಗೇಜ್ ರೈಲ್ವೆ ಸಂಪರ್ಕ ಸಂಸದಗೆ ಮನವಿ

ಕರುನಾಡ ಬೆಳಗು ಸುದ್ದಿ

ಬಳ್ಳಾರಿ, 17- ಕಂಪ್ಲಿ ತಾಲೂಕ ರೈಲ್ವೆ ಮಾರುಕವಾಗಿ ಕ್ರಿಯಾ ಸಮಿತಿ ಪದಾಧಿಕಾರಿಗಳು ಸಂಡೂರ್ ನಲ್ಲಿ ಸಂಸದ ಈ ತುಕಾರಾಂ ಅವರಿಗೆ ಮನವಿ ಸಲ್ಲಿಸಿದರು. ಸಮಿತಿ ಅಧ್ಯಕ್ಷ ಕೆ ಎಂ ಹೇಮಯ್ಯ ಸ್ವಾಮಿ ಮಾತನಾಡಿ ಗಂಗಾವತಿ ದರೋಜಿ ವಯಾ ಕಂಪ್ಲಿ ಬ್ರಾಡ್ ಗೇಜ್ ರೈಲ್ವೆ ಸಂಪರ್ಕ ಕಾಮಗಾರಿಯ ಸರ್ವೆ ಕಾರ್ಯ ಪೂರ್ಣಗೊಂಡಿದ್ದು ಸುಮಾರು 919.49 ಕೋಟಿ ರೂಪಾಯಿಗಳ ವೆಚ್ಚ ಅಂದಾಜಿಸಿದ್ದು ಕಾಮಗಾರಿ ಆರಂಭಗೊಳ್ಳಬೇಕಿದೆ ಇದಕ್ಕಾಗಿ ರೈಲ್ವೆ ಮಂಡಳಿಯಿಂದ ಅನುಮೋದನೆ ಬೇಕಿದೆ. ದಯವಿಟ್ಟು ತಾವು ಮತ್ತು ವಹಿಸಿ ರೈಲ್ವೆ ಸಂಪರ್ಕ ಕಾಮಗಾರಿ ಆರಂಭಕ್ಕೆ ಸೂಕ್ತ ಕ್ರಮ ಕೈಗೊಳ್ಳುವಂತೆ ಸಂಸದರಿಗೆ ಮನವಿ ಮಾಡಿದರು.

ಕಲ್ಯಾಣ ಕರ್ನಾಟಕ ಭಾಗಗಳ ಸಂಪರ್ಕ ಕಲ್ಪಿಸುವ ಕಂಪ್ಲಿ ಗಂಗಾವತಿ ಮಧ್ಯದಲ್ಲಿರುವ ತುಂಗಭದ್ರ ನದಿಗೆ ಸೇತುವೆ 65 ವರ್ಷಗಳ ಹಿಂದೆ ನಿರ್ಮಾಣವಾಗಿದ್ದು ಶಿಥಿಲ ಗೊಂಡಿದೆ. ಉತ್ತರ ಕರ್ನಾಟಕ ಕಲ್ಯಾಣ ಕರ್ನಾಟಕ ಹಾಗೂ ತೆಲಂಗಾಣ ರಾಜ್ಯಗಳ ಅನೇಕ ನಗರಗಳಿಗೆ ಸಂಪರ್ಕ ಕಲ್ಪಿಸುವ ಪ್ರಮುಖ ಸೇತುವೆ ಇದಾಗಿರುತ್ತದೆ. ಹೊಸ ಸೇತುವೆ ನಿರ್ಮಿಸುವಂತೆ ಅನೇಕ ವರ್ಷಗಳಿಂದ ಒತ್ತಾಯಿಸುತ್ತಾ ಬಂದಿದ್ದರು ಇನ್ನೊಬ್ಬರಿಗೆ ಈಡೇರಿಲ್ಲ ಈ ಹಿಂದಿನ ಸರ್ಕಾರದಲ್ಲಿ ಹೊಸ ಸೇತುವೆ ನಿರ್ಮಾಣಕ್ಕೆ 69 ಕೋಟಿ ರೂಪಾಯಿಗಳ ವೆಚ್ಚದಲ್ಲಿ ಸೇತುವೆ ನಿರ್ಮಿಸಲು ಯೋಜಿಸಲಾಗಿತ್ತು ಆದರೆ ಇದು ಕಾರ್ಯಗತವಾಗಿಲ್ಲ ಹೊಸ ಸೇತುವೆ ನಿರ್ಮಾಣಕ್ಕೆ ಕ್ರಮ ವಹಿಸಲು ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ ಅಧ್ಯಕ್ಷರಾದ ಅಜಯ್ ಸಿಂಗ್ ಅವರಿಗೆ ಶಿಫಾರಸ್ಸು ಪತ್ರ ಬರೆಯುವಂತೆ ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಕ್ರಿಯಾ ಸಮಿತಿಯ ಉಪಾಧ್ಯಕ್ಷ ನಾರಾಯಣ ಇಂಗಳಗಿ ಕಾರ್ಯದರ್ಶಿ ಹಾದಿಮನಿ ಕಾಳಿಂಗ ವರ್ಧನ ಇದ್ದರು.

Leave a Reply

Your email address will not be published. Required fields are marked *

error: Content is protected !!