ಗಂಗಾವತಿ : ವಸತಿ ನಿಲಯಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ
ಕರುನಾಡ ಬೆಳಗು ಸುದ್ದಿ
ಕೊಪ್ಪಳ, 25- 2024-25ನೇ ಸಾಲಿಗಾಗಿ ಗಂಗಾವತಿ, ಕನಕಗಿರಿ ಹಾಗೂ ಕಾರಟಗಿ ತಾಲ್ಲೂಕಾ ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯ ಮೆಟ್ರಿಕ್ ಪೂರ್ವ/ಮೆಟ್ರಿಕ್ ನಂತರದ ಬಾಲಕರ/ಬಾಲಕಿಯರ ವಸತಿ ನಿಲಯಗಳ ಪ್ರವೇಶಕ್ಕೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಪರಿಶಿಷ್ಟ ಜಾತಿಯ ಮೆಟ್ರಿಕ್ ಪೂರ್ವ ವಸತಿ ನಿಲಯಗಳಾದ ಗಂಗಾವತಿ, ಕನಕಗಿರಿ, ಮುಸಲಾಪುರ, ನವಲಿ ಹಾಗೂ ಕಾರಟಗಿಯ ಡಾ.ಬಿ.ಆರ್.ಅಂಬೇಡ್ಕರ್ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯ, ಗಂಗಾವತಿ ಹಾಗೂ ಕನಕಗಿರಿಯ ಡಾ.ಬಿ.ಆರ್.ಅಂಬೇಡ್ಕರ್ ಮೆಟ್ರಿಕ್ ಪೂರ್ವ ಬಾಲಕಿಯರ ವಸತಿ ನಿಲಯ, ಮೆಟ್ರಿಕ್ ನಂತರದ ವಸತಿ ನಿಲಯಗಳಾದ ಗಂಗಾವತಿ ಹಾಗೂ ಕನಕಗಿರಿಯ ಡಾ.ಬಿ.ಆರ್.ಅಂಬೇಡ್ಕರ್ ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯ ಮತ್ತು ಗಂಗಾವತಿಯ ಡಾ.ಬಿ.ಆರ್.ಅಂಬೇಡ್ಕರ್ ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯಗಳ ಪ್ರವೇಶಕ್ಕೆ ಅರ್ಹ ವಿದ್ಯಾರ್ಥಿಗಳು ಸಮಾಜ ಕಲ್ಯಾಣ ಇಲಾಖೆಯ ವೆಬ್ಸೈಟ್ www.sw.kar.nic.in ಮೂಲಕ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸಿದ ನಂತರ ಅರ್ಜಿ ಪ್ರತಿಯೊಂದಿಗೆ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಹಿಂದಿನ ತರಗತಿಯ ಅಂಕಪಟ್ಟಿಯ ದೃಢೀಕೃತ ಜರಾಕ್ಸ್ ಪ್ರತಿಗಳು, ವಿದ್ಯಾರ್ಥಿ ಹಾಗೂ ಪೋಷಕರ ಆಧಾರ್ ಕಾರ್ಡ್ ಪ್ರತಿಗಳು ಮತ್ತು ವಿದ್ಯಾರ್ಥಿಯ ಪಾಸ್ಪೋರ್ಟ್ ಅಳತೆಯ 04 ಭಾವಚಿತ್ರಗಳೊಂದಿಗೆ ಸಹಾಯಕ ನಿರ್ದೇಶಕರು ಗ್ರೇಡ್-1, ಸಮಾಜ ಕಲ್ಯಾಣ ಇಲಾಖೆ, ಗಂಗಾವತಿ ಕಾರ್ಯಾಲಯಕ್ಕೆ ಸಲ್ಲಿಸಬೇಕು ಎಂದು ಇಲಾಖೆಯ ಸಹಾಯಕ ನಿರ್ದೇಶಕರು (ಗ್ರೇಡ್-1) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
