WhatsApp Image 2024-06-20 at 5.05.25 PM

ಗ್ಯಾರೆಂಟಿ ಯೋಜನೆಗಳ ತಾಲೂಕು ಅಧ್ಯಕ್ಷರ ಕಾರ್ಯಾಲಯ ಉದ್ಘಾಟನೆ

ಕರುನಾಡ ಬೆಳಗು ಸುದ್ದಿ

ಕುಕನೂರ, 20- ರಾಜ್ಯ ಸರ್ಕಾರದ ಗ್ಯಾರೆಂಟಿ ಯೋಜನೆಗಳ ತಾಲೂಕು ಅಧ್ಯಕ್ಷರ ಕಾರ್ಯಾಲಯವನ್ನು ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಹಾಗೂ ಯಲಬುರ್ಗಾ ವಿಧಾನಸಭಾ ಕ್ಷೇತ್ರದ ಶಾಸಕ ಬಸವರಾಜ ರಾಯರಡ್ಡಿ ಅವರು ಉದ್ಘಾಟನೆ ಮಾಡಿದರು.

ತದನಂತರ ಅವರು ಮಾತನಾಡಿ, ಕುಕುನೂರು ಪಟ್ಟಣದ ತಾಲೂಕು ಪಂಚಾಯಿತಿ ಆವರಣದ ಕಚೇರಿಯಲ್ಲಿ ಗುರುವಾರ ರಾಜ್ಯ ಸರ್ಕಾರದ ಗ್ಯಾರೆಂಟಿ ಯೋಜನೆಗಳ ತಾಲೂಕು ಕಾರ್ಯಾಲಯ ಉದ್ಘಾಟನೆ ಮಾಡಲಾಗಿದ್ದು ತಾಲೂಕಿನ ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದರು.

ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ತಾಲೂಕ ಅಧ್ಯಕ್ಷರ ಕಾರ್ಯಾಲಯ ನೂತನ ಅಧ್ಯಕ್ಷರು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸಂಗಪ್ಪ ವೀರಪ್ಪ ಗುತ್ತಿ ಯವರಿಗೆ ಶುಭ ಹಾರೈಸಿ ಜನರಿಗೆ ಗ್ಯಾರಂಟಿ ಯೋಜನೆಗಳನ್ನು ತಲುಪಿಸಲು ಪ್ರಾಮಾಣಿಕವಾಕವಾಗಿ ಪ್ರಯತ್ನ ಮಾಡಲು ಸೂಚಿಸಿದರು.

ಈ ಕಾರ್ಯಕ್ರಮದಲ್ಲಿ ತಾಪಂ ಕಾರ್ಯನಿರ್ವಾಹಕ ಅಧಿಕಾರಿಗಳಾದ ಸಂತೋಷ ಬಿರಾದರ್ ಪಾಟೀಲ್, ತಾಲೂಕ ಯೋಜನಾಧಿಕಾರಿಗಳು ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಮುಖಂಡರು ಭಾಗವಹಿಸಿದ್ದರು.

Leave a Reply

Your email address will not be published. Required fields are marked *

error: Content is protected !!