
ಗ್ರಾಮೀಣ ಭಾಗದಲ್ಲಿ ಸಿಇಓ ಸಂಚಾರ : ಮೂಲಭೂತ ಸೌಕರ್ಯಗಳ ಪರಿಶೀಲನೆ
ಕರುನಾಡ ಬೆಳಗು ಸುದ್ದಿ
ವಿಜಯನಗರ,24- ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಸದಾಶಿವ ಪ್ರಭು ಬಿ ಗ್ರಾಮೀಣ ಪ್ರದೇಶದಲ್ಲಿ ಪ್ರವಾಸ ಕೈಗೊಂಡು ವಿವಿಧೆಡೆ ಭೇಟಿ ನೀಡಿ ಮೂಲಭೂತ ಸೌಕರ್ಯಗಳ ಬಗ್ಗೆ ಪರಿಶೀಲಿಸಿದರು.
ಮಧ್ಯಾಹ್ನ ತಂಬ್ರಹಳ್ಳಿ ಗ್ರಾಮದಲ್ಲಿನ ಸಮಾಜ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯಕ್ಕೆ ಆಕಸ್ಮಿಕವಾಗಿ ಭೇಟಿ ನೀಡಿದರು. ಅಲ್ಲಿನ ಶೌಚಾಲಯದ ಪೈಪ್‌ಲೈನ್ ಒಡೆದು ಕಲುಷಿತ ನೀರು ಹೊರಹೋಗುತ್ತಿರುವುದನ್ನು ಗಮನಿಸಿದರು.
ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕಕರೊಂದಿಗೆ ದೂರವಾಣಿ ಮೂಲಕ ಮಾತನಾಡಿ ಅಲ್ಲಿನ ಅವ್ಯವಸ್ಥೆಯನ್ನು ಕೂಡಲೇ ಸರಿಪಡಿಸುವಂತೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದರು.
ಇದೇ ವೇಳೆ ಸಿಇಓ ಅವರು ವಸತಿ ನಿಲಯದಲ್ಲಿನ ವಿದ್ಯಾರ್ಥಿಗಳೊಂದಿಗೆ ಕೆಲ ಹೊತ್ತು ಆಪ್ತವಾಗಿ ಮಾತನಾಡಿ ಅವರ ಓದು ವಿದ್ಯಭ್ಯಾಸದ ಬಗ್ಗೆ ಚರ್ಚಿಸಿದರು. ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು ಸರಿಯಾಗಿ ಎದುರಿಸಿರಿ ಎಂದು ವಿದ್ಯಾರ್ಥಿಗಳಿಗೆ ಸಿಇಓ ಅವರು ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಹಗರಿಬೊಮ್ಮನಹಳ್ಳಿ ತಾಲೂಕು ಪಂಚಾಯತನ ಕಾರ್ಯನಿರ್ವಾಹಕ ಅಧಿಕಾರಿ ಜಿ ಪರಮೇಶ್ವರ್ ಇದ್ದರು.