ಕೆಎಸ್ ದಿವಾಕರ್ ನೇತೃತ್ವದಲ್ಲಿ ಹಲವರು ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆ
ಕರುನಾಡ ಬೆಳಗು ಸುದ್ದಿ
ಸಂಡೂರು, 30 – ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ ಸಂಡೂರು ತಾಲೂಕ, ಚೋರನೂರು ಗ್ರಾಮದಲ್ಲಿ ಇಂದು ಕಮಲ ಅರಳಿದೆ ಎನ್ನಬಹುದು. ಈ ಗ್ರಾಮದ ಹಲವಾರು ಮಂದಿ ಕಾಂಗ್ರೆಸ್ ಕಾರ್ಯಕರ್ತರು ತಮ್ಮ ಪಕ್ಷವನ್ನು ತೊರೆದು ಬಿಜೆಪಿ ಮುಖಂಡ, ಮಾಜಿ ಕಾರ್ಪೊರೇಟರ್ ಕೆ ಎಸ್ ದಿವಾಕರ್ ನೇತೃತ್ವದಲ್ಲಿ ಕಮಲವನ್ನು ಕೈ ಹಿಡಿದರು. ಇಂದು ದಿವಾಕರ್ ನೇತೃತ್ವದಲ್ಲಿ ನಡೆದ ಪಕ್ಷದ ಪ್ರಚಾರ ಸಮಾವೇಶದಲ್ಲಿ ಕಾಂಗ್ರೆಸ್ ಮುಖಂಡ ಬಸವರಾಜು ನೇತೃತ್ವದಲ್ಲಿ ಹಲವಾರು ಮಂದಿ ಕಾಂಗ್ರೆಸ್ ಪಕ್ಷಕ್ಕೆ ಗುಡ್ ಬೈ ಹೇಳಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾದರು.
ಈ ಸಂದರ್ಭದಲ್ಲಿ ಬಿಜೆಪಿ ಮುಖಂಡ ಕೆ ಎಸ್ ದಿವಾಕರ್ ಅವరు ಪಕ್ಷದ ಶಾಲನ್ನು ಹಾಕಿ ಪಕ್ಷಕ್ಕೆ ಬರೆ ಮಾಡಿಕೊಂಡು, ಅವರನ್ನು ಉದ್ದೇಶಿಸಿ ಮಾತನಾಡುತ್ತಾ, ಈ ಭಾಗದಲ್ಲಿ ಹಲವಾರು ವರ್ಷಗಳಿಂದ ಕಾಂಗ್ರೆಸ್ ಪಕ್ಷದ ಶಾಸಕರು ಪ್ರತಿನಿಧಿಸುತ್ತಿದ್ದರೂ, ಆಶಿಸಿದ ಮೇರೆಗೆ ಅಭಿವೃದ್ಧಿ ಕೆಲಸಗಳು ನಡೆದಿಲ್ಲ ಎಂದು, ದೇಶದಲ್ಲಿ ನರೇಂದ್ರ ಮೋದಿ ನಾಯಕತ್ವದಲ್ಲಿ ಮಾತ್ರ ಜನರ ಸಮಸ್ಯೆಗಳು ಪರಿಷ್ಕಾರವಾಗಲು ಅವಕಾಶವಿರುತ್ತದೆ ಎಂದು ತಿಳಿ ಹೇಳಿದರು.
ಮೇ 7ನೇ ತಾರೀಕು ನಡೆಯುವ ಲೋಕಸಭಾ ಚುನಾವಣೆಯಲ್ಲಿ, ಬಿಜೆಪಿ ಪಕ್ಷದ ವತಿಯಿಂದ ಸ್ಪರ್ಧಿಸಿದ್ದ ಬಿ ಶ್ರೀರಾಮುಲು ಅವರಿಗೆ ಮತವನ್ನು ಹಾಕಿ ಗೆಲ್ಲಿಸಬೇಕೆಂದು ಕೋರಿದರು.
ನೂತನವಾಗಿ ಬಿಜೆಪಿ ಸೇರಿದ ನಾಯಕರು ಕಾರ್ಯಕರ್ತರು ಚುನಾವಣೆಯಲ್ಲಿ ಬಿಜೆಪಿ ಪರವಾಗಿ ಪ್ರಚಾರವನ್ನು ಮಾಡಿ ಪಕ್ಷದ ವಿಜಯಕ್ಕೆ ಸಹಕರಿಸಬೇಕೆಂದು ಕೋರಿದರು.
ಈ ಸಂದರ್ಭದಲ್ಲಿ ಕಾರ್ಯಕ್ರಮದಲ್ಲಿ ಹಲವಾರು ಬಿಜೆಪಿ ಮುಖಂಡರು ಕಾರ್ಯಕರ್ತರು ಪಾಲ್ಗೊಂಡಿದ್ದರು. ದೇಶದ ಭದ್ರತೆ, ಅಭಿವೃದ್ಧಿ ಗಾಗಿ ಬಿಜೆಪಿಯನ್ನು ಗೆಲ್ಲಿಸಲು ಎಲ್ಲರೂ ಶ್ರಮಿಸೋಣ ಎಂದು ಕರೆ ನೀಡಿದರು.
