ಜಿಲ್ಲೆಯಾದ್ಯಂತ ಸಡಗರದಿಂದ ಬಕ್ರೀದ್ ಹಬ್ಬ ಆಚರಣೆ
ಕರುನಾಡ ಬೆಳಗು ಸುದ್ದಿ
ಕೊಪ್ಪಳ, 17- ಬಕ್ರೀದ್ ಹಬ್ಬದ ಅಂಗವಾಗಿ ಮುಸ್ಲಿಂ ಬಾಂದವರು ಸೋಮವಾರ ಬೆಳಿಗ್ಗೆ ಸಾಮುಹಿಕ ಪ್ರಾರ್ಥನೆ ಸಲ್ಲಿಸಿ ಪರಸ್ಪರ ಶುಭಾಶಯ ವಿನಮಯ ಮಾಡಿಕೊಂಡು ಸಂಭ್ರಮಿಸಿದರು.
ನಗರದ ಈದ್ಗಾ ಮೈದಾನ ಮತ್ತು ಹುಲಿಕೇರಿ ಪಕ್ಕದಲ್ಲಿರು ಅನೇಕ ಮಸೀದಿಗಳಲ್ಲಿ ಮುಸ್ಲಿಮರು ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು.
ಜಿಲ್ಲೆಯ ಕೊಪ್ಪಳ, ಗಂಗಾವತಿ ,ಯಲಬುರ್ಗಾ, ಕಾರಟಗಿ, ಸೇರಿದಂತೆ ಪ್ರಮುಖ ನಗರಗಳಲ್ಲಿ ಮುಸ್ಲಿಂ ಸಮಾಜದವರು ಸಾಮುಹಿಕ ಪ್ರಾರ್ಥನೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಸಂಸದ ರಾಜಶೇಖರ ಹಿಟ್ನಾಳ ಹಾಗೂ ಶಾಸಕ ರಾಘವೇಂದ್ರ ಹಿಟ್ನಾಳ , ಮುಖಂಡರಾದ ಅಮರೇಶ ಕರಡಿ ಸೇರಿ್ಂತೆ ಹಲವಾರು ಗಣ್ಯರು ಭಾಗವಹಿಸಿ ಸಮುದಾಯದವರಿಗೆ ಶುಭಾಶಯ ಕೋರಿದರು.

