-
ಜಿಲ್ಲಾ ಜೆಡಿಎಸ್ಗೆ ನೂತನ ಸಾರಥಿಯಾಗಿ ಭೂಮರಡ್ಡಿ
ಕರುನಾಡ ಬೆಳಗು ಸುದ್ದಿ
ಕೊಪ್ಪಳ, 06- ಜೆಡಿಎಸ್ ನೂತನ ಜಿಲ್ಲಾಧ್ಯಕ್ಷರನ್ನಾಗಿ ಪ್ತಥಮ ದರ್ಜೆಯ ಗುತ್ತಿಗೆದಾರ ಸುರೇಶ ಭೂಮರಡ್ಡಿ ಅವರನ್ನು ನೇಮಕ ಮಾಡಲಾಗಿದೆ.
ಈ ಕುರಿರು ರಾಜ್ಯದ ಐದು ಜಿಲ್ಲೆಗಲ ಜಿಲ್ಲಾಧ್ಯಕ್ಷರನ್ನು ನೇಮಕ ಮಾಡಿ ಆದೇಶ ಹೊರಡಿಸಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರ ಸ್ವಾಮಿ ಅವರು ಪಕ್ಷದ ಸಂಘಟನೆಯಲ್ಲಿ ತೊಡಗಿಸಿ ಕೊಳ್ಳುವಂತೆ ಸೂಚಿಸಿದ್ದಾರೆ. ಪಕ್ಷದ ಹಾಲಿ ಜಿಲ್ಲಾಧ್ಯಕ್ಷರಾಗಿದ್ದ ವೀರೇಶ ಮಹಾಂತಯ್ಯನಮಠ ಅವರನ್ನು ರಾಜ್ಯ ಕಾರ್ಯದರ್ಶಿಯನ್ನಾಗಿ ಮಾಡಲಾಗಿದೆ.
ಈ ಕರಿತು ಪತ್ರಿಕೆಯೋಂದಿಗೆ ಮಾತನಾಡಿದ ಜೆಡಿಎಸ್ ನೂತನ ಜಿಲ್ಲಾಧ್ಯಕ್ಷ ಸುರೇಶ ಭೂಮರಡ್ಡಿ ಕುಮಾರಸ್ವಾಮಿಯವರು ಪಕ್ಷದ ಕೊಪ್ಪಳ ಜಿಲ್ಲಾಧ್ಯಕ್ಷ ಸ್ಥಾನ ಸ್ವೀಕರಿಸುವಂತೆ ಸೂಚಿಸಿದರು. ಅವರ ಸೂಚನೆಯಂತೆ ಪಕ್ಷದ ಅಧ್ಯಕ್ಷ ಸ್ಥಾನ ವಹಿಸಿ ಶಕ್ತಿ ಮಿರಿ ಸಂಘಟನೆಗೆ ಒತ್ತು ನೀಡುವುದಾಗಿ ತಿಳಿಸಿದರು.
