IMG-20240415-WA0024

ಡಾ. ಬಸವರಾಜ ಪರ ಸಿವಿಸಿ ಮತಯಾಚನೆ

ಕರುನಾಡ ಬೆಳಗು ಸುದ್ದಿ

ಕೊಪ್ಪಳ, 15- ಲೋಕಸಭಾ ಚುನಾವಣೆ ಹಿನ್ನೆಲೆ ಹೊಸಲಿಂಗಾಪುರ, ಮುನಿರಾಬಾದ್, ಶಹಾಪುರ ಸೇರಿ ಹಲವು ಗ್ರಾಮಗಳಲ್ಲಿ ಎನ್‌ಡಿಎ ಅಭ್ಯರ್ಥಿ ಡಾ. ಬಸವರಾಜ ಕ್ಯಾವಟರ್ ಅವರ ಪರವಾಗಿ ಜೆಡಿಎಸ್ ರಾಜ್ಯ ಕೋರ್ ಕಮಿಟಿ ಸಮಿತಿ ಸದಸ್ಯ ಸಿ.ವಿ.ಚಂದ್ರಶೇಖರ್ ಮತಯಾಚಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ದೇಶದ ಅಭಿವೃದ್ಧಿಗಾಗಿ ಜೆಡಿಎಸ್ ಪಕ್ಷವು ಎನ್‌ಡಿಎ ಮೈತ್ರಿಕೂಟ ಸೇರಿದೆ. ಕೊಪ್ಪಳ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಡಾ.ಬಸವರಾಜ ಕ್ಯಾವಟರ್ ಅವರು ಯುವಕರಾಗಿದ್ದು, ಸಾಮಾಜಿಕ ಸೇವೆಯಲ್ಲಿ ಗುರುತಿಸಿಕೊಂಡಿದ್ದಾರೆ. ಕ್ಷೇತ್ರದ ಅಭಿವೃದ್ಧಿ ಚಿಂತನೆ ಹೊಂದಿದವರಾಗಿದ್ದು, ಕ್ಷೇತ್ರದ ಅಭಿವೃದ್ಧಿಗಾಗಿ ಡಾ.ಬಸವರಾಜ ಕ್ಯಾವಟರ್ ಅವರಿಗೆ ಮತ ನೀಡಿ ಎಂದರು.

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಅಭಿವೃದ್ಧಿ ಆಡಳಿತ ಮುಂದುವರೆಯಬೇಕು. ಈ ಹಿನ್ನೆಲೆಯಲ್ಲಿ ಮತ್ತೊಮ್ಮೆ ಎನ್‌ಡಿಎ ಅಭ್ಯರ್ಥಿ ಗಳಿಗೆ ಮತ ನೀಡುವ ಮೂಲಕ ನರೇಂದ್ರ ಮೋದಿಯವರನ್ನು ಮತ್ತೊಮ್ಮೆ ಪ್ರಧಾನಿ ಮಾಡಬೇಕು ಎಂದು ತಿಳಿಸಿದರು.

ಕೊಪ್ಪಳ ಲೋಕಸಭಾ ಕ್ಷೇತ್ರದ ಬಿಜೆಪಿ- ಜೆಡಿಎಸ್ ಕಾರ್ಯಕರ್ತರು ಪ್ರತಿ ಮನೆ ಮನೆಗೆ ತೆರಳಿ ಪ್ರಚಾರ ಮಾಡಿ. ಜೆಡಿಎಸ್ ಹಾಗೂ ಬಿಜೆಪಿ ಸರ್ಕಾರದ ಅವಧಿಯ ಸಾಧನೆಯನ್ನು ತಿಳಿಸಿ ಎನ್‌ಡಿಎ ಅಭ್ಯರ್ಥಿ ಡಾ.ಬಸವರಾಜ ಕ್ಯಾವಟರ್ ಗೆ ಮತ ಹಾಕಿಸಬೇಕು ಎಂದರು.

ಈ ಸಂದರ್ಭದಲ್ಲಿ ಬಿಜೆಪಿ-ಜೆಡಿಎಸ್ ಉಭಯ ಪಕ್ಷಗಳ ಮುಖಂಡರಾದ ಮೂರ್ತೆಪ್ಪ ಹಿಟ್ನಾಳ, ಮುದ್ಲಾಪುರ್ ಶಿವಪ್ಪ ನಾಯಕ್, ಪ್ರದೀಪ ಹಿಟ್ನಾಳ, ವಿರೂಪಾಕ್ಷಪ್ಪ ಬಾರಕೇರ, ವಸಂತ್ ನಾಯಕ್, ಜಂಬಣ್ಣ ಬಾರಕೇರ, ಯಮನೂರಪ್ಪ ಕಟಗಿ, ಶ್ರೀನಿವಾಸ್ ಪೂಜಾರ್ ಸೇರಿದಂತೆ ಗ್ರಾಮದ ಮುಖಂಡರು ಭಾಗವಹಿಸಿದ್ದರು.

Leave a Reply

Your email address will not be published. Required fields are marked *

error: Content is protected !!