
ಡಾ. ಮಂಜುನಾಥ ಬ್ಯಾಲಹುಣಸಿಗೆ ಸನ್ಮಾನ
ಕರುನಾಡ ಬೆಳಗು ಸುದ್ದಿ
ಕುಕನೂರ,27- ಜಿಲ್ಲಾಡಳಿತ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಜಿಲ್ಲಾ ಕ್ಷಯ ರೋಗ ನಿಯಂತ್ರಣ ಘಟಕ ಕೊಪ್ಪಳ ವತಿಯಿಂದ ಕ್ಷಯರೋಗ ದಿನಾಚರಣೆಯನ್ನು ಕನ್ನಡ ಸಾಹಿತ್ಯ ಭವನ ಕೊಪ್ಪಳದಲ್ಲಿ ಹಮ್ಮಿಕೊಳ್ಳಲಾಗಿತ್ತು.
ಈ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿಗಳು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ಹಾಗೂ ಎಲ್ಲಾ ಕಾರ್ಯಕ್ರಮ ಅನುಷ್ಠಾನಾಧಿಕಾರಿಗಳು ಉಪಸ್ಥಿತರಿದ್ದರು.
ಈ ಕಾರ್ಯಕ್ರಮದಲ್ಲ ಉತ್ತಮ ಸಾಧನೆ ಮಾಡಿರುವ ಸಿಬ್ಬಂದಿಗಳಿಗೆ ಸನ್ಮಾನ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು ಈ ಕಾರ್ಯಕ್ರಮದಲ್ಲಿ ಕುಕನೂರ್ ಸಮುದಾಯ ಆರೋಗ್ಯ ಕೇಂದ್ರದ NCD ಘಟಕ ಅತಿ ಹೆಚ್ಚು ಪತ್ತೆ ಹಚ್ಚುವಿಕೆ ಮತ್ತು ಚಿಕಿತ್ಸೆಯನ್ನು ನೀಡಿದ್ದರಿಂದ ಸಮುದಾಯ ಆರೋಗ್ಯ ಕೇಂದ್ರ ಕುಕನೂರಿಗೆ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಹಾಗೂ ಕಾರ್ಯಕ್ರಮ ಅನುಷ್ಠಾನಾಧಿಕಾರಿಗಳ ಉಪಸ್ಥಿತಿಯಲ್ಲಿ ಜಿಲ್ಲಾ ಮಟ್ಟದ ಪ್ರಶಸ್ತಿಯನ್ನು ಪ್ರಧಾನ ಮಾಡಿದರು.
ಪ್ರಶಸ್ತಿಯನ್ನು ಸ್ವೀಕರಿಸಿ ಆಡಳಿತ ವೈದ್ಯಧಿಕಾರಿಗಳು ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ಹಾಗೂ ಕಾರ್ಯಕ್ರಮವನ್ನು ಸ್ಥಾನಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗಕ್ಕೆ ಧನ್ಯವಾದಗಳು ತಿಳಿಸಿದರು.