ಡಿ.21 ರಂದು ಗಂಗಾವತಿಯಲ್ಲಿ ವಾಕ್ ಇನ್ ಇಂಟರ್‌ವ್ಯೂವ್

ಕರುನಾಡ ಬೆಳಗು ಸುದ್ದಿ
ಕೊಪ್ಪಳ ಡಿಸೆಂಬರ್ 18 – ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಿಂದ ಡಿಸೆಂಬರ್ 21 ರಂದು ಬೆಳಿಗ್ಗೆ 10.30 ಗಂಟೆಯಿಂದ ಮಧ್ಯಾಹ್ನ 02 ಗಂಟೆಯವರೆಗೆ ಗಂಗಾವತಿಯ ಸರ್ಕಾರಿ ಐ.ಟಿ.ಐ ಕಾಲೇಜ್‌ನಲ್ಲಿ ವಾಕ್ ಇನ್ ಇಂಟರ್‌ವ್ಯೂವನ್ನು ಆಯೋಜಿಸಲಾಗಿದೆ. ಈ ವಾಕ್ ಇನ್ ಇಂಟರ್‌ವ್ಯೂವ್‌ನಲ್ಲಿ ಅತಿಥಿ ಬೋಧಕರ ಹುದ್ದೆಗೆ ನೇರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಿದ್ದಾರೆ. ಯಾವುದೇ ಶುಲ್ಕ ಇರುವುದಿಲ್ಲ ಎಲ್ಲರಿಗೂ ಉಚಿತ ಪ್ರವೇಶವಿರುತ್ತದೆ.
21 ವರ್ಷ ಮೇಲ್ಪಟ್ಟ ಐ.ಟಿ.ಐ-ಎಲೆಕ್ಟಿçಷಿಯನ್ (ಅಂಪ್ರೆಂಟಿಶಿಪ್ ಹಾಗೂ ಕನಿಷ್ಟ 2 ವರ್ಷದ ಅನುಭವ) ಅಥವಾ ಡಿಪ್ಲೋಮಾ-ಎಲೆಕ್ಟಿçಕಲ್ ಜೊತೆಗೆ ಕನಿಷ್ಟ 2 ವರ್ಷದ ಅನುಭವ ಅಥವಾ ಬಿ.ಇ.-ಎಲೆಕ್ಟಿçಕಲ್ ಜೊತೆಗೆ ಕನಿಷ್ಟ 2 ವರ್ಷದ ಅನುಭವವುಳ್ಳ ಅಭ್ಯರ್ಥಿಗಳಿಗೆ ನೇರ ಸಂದರ್ಶನ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ವಾಕ್ ಇನ್ ಇಂಟರ್‌ವ್ಯೂವ್ ನಲ್ಲಿ ಭಾಗವಹಿಸುವ ಅಭ್ಯರ್ಥಿಗಳು ದೃಢೀಕರಿಸಲಾದ ತಮ್ಮ ವಿದ್ಯಾರ್ಹತೆಯ ಎಲ್ಲ ಪ್ರಮಾಣ ಪತ್ರಗಳ 3 ಪ್ರತಿಗಳೊಂದಿಗೆ ಮತ್ತು ಆಧಾರ ಕಾರ್ಡಿನ ಪ್ರತಿ, ಬಯೋಡಾಟಾ ಹಾಗೂ ಪಾಸ್ ಪೋರ್ಟ್ ಅಳತೆಯ 2 ಭಾವಚಿತ್ರಗಳೊಂದಿಗೆ ವಾಕ್ ಇನ್ ಇಂಟರ್‌ವ್ಯೂವ್‌ನಲ್ಲಿ ಭಾಗವಹಿಸಿ ಉದ್ಯೋಗದ ನೆರವನ್ನು ಪಡೆಯಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಜಿಲ್ಲಾ ಆಡಳಿತ ಭವನ, ಮೊದಲನೇ ಮಹಡಿ, ಕೊಪ್ಪಳ, ಮೊ.ನಂ: 8105693234 ಇವರನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!