ಡೆಂಗ್ಯೂ ಖಾಯಿಲೆ ನಿಯಂತ್ರಣ - ಬೆಂಕಿನಗರ ಸರ್ಕಾರಿ ಪ್ರೌಢ ಶಾಲೆಯಲ್ಲಿ ಅರಿವು (2)

ಡೆಂಗ್ಯೂ ಖಾಯಿಲೆ ನಿಯಂತ್ರಣ : ಸರ್ಕಾರಿ ಪ್ರೌಢ ಶಾಲೆಯಲ್ಲಿ ಅರಿವು

ಕರುನಾಡ ಬೆಳಗು ಸುದ್ದಿ

ಕೊಪ್ಪಳ, 11- ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿಗಳ ಕಚೇರಿ, ಕೊಪ್ಪಳ ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಬೆಂಕಿನಗರದ ಸರ್ಕಾರಿ ಪ್ರೌಢ ಶಾಲೆಯ ಸಂಯುಕ್ತಾಶ್ರಯದಲ್ಲಿ ಇತ್ತೀಚೆಗೆ ಡೆಂಗ್ಯೂ ಖಾಯಿಲೆ ನಿಯಂತ್ರಣದ ಕುರಿತು ಶಾಲೆಯ ಆವರಣದಲ್ಲಿ ಅರಿವು ಕಾರ್ಯಕ್ರಮ ನಡೆಯಿತು.

ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿಗಳಾದ ಶಿವಾನಂದ ವ್ಹಿ.ಪಿ ಅವರು ಮಾತನಾಡಿ, ಸಮುದಾಯದೊಂದಿಗೆ ಸೇರಿ, ಡೆಂಗ್ಯೂ ಜ್ವರವನ್ನು ನಿಯಂತ್ರಿಸೋಣ ಎಂಬ ಘೋಷವಾಕ್ಯದೊಂದಿಗೆ ಡೆಂಗ್ಯೂ ಖಾಯಿಲೆ ನಿಯಂತ್ರಣ ಕಾರ್ಯಕ್ರಮದ ಬಗ್ಗೆ ಜಾಗೃತಿ ಮೂಡಿಸಲಾಗುತ್ತದೆ. ಮಳೆಗಾಲ ಪ್ರಾರಂಭವಾದ ಕಾರಣ ಶುದ್ಧ ನೀರಿನಲ್ಲಿ ಸೋಂಕಿತ ಈಡಿಸ್ ಜಾತಿಯ ಸೊಳ್ಳೆಗಳು ಮೊಟ್ಟೆಗಳನ್ನಿಟ್ಟು ಸಂತಾನಾಭಿವೃದ್ಧಿ ಮಾಡುತ್ತವೆ. ನಂತರ ಮನುಷ್ಯರಿಗೆ ಕಚ್ಚುವುದರಿಂದ ಈ ಖಾಯಿಲೆ ಹರಡುತ್ತದೆ.

ತಲೆನೋವು, ವಾಂತಿ, ಕಣ್ಣಿನ ಹಿಂಭಾಗದಲ್ಲಿ ನೋವು, ಮೈಮೇಲೆ ಬಿಲ್ಲೆ ಹಾಕಾರದ ಕೆಪ್ಪು ಗಂಧೆಗಳು, ಕಪ್ಪು ಮಲವಿಸರ್ಜನೆ, ವಸಡುಗಳಲ್ಲಿ ರಕ್ತಸ್ರಾವ ಇಂತಹ ಲಕ್ಷಣಗಳಿದ್ದರೆ ಸಮೀಪದ ಸರ್ಕಾರಿ ಆಸ್ಪತ್ರೆಗೆ ಭೇಟಿನೀಡಿ, ರಕ್ತ ಪರೀಕ್ಷೆ ಮಾಡಿಸಿ, ಖಚಿತ ಪಟ್ಟರೆ ಚಿಕಿತ್ಸೆ ಪಡೆದುಕೊಳ್ಳಬೇಕು. ಯಾವುದೇ ಕಾರಣಕ್ಕೂ ಜ್ವರದ ಬಗ್ಗೆ ನಿರ್ಲಕ್ಷತನ ಮಾಡಬಾರದು. ಶಾಲೆಗಳಲ್ಲಿ, ಮನೆಗಳಲ್ಲಿ, ನೀರು ಶೇಖರಿಸುವ ಡ್ರಮ್, ಬ್ಯಾರಲ್, ಸಿಮೆಂಟ್ ತೊಟ್ಟೆ, ಕಲ್ಲಿನದೋಣಿ ಇನ್ನಿತರ ನೀರು ಸಂಗ್ರಹ ಪರಿಕರಗಳನ್ನು ವಾರದಲ್ಲಿ 2 ಬಾರಿ ಸ್ವಚ್ಚವಾಗಿ ತೊಳೆದು. ಸುಣ್ಣಹಚ್ಚಿ ಒಣಗಿಸಿ ಪುನಃ ನೀರು ತುಂಬಬೇಕು. ನೀರಿನ ಸಲಕರಣೆಗಳಿಗೆ ಭದ್ರವಾಗಿ ಮುಚ್ಚಳದಿಂದ ಮುಚ್ಚಬೇಕು, ಸಾಯಂಕಾಲ ವೇಳೆ ಮನೆಯ ಮುಂದೆ ಬೇವಿನ ಸೊಪ್ಪಿನ ಹೊಗೆ ಹಾಕಬೇಕು. ಸೊಳ್ಳೆ ಕಡಿತದಿಂದ ದೂರವಿರಲು ವೈಯಕ್ತಿಕ ರಕ್ಷಣೆ ಮಾಡಿಕೊಳ್ಳಬೇಕು. ಮನೆಯ ಸುತ್ತಾ-ಮುತ್ತಾ ತ್ಯಾಜ್ಯ ವಸ್ತುಗಳಾದ ಟೈರ್, ಒರಳುಕಲ್ಲು, ತೆಗ್ಗಿನಚಿಪ್ಪು, ಹೊಡೆದ ಪ್ಲಾಸ್ಟಿಕ್ ಬಕೆಟ್ ಇತ್ಯಾದಿಗಳನ್ನು ಮನೆಯ ಮೇಲೆ ಮತ್ತು ಅಕ್ಕ-ಪಕ್ಕದಲ್ಲಿ ಬಿಸಾಡಬಾರದು. ಈ ಬಗ್ಗೆ ಶಾಲಾ ವಿದ್ಯಾರ್ಥಿಗಳು ನಿಮ್ಮ ಪಾಲಕರಿಗೆ ತಿಳಿ ಹೇಳಬೇಕು. “ಪ್ರತಿ ಶುಕ್ರವಾರ ಡೆಂಗಿ ನಿಯಂತ್ರಣ ಅಭಿಯಾನ” ಸಮುದಾಯದೊಂದಿಗೆ ಆಚರಿಸಲಾಗುವುದು ಎಂದು ಹೇಳಿದರು.

ಎಸ್.ಟಿ.ಎಸ್ ಇಬ್ರಾಹಿಂಸಾಬ್ ಅವರು ಕ್ಷಯರೋಗ ನಿರ್ಮೂಲನೆ ಕುರಿತು ವಿವರವಾಗಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಶಾಲೆಯ ಮುಖ್ಯೋಪಾದ್ಯಾಯರಾದ ಸೋಮರೆಡ್ಡಿ ಡಂಬ್ರಳ್ಳಿ, ಶಿಕ್ಷಕರಾದ ವೀರಯ್ಯ, ಶೇಖರಪ್ಪ, ಇತರೆ ಶಿಕ್ಷಕರು, ಆಶಾ ಕಾರ್ಯಾಕರ್ತೆಯರು, ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!