WhatsApp Image 2024-03-12 at 4.27.12 PM

ತಾಲೂಕಿನ ಕೆರೆಗಳಿಗೆ ನೀರು ತುಂಬಿಸಲು ಅಧಿಕಾರಿಗಳ ನಿರ್ಲಕ್ಷ್ಯ : ಮಾಜಿ ಶಾಸಕ ಸೋಮಲಿಂಗಪ್ಪ

ಕರುನಾಡ ಬೆಳಗು ಸುದ್ದಿ

ಸಿರುಗುಪ್ಪ,12- ತಾಲೂಕಿನಲ್ಲಿರುವ ಬಹುತೇಕ ಕುಡಿಯುವ ನೀರಿನ ಕೆರೆಗಳು ಖಾಲಿಯಾಗಿದ್ದು ಮುಂದಿನ ದಿನಗಳಲ್ಲಿ ನೀರಿಗಾಗಿ ಆಹಾಕಾರ ಉಂಟಾಗಲಿದೆ ಕಾರಣ ತಾಲೂಕ ಆಡಳಿತ ಎಚ್ಚೆತ್ತುಕೊಂಡು ಕೆರೆಗಳಿಗೆ ನೀರು ತುಂಬಿಸಲು ಕ್ರಮ ಕೈ ಗೊಳ್ಳಬೇಕು ಎಂದು ಮಾಜಿ ಶಾಸಕ ಎಂಎಸ್ ಸೋಮಲಿಂಗಪ್ಪ ಅವರು ಹೇಳಿದರು.

ತೆಕ್ಕಲಕೋಟೆಯಲ್ಲಿ ಪತ್ರಕರ್ತರೊಂದಿಗೆ ಅವರು ಮಾತನಾಡಿ ತುಂಗಭದ್ರಾ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನಿಸಿದಂತೆ ಬೇಸಿಗೆಯಲ್ಲಿ ತುಂಗಭದ್ರಾ ಕೆಳಮಟ್ಟದ ಕಾಲುವೆಗೆ ಮಾರ್ಚ್ ತಿಂಗಳಲ್ಲಿ 10 ದಿನಗಳಿಗೊಮ್ಮೆ 100 ಕ್ಯೂಸಕ್ ನಂತೆ ಕುಡಿಯುವ ನೀರಿಗಾಗಿ ಕೆರೆಗಳನ್ನು ತುಂಬಿಸಲು ನೀರು ಬಿಡಲಾಗುತ್ತಿದೆ ಆದರೆ ಸಿರುಗುಪ್ಪ ತಾಲೂಕ ಆಡಳಿತ ಹಾಗೂ ಬಳ್ಳಾರಿ ಜಿಲ್ಲಾ ಆಡಳಿತ ಕೆರೆಗಳಿಗೆ ನೀರು ತುಂಬಿಸಲು ಮುಂದಾಗಿಲ್ಲ ಇದರಿಂದಾಗಿ ತಾಲೂಕಿನ ಬಹುತೇಕ ಕೆರೆಗಳು ಖಾಲಿಯಾಗಿವೆ ಎಂದು ಆರೋಪಿಸಿದರು.

ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು ನಾನು ಬಳ್ಳಾರಿ ಲೋಕಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದೇನೆ ಬಿಜೆಪಿ ಅವಕಾಶ ಕೊಟ್ಟಲ್ಲಿ ಸ್ಪರ್ಧಿಸುತ್ತೇನೆ ಇಲ್ಲವೇ ಬಿಜೆಪಿ ಪಕ್ಷ ನಿರ್ಧರಿಸಿದ ಅಭ್ಯರ್ಥಿಯ ಗೆಲುವಿಗೆ ಶ್ರಮಿಸುತ್ತೇನೆ ಎಂದು ಅವರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.

Leave a Reply

Your email address will not be published. Required fields are marked *

error: Content is protected !!