IMG-20240201-WA0042

ನಗರವಾಸಿಗಳ ಗಮನ ಸೆಳೆದ ವಿಜಯನಗರ ವಸಂತ ವೈಭವದ ಮೆರವಣಿಗೆ

ಕರುನಾಡ ಬೆಳಗು ಸುದ್ದಿ

ವಿಜಯನಗರ,1- ಹಂಪಿ ಉತ್ಸವ -2024ಕ್ಕೆ ಹೊಸಪೇಟೆ ನಗರಿ ಸಿಂಗಾರಗೊAಡಿದೆ. ನಗರ ಸಂಪರ್ಕಿಸುವ ಪ್ರಮುಖ ರಸ್ತೆಗಳು ವಿದ್ಯುತ್ ದೀಪಾಲಂಕಾರದಿಂದ ಅಲಂಕೃತವಾಗಿವೆ.

ಬೀದಿಗಳಿಗೆ ಅಳವಡಿಸಿರುವ ಬೆಳಕಿನ ತೋರಣ ಹಂಪಿ ಉತ್ಸವಕ್ಕೆ ಸರ್ವರನ್ನು ಸ್ವಾಗತಿಸುತ್ತಿದೆ, ಫೆ.2 ರಂದು ಹಂಪಿಯ ಗಾಯಿತ್ರಿ ಪೀಠ ವೇದಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಉತ್ಸವಕ್ಕೆ ಅಧಿಕೃತವಾಗಿ ಚಾಲನೆ ನೀಡಲಿದ್ದಾರೆ.

ನಗರದ ಪ್ರಮುಖ ವೃತ್ತಗಳಲ್ಲಿ ಎಲ್.ಐ.ಡಿ ವಾಲ್ಗಳ ಮೂಲಕ ಹಂಪಿ ಉತ್ಸವದ ಮಹತ್ವ ಸಾರುವುದರೊಂದಿಗೆ, ಸಾರ್ವಜನಿಕರು ಉತ್ಸವದಲ್ಲಿ ಪಾಲ್ಗೊಂಡು ಸಾಂಸ್ಕೃತಿಕ ರಸದೌತಣ ಸವಿಯುವಂತೆ ಮನವಿ ಮಾಡಲಾಗುತ್ತದೆ. ಹಂಪಿ ಉತ್ಸವಕ್ಕೆ ಸ್ವಾಗತಿಸುವ ಫ್ಲಕ್ಸ್ ಹಾಗೂ ಬಂಟಿಗ್‌ಗಳು ಎಲ್ಲಡೆ ರಾರಾಜಿಸುತ್ತುವೆ.

ಹಂಪಿ ಉತ್ಸವದ ಕ್ಷಣಗಣನೆ ನಡುವೆ, ಗುರುವಾರ ಹೊಸಪೇಟೆ ನಗರದ ವಡಕರಾಯನ ದೇವಸ್ಥಾನದ ಬಳಿ, ವಸಂತ ವೈಭವ ಮೆರವಣಿಗೆ ವಿಜಯನಗರ ಶಾಸಕರಾದ ಹೆಚ್.ಆರ್.ಗವಿಯಪ್ಪ ಅವರು ಚಾಲನೆ ನೀಡಿದರು.

ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಿರುವ ನೂರಕ್ಕೂ ಹೆಚ್ಚು ಕಲಾತಂಡಗಳು, ಕಂಸಾಳೆ, ಪೂಜಾಕುಣಿತ, ಕರಡಿ ಮಜಲು, ಲಂಬಾಣಿ ನೃತ್ಯ, ಚಿಲಿಪಿಲಿ ಗೊಂಬೆ, ಆಲಾಯಿ ಹೆಜ್ಜೆಮೇಳ, ಸೋಮನ ಕುಣಿತ, ಮಹಿಳಾ ವೀರಗಾಸೆ, ಕೊಂಬು ಕಹಳೆ, ಚಂಡೆ ವಾದನ, ಝಾಂಜ್ ಮೇಳ, ಮೋಜಿನ ಗೊಂಬೆ, ಜಗ್ಗಲಿಗಿ, ಖಡ್ಗವರಸೆ, ನವಿಲು ಕುಣಿತ, ಮರಗಾಲು ಬೀಸು, ಕಂಸಾಳೆ, ಸಿಂಧೋಳ ಕುಣಿತ, ಸಮಾಳ ಮತ್ತು ನಂದಿಕೋಲು, ಕುದುರೆ ಕುಣಿತ, ನಾದಸ್ವರ, ಡೊಳ್ಳುಕುಣಿತ, ಕೋಲಾಟ, ಹಗಲು ವೇಷ, ತಾಷಾರಂಡೋಲ್, ಗೊಂದಲಿಗರಹಾಡು, ಗೊರವರ ಕುಣಿತ, ಹೀಗೆ ಹಲವಾರು ನೃತ್ಯ ಪ್ರಕಾರಗಳುಆನೆ ಹಾಗೂ ಕಲಾತಂಡಗಳು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದವು. ತಾಯಿ ಭುವನೇಶ್ವರಿ ದೇವಿ ಮೂರ್ತಿಯನ್ನು ಅಲಂಕೃತಗೊಂಡ ಟ್ಯಾಕ್ಟರ್ ಇರಿಸಿ ನಗರದ ಡಾ.ಪುನೀತ್ ರಾಜ್‌ಕುಮಾರ್ ಜಿಲ್ಲಾ ಕ್ರೀಡಾಂಗಣದವರೆಗೆ ಅದ್ಧೂರಿ ಮೆರವಣಿಗೆ ಕೊಂಡೊಯ್ಯಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳಾದ ಎಂ.ಎಸ್.ದಿವಾಕರ, ಜಿ.ಪಂ.ಮುಖ್ಯಕಾರ್ಯನಿರ್ವಾಹಕ ಅಧಿಕಾರಿಗಳಾದ ಸದಾಶಿವಪ್ರಭು ಬಿ., ಉಪವಿಭಾಗಧಿಕಾರಿ ಮಹದ್‌ಅಲಿ ಅಕ್ರಂ ಷಾ, ತಹಶಿಲ್ದಾರ್ ವಿಶ್ವಜಿತ್ ಮೆಹ್ತಾ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಸಿದ್ದಲಿಂಗೇಶ್ ರಂಗಣ್ಣವರ್ ಸೇರಿದಂತೆ ಮತ್ತಿತರರು ಇದ್ದರು.

Leave a Reply

Your email address will not be published. Required fields are marked *

error: Content is protected !!