ಸಾರ್ವಜನಿಕರಿಂದ ಕುಂದು ಕೊರತೆ ಅಹವಾಲು ಸ್ವೀಕಾರ
ಕರುನಾಡ ಬೆಳಗು ಸುದ್ದಿ
ಸಿರುಗುಪ್ಪ, 21- ನಗರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಯೋಜನೆ ಅಧಿಕಾರಿ ಕಚೇರಿ ಸಭಾಭವನದಲ್ಲಿ ಕರ್ನಾಟಕ ಲೋಕಾಯುಕ್ತ ಬಳ್ಳಾರಿ ಇವರ ಸಹಯೋಗದಲ್ಲಿ ಸಾರ್ವಜನಿಕ ಕುಂದು ಕೊರತೆ ಮತ್ತು ಅಹವಾಲು ಸ್ವೀಕಾರ ಕಾರ್ಯಕ್ರಮ ಜರುಗಿತು.
ಸಿರುಗುಪ್ಪ ತಾಲೂಕಿನಿಂದ ವಿವಿಧ ಗ್ರಾಮಗಳಿಂದ ಆಗಮಿಸಿದ ಸಾರ್ವಜನಿಕರು ತಮ್ಮ ಸಮಸ್ಯೆಗಳನ್ನು ಹಾಗೂ ಕುಂದು ಕೊರತೆಗಳ ಮನವಿಯನ್ನು ಲೋಕಾಯುಕ್ತ ಡಿವೈಎಸ್ಪಿ ವಸಂತಕುಮಾರ್ ಲೋಕಾಯುಕ್ತ ಸಿ ಪಿ ಐ ಸಂಗಮೇಶ್ ತಾಲೂಕ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಎಸ್ ಪವನ್ ಕುಮಾರ್ ದಂಡಪ್ಪನವರ್ ತಾಲೂಕ ಕಚೇರಿಯ ಶಿರಸ್ತೆದಾರ್ ಸಿದ್ದಾರ್ಥ ಕಾರಂಜಿ ಅವರು ಅಹವಾಲು ಸ್ವೀಕರಿಸಿ ಮಾತನಾಡುತ್ತಾ ಸರ್ಕಾರಿ ಅಧಿಕಾರಿಗಳು ಪ್ರಾಮಾಣಿಕವಾಗಿ ಮತ್ತು ದಕ್ಷತೆಯಿಂದ ಕಾರ್ಯ ನಿರ್ವಹಿಸುವ ಮೂಲಕ ಜನರ ಸಮಸ್ಯೆಗಳಿಗೆ ಸ್ಪಂದಿಸಬೇಕು ನಾವೆಲ್ಲ ಜನರ ಸೇವೆಗಾಗಿ ಇರುವದು ಹೀಗಾಗಿ ಜನರ ಕೆಲಸಗಳನ್ನು ಶಿಸ್ತು ಬದ್ಧವಾಗಿ ಮಾಡಬೇಕು ಸರಕಾರ ಬಡ ಜನರ ಅನುಕೂಲಕ್ಕಾಗಿ ಸಾಕಷ್ಟು ಯೋಜನೆಗಳನ್ನು ಜಾರಿಗೆ ತಂದಿದೆ ಆ ಯೋಜನೆಗಳನ್ನು ಜನರಿಗೆ ತಲುಪಿಸುವ ಉದ್ದೇಶಕ್ಕಾಗಿ ಇಲಾಖೆಗಳನ್ನು ರಚಿಸಿದೆ ಈ ಇಲಾಖೆಗಳಲ್ಲಿನ ಅಧಿಕಾರಿಗಳು ಜನರ ಕೆಲಸವನ್ನು ದೇವರ ಕೆಲಸವೆಂದು ಭಾವಿಸಿ ಕಾರ್ಯ ನಿರ್ವಹಿಸಬೇಕು ಬಡ ಜನರನ್ನು ಹೆಚ್ಚು ಸಮಯ ಕಾಯಿಸದೆ ಕಾನೂನು ಬದ್ಧವಾಗಿ ಅವರ ಕೆಲಸ ಮಾಡಿ ಕೊಡಬೇಕು ಎಂದು ಅಧಿಕಾರಿಗಳಿಗೆ ಅವರು ಸೂಚಿಸಿದರು.
ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿ ಗಾದಿಲಿಂಗಪ್ಪ ಕೃಷಿ ಸಹಾಯಕ ನಿರ್ದೇಶಕ ಎಸ್ ಬಿ ಪಾಟೀಲ್ ತೋಟಗಾರಿಕೆ ಹಿರಿಯ ಸಹಾಯಕ ನಿರ್ದೇಶಕ ಖಾದರ್ ಭಾಷಾ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕಿ, ಬಿ ರಾಜೇಶ್ವರಿ ನಗರ ಸಭೆಯ ರಾಜಭಕ್ಷಿ ವೆಂಕೋಬ ತಾಲೂಕ ವೈದ್ಯಾಧಿಕಾರಿ ಡಾ ಬಿ ಈರಣ್ಣ ಜಿಲ್ಲಾ ಪಂಚಾಯತ್ ರಾಜ್ ರವೀಂದ್ರ ನಾಯಕ್ ಪರಿಶಿಷ್ಟ ವರ್ಗಗಳ ಅಧಿಕಾರಿ ರಾಘವೇಂದ್ರ ವರ್ಮ ಸಿಡಿಪಿಓ ಪ್ರದೀಪ್ ಕುಮಾರ್ ಸಾಮಾಜಿಕ ಕಾರ್ಯಕರ್ತ ಅಬ್ದುಲ್ ನಬಿ ತಾಲೂಕ ಮಟ್ಟದ ಎಲ್ಲಾ ಅಧಿಕಾರಿಗಳು ಇದ್ದರು
