2c136fae-be38-4577-97e1-318669006cc9

ನಿರುದ್ಯೋಗಿ ಪ್ರಮಾಣ ಪತ್ರವನ್ನು ಸ್ವಯಂ ದೃಢೀಕರಿಸಿ ಸಲ್ಲಿಸಲು ಸೂಚನೆ

ಕರುನಾಡ ಬೆಳಗು ಸುದ್ದಿ

ಕೊಪ್ಪಳ, 16- ಜಿಲ್ಲೆಯಲ್ಲಿನ ಯುವನಿಧಿ ಫಲಾನುಭವಿಗಳು ಸೇವಾ ಸಿಂಧು ಪೋರ್ಟಲ್‌ನಲ್ಲಿ ಪ್ರತಿ ತಿಂಗಳು 25ನೇ ತಾರೀಖಿನಂದು ನಿರುದ್ಯೋಗಿ ಪ್ರಮಾಣ ಪತ್ರವನ್ನು ಸ್ವಯಂ ದೃಢೀಕರಿಸಿ ಕಡ್ಡಾಯವಾಗಿ ಅಪ್‌ಲೋಡ್ ಮಾಡಬೇಕು. ತಪ್ಪು ಮಾಹಿತಿ ನೀಡಿದಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗುವುದು.

ಯುವನಿಧಿ ಫಲಾನುಭವಿಗಳಿಗೆ ನೇರ ನಗದು ವರ್ಗಾವಣೆ ಕಾರ್ಯಕ್ರಮದಲ್ಲಿ ನೋಂದಾಯಿಸಿಕೊಳ್ಳಲು ಸೇವಾ ಸಿಂಧು ಪೋರ್ಟಲ್ hಣಣಠಿs://sevಚಿsiಟಿಜhugs.ಞಚಿಡಿಟಿಚಿಣಚಿಞಚಿ.gov.iಟಿ ಅನ್ನು ಭೇಟಿ ನೀಡಿ ಹಾಗೂ ಉಚಿತವಾಗಿ ಕರ್ನಾಟಕ-ಒನ್, ಗ್ರಾಮ-ಒನ್, ಬೆಂಗಳೂರು-ಒನ್ ಮತ್ತು ಬಾಪೂಜಿ ಸೇವಾ ಕೇಂದ್ರಗಳ ಮುಖಾಂತರ ಅರ್ಜಿ ಸಲ್ಲಿಸಬಹುದು.

ಸೇವಾ ಸಿಂಧು ಪೋರ್ಟಲ್ ಮುಖಪುಟದಲ್ಲಿರುವ ನ್ಯಾಡ್ ಲಿಂಕ್ ಉಪಯೋಗಿಸಿಕೊಂಡು ತಮ್ಮ ದಾಖಲೆಗಳು ಇಂಡೀಕರಣವಾಗಿರುವುದನ್ನು ಖಚಿತಪಡಿಸಿಕೊಳ್ಳಬಹುದು. ಹೆಚ್ಚಿನ ಮಾಹಿತಿಗೆ ಸಹಾಯವಾಣಿ: 1800 599 9918 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!