ಕೊಪ್ಪಳ ನಗರಸಭೆ: ನೂತನ ಸಹಾಯವಾಣಿ ಕೇಂದ್ರ ಆರಂಭ
ಕರುನಾಡ ಬೆಳಗು ಸುದ್ದಿ
ಕೊಪ್ಪಳ,21- ನಗರದ ನಾಗರಿಕರಿಗೆ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಕೊಪ್ಪಳ ನಗರಸಭೆ ಎಲ್ಲಾ ಸಿದ್ಧತೆ ಮಾಡಿಕೊಂಡಿದ್ದು, ಆದರೂ ಕೆಲವೊಮ್ಮೆ ಅಗುವ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಸಾರ್ವಜನಿಕರಿಗೆ ಕೊಪ್ಪಳ ನಗರಸಭೆಯಲ್ಲಿ ಸಹಾಯವಾಣಿ ಕೇಂದ್ರವನ್ನು ಪ್ರಾರಂಭಿಸಲಾಗಿದೆ.
ನಗರದ 31 ವಾರ್ಡಗಳಲ್ಲಿ ನಗರಸಭೆಯಿಂದ ನಿಗಧಿತ ಅವಧಿಯಲ್ಲಿ ಕುಡಿಯುವ ನೀರು ಪೂರೈಕೆ ಮಾಡಲಾಗುತ್ತಿದೆ. ಮಳೆ ಕೊರತೆಯಿಂದ ನದಿ ಪಾತ್ರದಲ್ಲಿ ನೀರಿನ ಸಂಗ್ರಹ ಕಡಿಮೆಯಾಗಿರುವುದರಿಂದ ಮತ್ತು ವಿದ್ಯುತ್ ವ್ಯತ್ಯಯದಿಂದಾಗಿ ಕೆಲವೊಮ್ಮೆ ನೀರು ಪೂರೈಕೆಯಲ್ಲಿ ವ್ಯತ್ಯಯವಾಗುತ್ತಿದೆ.
ಸಾರ್ವಜನಿಕರಿಗೆ ಕುಡಿಯುವ ನೀರಿನ ಸಮಸ್ಯೆಯಾಗದಂತೆ ನಗರಸಭೆಯು ಎಲ್ಲಾ ಸಿದ್ಧತೆ ಮಾಡಿಕೊಂಡಿದೆ. ಆದರೂ ಕೆಲವೊಮ್ಮೆ ಅಗುವ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಹಾಗೂ ಬೇಸಿಗೆ ಕಾಲದ ಪ್ರಯುಕ್ತ ಕೊಪ್ಪಳ ನಗರಸಭೆ ವ್ಯಾಪ್ತಿಯ (ಎಲ್ಲಾ 31 ವಾರ್ಡಗಳಲ್ಲಿ) ಕುಡಿಯುವ ನೀರಿನ ಸಮಸ್ಯೆಯಾಗದಂತೆ ಸಾರ್ವಜನಿಕರಿಗಾಗಿ ನಗರಸಭೆ ಕಚೇರಿಯಲ್ಲಿ ನೂತನವಾಗಿ ಸಹಾಯವಾಣಿ ಕೇಂದ್ರವನ್ನು ಪ್ರಾರಂಭಿಸಲಾಗಿರುತ್ತದೆ.
ನಗರದ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆಯಿದ್ದಲ್ಲಿ ಸಾರ್ವಜನಿಕರು ನಗರಸಭೆ ಕಾರ್ಯಾಲಯದ ಸಹಾಯವಾಣಿ ಸಂಖ್ಯೆ: 08539-230192 ಗೆ ಕರೆ ಮಾಡಿ ದೂರನ್ನು ದಾಖಲಿಸಿ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬಹುದು ಎಂದು ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಾರಟಗಿ ಪುರಸಭೆಯಲ್ಲಿ ಸಹಾಯವಾಣಿ ಕೇಂದ್ರ ಆರಂಭಮ :
ಜಿಲ್ಲಾಧಿಕಾರಿಗಳ ಸೂಚನೆಯಂತೆ ಸಾರ್ವಜನಿಕರಿಗೆ ಕುಡಿಯುವ ನೀರಿನ ಯಾವುದೇ ಸಮಸ್ಯೆಗಳು ಆಗಬಾರದೆಂಬ ದೃಷ್ಟಿಯಿಂದ ಕಾರಟಗಿ ಪುರಸಭೆ ಕಾರ್ಯಾಲಯದಲ್ಲಿ ಸಹಾಯವಾಣಿ ಕೇಂದ್ರವನ್ನು ಸ್ಥಾಪಿಸಲಾಗಿದೆ.
ಪುರಸಭೆ ವ್ಯಾಪ್ತಿಯ ಸಾರ್ವಜನಿಕರು ಬೇಸಿಗೆಯಲ್ಲಿ ನೀರಿನ ಯಾವುದೇ ಸಮಸ್ಯೆಗಳು ಇದ್ದಲ್ಲಿ ಸಹಾಯವಾಣಿ ಸಂಖ್ಯೆ: 08533-274232 ಗೆ ಕರೆ ಮಾಡಿ ದೂರು ದಾಖಲಿಸಿ ಪರಿಹಾರವನ್ನು ಪಡೆದುಕೊಳ್ಳಬಹುದು.
ಸಾರ್ವಜನಿಕರು ಇದರ ಸದುಪಯೋಗವನ್ನು ಪಡೆದುಕೊಳ್ಳುವಂತೆ ಕಾರಟಗಿ ಪುರಸಭೆಯ ಮುಖ್ಯಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
