ನ.28 ರಂದು ಬಳ್ಳಾರಿ ಮಹಾನಗರ ಪಾಲಿಕೆಯ ಮೇಯರ್ ಸ್ಥಾನಕ್ಕೆ ಚುನಾವಣೆ

ಪಾಲಿಕೆ ಸುತ್ತ-ಮುತ್ತ 500 ಮೀ ನಿಷೇಧಾಜ್ಞೆ ಜಾರಿಗೊಳಿಸಿ ಡಿಸಿ ಪ್ರಶಾಂತ್ ಕುಮಾರ್ ಮಿಶ್ರಾ ಆದೇಶ

ಕರುನಾಡ ಬೆಳಗು ಸುದ್ದಿ

ಬಳ್ಳಾರಿ, ೨೨- ಇದೇ ನ.28ರಂದು ಬಳ್ಳಾರಿ ಮಹಾನಗರ ಪಾಲಿಕೆಯ 22ನೇ ಅವಧಿಯ ಮೇಯರ್ ಸ್ಥಾನಕ್ಕೆ ಚುನಾವಣೆ ನಡೆಯಲಿದ್ದು, ಅಂದು ಮಹಾನಗರ ಪಾಲಿಕೆ ಸುತ್ತ ಮುತ್ತ 500 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಆದೇಶಿಸಿದ್ದಾರೆ.

ಚುನಾವಣೆಯ ದಿನದಂದು ಹೆಚ್ಚಿನ ಸಂಖ್ಯೆಯಲ್ಲಿ ಜನರು ಆಗಮಿಸುವುದರಿಂದ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಶಾಂತಿಯುತವಾಗಿ ಚುನಾವಣೆ ನಡೆಸಲು ಸಿಆರ್‌ಪಿಸಿ ಕಾಯ್ದೆ 1973 ಕಲಂ 144 ರಲ್ಲಿ ಪ್ರದತ್ತವಾದ ಅಧಿಕಾರ ಚಲಾಯಿಸಿ ಜಿಲ್ಲಾ ದಂಡಾಧಿಕಾರಿಯೂ ಆಗಿರುವ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಆದೇಶ ಹೊರಡಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!