0861f08b-961c-41a1-a71a-27dbc1f65129

ಪುಸ್ತಕ ಓದಿದಷ್ಟು ಜ್ಞಾನ ವೃದ್ಧಿ

ಕ್ರಿಯಾಶೀಲ ಶಿಕ್ಷಕರ ವೇದಿಕೆ ಬಳ್ಳಾರಿ ಜಿಲ್ಲಾ ಘಟಕದ ಅಧ್ಯಕ್ಷ ರವಿ ಚೇಳ್ಳಗುರ್ಕಿ

ಕರುನಾಡ ಬೆಳಗು ಸುದ್ದಿ

ಬಳ್ಳಾರಿ,  ೦೫-  ಮಕ್ಕಳು ಮನೆ, ಶಾಲೆ, ಹಾಗೂ ಗ್ರಂಥಾಲಯಗಳಲ್ಲಿ ಪುಸ್ತಕಗಳನ್ನು ಓದಿದಷ್ಟು ಬುದ್ಧಿ ಹಾಗೂ ಜ್ಞಾನ ವೃದ್ಧಿಯಾಗುತ್ತದೆ ಎಂದು ಕರ್ನಾಟಕ ರಾಜ್ಯ ಕ್ರಿಯಾಶೀಲ ಶಿಕ್ಷಕರ ವೇದಿಕೆ ಬಳ್ಳಾರಿ ಜಿಲ್ಲಾ ಘಟಕದ ಅಧ್ಯಕ್ಷ ರವಿಚೇಳ್ಳಗುರ್ಕಿ ಹೇಳಿದರು.
ತಾಲೂಕಿನ ಸಂಜೀವರಾಯನಕೋಟೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗಣಿತ ಹಾಗೂ ವಿಜ್ಞಾನ ಕ್ವಿಜ್ ನಲ್ಲಿ ಜಯಗಳಿಸಿದ ಮಕ್ಕಳಿಗೆ ಹಮ್ಮಿಕೊಂಡಿದ್ದ ಬಹುಮಾನ ವಿತರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಬಹುಮಾನ ವಿತರಣೆ ಮಾಡಿ ಮಾತನಾಡಿದ ಅವರು ಗಣಿತ ಹಾಗೂ ವಿಜ್ಞಾನ ವಿಷಯಗಳು ಪ್ರತಿದಿನದ ಜೀವನದಲ್ಲಿ ಹಾಸುಹೊಕ್ಕಾಗಿವೆ.
ಆದ್ದರಿಂದ ಚಿಕ್ಕಂದಿನಿಂದಲೂ ಸರಳ ಲೆಕ್ಕ, ಸೂತ್ರ, ಪ್ರಮೇಯ, ಪ್ರಯೋಗ, ಸಮೀಕರಣ,ಸಂಕೇತ, ಧಾತುಗಳ ಹೆಸರುಗಳನ್ನು ನೆನಪಿಟ್ಟುಕೊಳ್ಳುವುದರೊಂದಿಗೆ ಅಳವಡಿಸಿಕೊಳ್ಳಬೇಕು. ಜೊತೆಗೆ ವೈಜ್ಞಾನಿಕ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಹೇಳಿದರು.
ವಿಜೇತ ವಿದ್ಯಾರ್ಥಿಗಳಾದ ಅಗಸರ ಪ್ರೇಮ, ಅಗಸರ ಸಂಗೀತ ಹಾಗೂ ಅಗಸರ ರಕ್ಷಿತಾ ಅವರಿಗೆ ಬಹುಮಾನ ವಿತರಿಸಲಾಯಿತು.ಶಿಕ್ಷಕರಾದ ವಿ.ಬಸವರಾಜ, ದಿಲ್ಷಾದ್ ಬೇಗಂ, ಚನ್ನಮ್ಮ, ಸುಮತಿ,ಸುಧಾ, ವೈಶಾಲಿ,ಶ್ವೇತಾ, ಉಮ್ಮೆಹಾನಿ, ಶಶಮ್ಮ, ರಾಮಾಂಜಿನೇಯ ಹಾಗೂ ವಿದ್ಯಾರ್ಥಿ ಪ್ರತಿನಿಧಿ ಮಹೇಶ ಮುಂತಾದವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!