ಪ್ರತಿಯೊಬ್ಬ ಕೂಲಿಕಾರರು ತಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ : ರತ್ನಮ್ಮ ಗುಂಡಣ್ಣನವರ್
ಕರುನಾಡ ಬೆಳಗು ಸುದ್ದಿ
ಯಲಬುರ್ಗಾ, 3- ಪ್ರತಿಯೊಬ್ಬರು ತಮ್ಮ ಸುತ್ತ ಮುತ್ತಲಿನ ಪ್ರದೇಶವನ್ನು ಸ್ವಚ್ಛತಯಾಗಿಡಬೇಕು ಮಳೆಗಾಲದ ಸಂದರ್ಭದಲ್ಲಿ ಚೆರಂಡಿ ನೀರು ರೋಡ್ ಮೇಲೆ ನಿಂತು ಅಲ್ಲಲ್ಲಿ ಮಳೆನೀರು ನಿಂತು ಸೊಳ್ಳೆಗಳು ಉತ್ಪತ್ತಿಯಾಗಿ ಚಿಕ್ಕನ್ ಗುನ್ಯಾ, ಡೆಂಗ್ಯು ನಂತ ರೋಗಗಳಿಗೆ ಬಲಿಯಾಗದಂತೆ ಮುನ್ನೆಚ್ಚರಿಕೆ ವಹಿಸುವ ಮೂಲಕ ಪ್ರತಿಯೊಬ್ಬರು ತಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸಿಬೇಕು ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಾದ ರತ್ನಮ್ಮ ಗುಂಡಣ್ಣನವರ್ ಸಲಹೆ ನೀಡಿದರು.
ತಾಲೂಕಿನ ಹಿರೇಮ್ಯಾಗೇರಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಎಚ್.ಸೋಂಪುರ ಗ್ರಾಮದಲ್ಲಿ ನರೇಗಾ ಯೋಜನೆಯಡಿ ನಡೆಯುತ್ತಿರುವ ನಾಲಾ ಹೂಳೆತ್ತುವ ಕಾಮಗಾರಿ ಸ್ಥಳದಲ್ಲಿ ಅಕುಶಲ ಕೂಲಿಕಾರರಿಗಾಗಿ ಆಯೋಜಿಸಿದ್ದ ಆರೋಗ್ಯ ತಪಾಸಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಪ್ರತಿಯೊಬ್ಬರು ತಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು. ಮಾರಕ ರೋಗಗಳಿಗೆ ತುತ್ತಾಗದಂತೆ ನೋಡಿಕೊಳ್ಳಬೇಕು. ಉದ್ಯೋಗ ಖಾತ್ರಿ ಕೆಲಸಕ್ಕೆ ಬರುವ ಎಲ್ಲಾ ಕೂಲಿಕಾರರ ಆರೋಗ್ಯ ತಪಾಸಣೆಯನ್ನು ಮಾಡಿಸಲಾಗುತ್ತಿದೆ. ಇದರ ಸದುಪಯೋಗವನ್ನು ಎಲ್ಲರೂ ಪಡೆದುಕೊಳ್ಳಬೇಕು ಎಂದರು.
ಈ ಸಂದರ್ಭದಲ್ಲಿ ತಾಲೂಕು ಐಇಸಿ ಸಂಯೋಜಕರಾದ ಶರಣಪ್ಪ ಹಾಳಕೇರಿ. ಗ್ರಾ.ಪಂ ಅಧ್ಯಕ್ಷರಾದ ಕಳಕಪ್ಪ ಎಚ್, ಆರೋಗ್ಯ ಸಿಬ್ಬಂದಿಗಳು ಗ್ರಾಪಂ ಸಿಬ್ಬಂದಿಗಳು, ಗ್ರಾಮ ಕಾಯಕ ಮಿತ್ರರು, ಕೂಲಿಕಾರರು ಮತ್ತು ಇತರರು ಭಾಗವಹಿಸಿದ್ದರು.

